ಬೆಳಗಾವಿಯಲ್ಲಿ ‘ಚಳಿಗಾಲ’ ಬದಲು ಮುಂಗಾರು ಅಧಿವೇಶನ: ಸ್ಪೀಕರ್‌ ಯು ಟಿ ಖಾದರ್‌

Date:

ವಿಧಾನಮಂಡಲದ ಚಳಿಗಾಲದ ಅಧಿವೇಶನ ಬದಲು ಮುಂಗಾರು ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸಬೇಕೆಂಬ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಸ್ಪೀಕರ್‌ ಯು ಟಿ ಖಾದರ್‌ ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ಕಾರ್ಯಕ್ರಮಗಳು, ಮದುವೆ ಇತ್ಯಾದಿ ಕಾರಣಗಳಿಂದ ಬೆಳಗಾವಿಯಲ್ಲಿ ಲಾಡ್ಜ್‌, ಹೊಟೇಲ್‌ಗಳು ಬುಕ್‌ ಆಗಿರುತ್ತವೆ. ಶಾಸಕರಿಗೂ ಇದೇ ಸಮಸ್ಯೆ ಎದುರಾಗುತ್ತದೆ. ಹೀಗಾಗಿ ಮಳೆಗಾಲದಲ್ಲಿ ಅಧಿವೇಶನ ನಡೆಸಬೇಕೆಂಬ ಚರ್ಚೆ ನಡೆಯುತ್ತಿದೆ. ಆದರೆ, ಪ್ರತಿಭಟನೆಯನ್ನು ತಡೆಯಬೇಕೆಂಬ ಉದ್ದೇಶದಿಂದ ಅಲ್ಲ. ಪ್ರತಿಭಟನೆಗಳು ಪ್ರಜಾಪ್ರಭುತ್ವದ ಸೌಂದರ್ಯ ಎಂದು ಅಭಿಪ್ರಾಯಪಟ್ಟರು.

23 ವಿಧೇಯಕಕ್ಕೆ ಒಪ್ಪಿಗೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಅಧಿವೇಶನದಲ್ಲಿ ಒಟ್ಟು 23 ವಿಧೇಯಕಗಳನ್ನು ಪರ್ಯಾಲೋಚಿಸಿ ಅಂಗೀಕರಿಸಲಾಗಿದೆ. ಉತ್ತರ ಕರ್ನಾಟಕದ ಚರ್ಚೆಯಲ್ಲಿ 39 ಸದಸ್ಯರು ಸುಮಾರು 17 ಗಂಟೆ 2 ನಿಮಿಷ ಮಾತನಾಡಿದ್ದಾರೆ. 22 ಅರ್ಜಿಗಳನ್ನು ಸದನಕ್ಕೆ ಒಪ್ಪಿಸಲಾಗಿದೆ. 1974 ಲಿಖಿತ ಪ್ರಶ್ನೆಗಳ ಪೈಕಿ 1750 ಪ್ರಶ್ನೆಗಳಿಗೆ ಉತ್ತರ ನೀಡಲಾಗಿದೆ. ಸದನದಲ್ಲಿ ಉತ್ತರಿಸಬೇಕಾದ 135 ಪ್ರಶ್ನೆಗಳ ಪೈಕಿ 134ಕ್ಕೆ ಉತ್ತರ ಒದಗಿಸಲಾಗಿದೆ. 368 ಗಮನ ಸೆಳೆಯುವ ಸೂಚನೆಗಳ ಪೈಕಿ 228ಕ್ಕೆ ಉತ್ತರ ನೀಡಲಾಗಿದೆ. 7 ನಿರ್ಣಯಗಳು ಅಂಗೀಕಾರಗೊಂಡಿವೆ ಎಂದು ತಿಳಿಸಿದರು.

