ಬಳ್ಳಾರಿ | ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ; ಬಿಜೆಪಿ ಯುವ ಮುಖಂಡನ ಬಂಧನ

Date:

ಕರ್ನಾಟಕ ರಾಜ್ಯ ಬಿಜೆಪಿ ಯುವ ಮುಖಂಡ ಹಾಗೂ ಬಳ್ಳಾರಿ ಜಿಲ್ಲಾ ಪಂಚಾಯತಿ ಬಿಜೆಪಿ ಟಿಕೆಟ್ ಆಕಾಂಕ್ಷಿಯೂ ಆಗಿರುವ ದೇವು ನಾಯಕ ಎಂಬಾತ 7 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಆರೋಪ ಕೇಳಿಬಂದಿದೆ.

ಘಟನೆ ಜಿಲ್ಲೆಯ ಸಿರಗುಪ್ಪ ತಾಲೂಕಿನ ನಡುವಿ ಗ್ರಾಮದಲ್ಲಿ ನಡೆದಿದೆ. ಬೀದಿಯಲ್ಲಿ ಆಟವಾಡುತ್ತಿದ್ದ 7 ವರ್ಷದ ಬಾಲಕಿ ಕಣ್ಣಿಗೆ ಬಟ್ಟೆ ಕಟ್ಟಿ, ಆಕೆಯ ಬಾಯಿ ಮುಚ್ಚಿ ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರ ಮಾಡಿದ್ದಾನೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ. ಇನ್ನು ಕೃತ್ಯಕ್ಕೆ ಓರ್ವ ಮಹಿಳೆ ಕೂಡ ಸಾಥ್ ನೀಡಿದ್ದಾರೆ ಎನ್ನಲಾಗಿದೆ.

ಮುಂಬರುವ ಸ್ಥಳೀಯ ಚುನಾವಣೆಯಲ್ಲಿ ಆರೋಪಿ ದೇವು ನಾಯಕ ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿದ್ದಾನೆ. ಈ ಬಗ್ಗೆ ರಾಜ್ಯದ ಹಿರಿಯ ನಾಯಕರನ್ನು ಸಂಪರ್ಕ ಮಾಡಿ ಟಿಕೆಟ್‌ಗಾಗಿ ಭಾರೀ ಲಾಬಿ ನಡೆಸುತ್ತಿದ್ದನು. ಜೊತೆಗೆ, ಬಿಜೆಪಿ ಸೋಷಿಯಲ್ ಮೀಡಿಯಾ ಹ್ಯಾಂಡಲ್ ಮಾಡುತ್ತಿದ್ದಾನೆ. ಆರೋಪಿ ದೇವು ನಾಯಕ ತನ್ನ ಸಾಮಾಜಿಕ ಜಾಲತಾಣದಲ್ಲಿ ರಾಜ್ಯ ಹಾಗೂ ರಾಷ್ಟ್ರೀಯ ಮುಖಂಡರ ಜತೆ ಇರುವ ಫೋಟೋ ಹಂಚಿಕೊಳ್ಳುತ್ತಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಘಟನೆಯ ಬೆನ್ನಲ್ಲಿಯೇ ಸಂತ್ರಸ್ತ ಬಾಲಕಿಯ ಕುಟುಂಬಸ್ಥರು ಸಿರಿಗೇರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ಬಳ್ಳಾರಿ | ಮಹನೀಯರ ಜಯಂತಿ ಅದ್ದೂರಿ ಆಚರಣೆ: ಡಿಸಿ ಪ್ರಶಾಂತ್‌ ಮಿಶ್ರಾ

ಪ್ರಕರಣ ದಾಖಲಾದ ಬೆನ್ನಲ್ಲಿಯೇ ಸಿರಿಗೇರಿ ಠಾಣೆ ಪೊಲೀಸರು ಬಿಜೆಪಿ ಮುಖಂಡನನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಜೊತೆಗೆ, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ತನಿಖೆ ಮುಂದುವರೆಸಿದ್ದಾರೆ. ಈ ಸಂಬಂಧ ಸಿರಿಗೇರಿ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಪೊಲೀಸರು ದೇವು ನಾಯಕನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...