ತ್ಯಾಜ್ಯ ಉತ್ಪಾದಕರಿಂದ ಆಸ್ತಿ ತೆರಿಗೆಯೊಂದಿಗೆ ಸೇವಾ ಶುಲ್ಕ ಸಂಗ್ರಹಿಸಲು ಬಿಬಿಎಂಪಿ ನಿರ್ಧಾರ

Date:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ತ್ಯಾಜ್ಯ ಉತ್ಪಾದಕರಿಂದ ಬಳಕೆದಾರರ ಶುಲ್ಕ(ಸೇವಾ ಶುಲ್ಕ)ವನ್ನು ಆಸ್ತಿ ತೆರಿಗೆಯೊಂದಿಗೆ ಸಂಗ್ರಹಿಸಲು ಬಿಬಿಎಂಪಿ ನಿರ್ಧರಿಸಿದೆ.

ಪಾಲಿಕೆಯ ವ್ಯಾಪ್ತಿಯಲ್ಲಿನ ವಾಣಿಜ್ಯ/ಸಾಂಸ್ಥಿಕ/ಬೃಹತ್ ತ್ಯಾಜ್ಯ ಉತ್ಪಾದಕರು ಪ್ರಕಟಣೆ ಹೊರಡಿಸಿದ 30 ದಿನಗಳೊಳಗೆ ನೋಟರೈಸ್ಡ್ ಪ್ರಮಾಣ ಪತ್ರ/ಅಫಿಡವಿಟ್ ಅನ್ನು ಭರ್ತಿ ಮಾಡಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತಕ್ಕೆ ಸಲ್ಲಿಸಬೇಕು. ಪ್ರಮಾಣಪತ್ರವನ್ನು ಬಿಬಿಎಂಪಿ ವೆಬ್‌ಸೈಟ್‌ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಘನತ್ಯಾಜ್ಯ ನಿರ್ವಹಣಾ ನಿಯಮಗಳು-2016ರ ನಿಯಮ-4(3)ರ ಪ್ರಕಾರ, ಘನತ್ಯಾಜ್ಯ ನಿರ್ವಹಣಾ ಬೈ-ಲಾಗಳಲ್ಲಿ ಸೂಚಿಸಿರುವ ಬಳಕೆದಾರರ ಶುಲ್ಕ(ಸೇವಾ ಶುಲ್ಕ)ವನ್ನು ತ್ಯಾಜ್ಯ ಉತ್ಪಾದಕರು ಸುಂಕದ ರೂಪದಲ್ಲಿ ಪಾವತಿಸಬೇಕು. ಅಲ್ಲದೆ, ನಿಯಮ-15(ಎಫ್) ಪ್ರಕಾರ, ನಗರ ಸ್ಥಳೀಯ ಸಂಸ್ಥೆಗಳು ತ್ಯಾಜ್ಯ ಉತ್ಪಾದಕರಿಂದ ಬಳಕೆದಾರರ ಶುಲ್ಕ(ಸೇವಾ ಶುಲ್ಕ)ವನ್ನು ಸಂಗ್ರಹಿಸಬೇಕು. ಅದರಂತೆ, ಈ ಶುಲ್ಕವನ್ನು ಆಸ್ತಿ ತೆರಿಗೆ ಜೊತೆ ಸಂಗ್ರಹಿಸಲು ಬಿಬಿಎಂಪಿ ನಿರ್ಧರಿಸಿದೆ ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ತಲೆಮರೆಸಿಕೊಂಡಿದ್ದ ಮೂವರು ರೌಡಿಶೀಟರ್​ಗಳ​ ಬಂಧಿಸಿದ ಸಿಸಿಬಿ ಪೊಲೀಸರು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಯ್ದೆ-2020ರ ಕಲಂ 285ರಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತವು ತ್ಯಾಜ್ಯ ಉತ್ಪಾದಕರಿಂದ ಬಳಕೆದಾರರ ಶುಲ್ಕ(ಸೇವಾ ಶುಲ್ಕ)ವನ್ನು ಆಸ್ತಿ ತೆರಿಗೆಯೊಂದಿಗೆ ಸಂಗ್ರಹಿಸುವ ಕುರಿತು ನಿರ್ಣಯಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಪಾಲಿಕೆಯ ವ್ಯಾಪ್ತಿಯಲ್ಲಿನ ವಾಣಿಜ್ಯ/ಸಾಂಸ್ಥಿಕ/ಬೃಹತ್ ತ್ಯಾಜ್ಯ ಉತ್ಪಾದಕರು 30 ದಿನಗಳ ಒಳಗೆ ಪ್ರಮಾಣಪತ್ರವನ್ನು ಬೆಂಗಳೂರಿನ ವಸಂತನಗರದಲ್ಲಿರುವ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತದ ಕಚೇರಿಗೆ ಸಲ್ಲಿಸಬೇಕು ಎಂದು ಸೂಚನೆ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...