30,010 ಜನರಿಂದ ವೀಕ್ಷಣೆ

ಈ ಬಾರಿಯ ಕಲಾಪವನ್ನು ಒಟ್ಟು 30,010 ಜನರು ವೀಕ್ಷಣೆ ಮಾಡಿದ್ದಾರೆ. ಈ ಪೈಕಿ 14462 ಶಾಲಾ ವಿದ್ಯಾರ್ಥಿಗಳಾಗಿದ್ದು, ಅವರೆಲ್ಲರಿಗೂ ಉತ್ತಮ ಅವಕಾಶ ಕಲ್ಪಿಸಲಾಗಿದೆ. ಜಗತ್ತಿನ ಎರಡನೇ ಅತಿದೊಡ್ಡ ಧ್ವಜವನ್ನು ಈ ಸಂದರ್ಭದಲ್ಲಿ ಅನಾವರಣ ಮಾಡಿದ್ದೇವೆ ಎಂದು ಸ್ಪೀಕರ್‌ ಹೇಳಿದರು.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ತಪ್ಪು ಉತ್ತರ ನೀಡಿದ್ದರಿಂದ ಸದನವನ್ನು ತಪ್ಪು ದಾರಿಗೆ ಎಳೆದಂತಾಗಲಿಲ್ಲವೇ ಎಂಬ ಪ್ರಶ್ನೆಗೆ, ತಪ್ಪು ಮಾಹಿತಿ ಕೊಟ್ಟಿದ್ದಾರೆ ಎಂಬ ಕಾರಣಕ್ಕೇ ಅವರು ಮರುದಿನ ಸದನದಲ್ಲಿ ಕ್ಷಮೆ ಹಾಗೂ ವಿಷಾದ ವ್ಯಕ್ತಪಡಿಸಿಲ್ಲವೇ ಎಂದು ಪ್ರಶ್ನಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೇರಳಕ್ಕೂ ಕಾಲಿಟ್ಟಿತು, ಕೋಮುದ್ವೇಷಿ ಗುಂಪುಹತ್ಯೆಯ ಪಿಡುಗು!

ದ್ವೇಷ ಭಾಷಣ ವಿಧೇಯಕ ಅಂಗೀಕಾರಕ್ಕೆ ಗಡಿಬಿಡಿ ಮಾಡಿಲ್ಲ

ದ್ವೇಷಭಾಷಣ ವಿಧೇಯಕ ಅಂಗೀಕಾರ ಸಂದರ್ಭದಲ್ಲಿ ನಾನು ಗಡಿಬಿಡಿ ಮಾಡಿಲ್ಲ, ಚರ್ಚೆಯನ್ನು ಮೊಟಕೂ ಮಾಡಿಲ್ಲ ಎಂದು ಸ್ಪೀಕರ್ ಯು.ಟಿ.ಖಾದರ್‌ ಸ್ಪಷ್ಟಪಡಿಸಿದ್ದಾರೆ.

ವಿಪಕ್ಷಗಳು ಬಯಸಿದ ರೀತಿಯಲ್ಲಿ ನಾನು ಸುದೀರ್ಘ ಚರ್ಚೆಗೆ ಅವಕಾಶ ಕಲ್ಪಿಸಿದ್ದೆ. ಆದರೆ, ಸಚಿವರೊಬ್ಬರು ನೀಡಿದ ಹೇಳಿಕೆಯನ್ನು ಮುಂದಿಟ್ಟುಕೊಂಡು ಹಿಂದಿನ ಸಾಲಿನಲ್ಲಿ ಕುಳಿತಿದ್ದ ಬಿಜೆಪಿ ಶಾಸಕರು ಬಾವಿಗೆ ನುಗ್ಗಿ ಪ್ರತಿಭಟನೆ ನಡೆಸಿದರು. ವಿಪಕ್ಷ ನಾಯಕರು ಚರ್ಚೆ ನಡೆಸುತ್ತಿರುವಾಗ ಶಾಸಕರು ಈ ರೀತಿ ಮಾಡುವುದು ಸಮಂಜಸವೇ? ಎಂದು ಪ್ರಶ್ನಿಸಿದರು.

ವಿಧೇಯಕದ ಬಗ್ಗೆ ಚರ್ಚೆ ಮಾಡಲೇಬೇಕೆಂಬ ಮನಸ್ಸಿದ್ದರೆ ಅವರು ವಿಪಕ್ಷ ನಾಯಕರ ಚರ್ಚೆಗೆ ಅವಕಾಶ ನೀಡಬೇಕಿತ್ತು. ಪ್ರತಿಭಟನೆ ನಡೆಸುವುದಿದ್ದರೂ ಹಿರಿಯ ಶಾಸಕರು ಹಾಗೂ ನಾಯಕರ ಅಭಿಪ್ರಾಯ ಕೇಳಿ ವ್ಯವಸ್ಥಿತ ರೀತಿಯಲ್ಲಿ ಮಾಡಬೇಕಿತ್ತು. ನಾನು ಈ ವಿಚಾರದಲ್ಲಿ ಗಡಿಬಿಡಿ ಮಾಡಿಲ್ಲ. ನಿಯಮದಂತೆ ನಡೆದುಕೊಂಡಿದ್ದೇನೆ ಎಂದು ಖಾದರ್‌ ಸ್ಪಷ್ಟಪಡಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...