ಬೆಳಗಾವಿ ಅಧಿವೇಶನ | ಸಹಕಾರಿ ಸಂಘಗಳಲ್ಲಿನ ಅವ್ಯವಹಾರಕ್ಕೆ ಕಡಿವಾಣ: ಕೆ ಎನ್ ರಾಜಣ್ಣ

Date:

ಸಹಕಾರಿ ಲೆಕ್ಕ ಪರಿಶೋಧನಾ ಇಲಾಖೆಯಿಂದ ಸರ್ಕಾರಕ್ಕೆ ನಿರೀಕ್ಷಿತ ಆದಾಯ ಬರುವಂತೆ ಆಮೂಲಾಗ್ರ ಬದಲಾವಣೆ ತರಲು ಚಿಂತನೆ ನಡೆದಿದೆ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಹೇಳಿದರು.

ರಾಜ್ಯದಲ್ಲಿ 1679 ಸಹಕಾರ ಸಂಘಗಳಲ್ಲಿ ಅವ್ಯವಹಾರ ನಡೆದಿದೆ ಎನ್ನುವ ಮಾಹಿತಿ ಇದೆ. ಸಹಕಾರಿ ಸಂಘಗಳ ಸ್ಥಿತಿಗತಿಯನ್ನು ಗಮನಿಸಿ ಸರ್ಕಾರವು ಯಾವ ರೀತಿಯ ಸುಧಾರಣಾ ವ್ಯವಸ್ಥೆ ರೂಪಿಸಿದೆ ಎನ್ನುವ ವಿಧಾನ ಪರಿಷತ್ತಿನ ಭಾರತಿ ಶೆಟ್ಟಿ ಅವರ ಪ್ರಶ್ನೆಗೆ ಸಚಿವರು ಪ್ರತಿಕ್ರಿಯಿಸಿದರು.

“ಸಹಕಾರಿ ಕ್ಷೇತ್ರದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಎಲ್ಲ ರೀತಿಯ ಪ್ರಯತ್ನ ಮಾಡಲಾಗುತ್ತಿದೆ. ಇತ್ತೀಚಿಗೆ ಹಿರಿಯ ಸಹಕಾರಿಗಳೊಂದಿಗೆ ಸಭೆ ನಡೆಸಿ ಸಲಹೆ ಪಡೆಯಲಾಗಿದೆ. ಸಹಕಾರಿ ಸಂಘಗಳಲ್ಲಿನ ಹಣ ದುರುಪಯೋಗ, ಅವ್ಯವಹಾರಕ್ಕೆ ಕಡಿವಾಣ ಹಾಕಲಾಗುವುದು. ಸಹಕಾರಿಗಳು ಮೆಚ್ಚದ ಕೃತ್ಯಗಳಿಗೆ ಕಡಿವಾಣ ಹಾಕಲಾಗುವುದು” ಎಂದು ಸಚಿವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಹಕಾರಿ ಲೆಕ್ಕ ಪರಿಶೋಧನಾ ಇಲಾಖೆಯನ್ನು ಬಲಪಡಿಸಲು ನಾನಾ ಯೋಜನೆಗಳನ್ನು ರೂಪಿಸಲಾಗಿದೆ. 390 ಲೆಕ್ಕ ಪರಿಶೋಧಕರ ನೇಮಕಾತಿಗೆ ಪ್ರಸ್ತಾವನೆಯಿದ್ದು ಪರಿಶೀಲನಾ ಹಂತದಲ್ಲಿದೆ. 20 ಜನ ಲೆಕ್ಕ ಪರಿಶೋಧಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯು ಪ್ರಗತಿಯಲ್ಲಿರುತ್ತದೆ. ಅನುಕಂಪದ ಆಧಾರದ ಮೇಲೆ ವಿವಿಧ 55 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ” ಎಂದರು.

“ಸಹಕಾರಿ ಸಂಘಗಳಲ್ಲಿನ ಅವ್ಯವಹಾರವು ಮತ್ತೆ ಮತ್ತೆ ಪುನರಾವರ್ತನೆಯಾಗುತ್ತಿದೆ. ಈಗ ಸಿಎಗಳ ಸಂಖ್ಯೆ ಜಾಸ್ತಿ ಇರುವುದರಿಂದಾಗಿ ಅವ್ಯವಹಾರ ಕೂಡ ಹೆಚ್ಚಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು. ಅಪರ ನಿರ್ದೇಶಕ ಹುದ್ದೆಗಳನ್ನು ಮೇಲ್ದರ್ಜೇಗೇರಿಸಿ ಆಡಳಿತದಲ್ಲಿ ಬಿಗಿಕ್ರಮ ಜರುಗಿಸಬೇಕು” ಎಂದು ಭಾರತಿ ಶೆಟ್ಟಿ ಅವರು ಸಲಹೆ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...