GBA ಚುನಾವಣೆ: ಇವಿಎಂ ಬದಲು ‘ಮತಪತ್ರ’ ಬಳಕೆ; ಕರಡು ಪಟ್ಟಿಯಲ್ಲಿ 88.91 ಲಕ್ಷ ಮತದಾರರು

Date:

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಗೆ ಒಳಪಡುವ ಹೊಸದಾಗಿ ರಚಿಸಲಾದ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ (ಇವಿಎಂ) ಬದಲಿಗೆ ಸಾಂಪ್ರದಾಯಿಕ ‘ಮತಪತ್ರ’ (ಬ್ಯಾಲೆಟ್ ಪೇಪರ್) ಮೂಲಕ ನಡೆಸಲಾಗುವುದು ಎಂದು ರಾಜ್ಯ ಚುನಾವಣಾ ಆಯುಕ್ತ ಜಿ ಎಸ್ ಸಂಗ್ರೇಶಿ ತಿಳಿಸಿದ್ದಾರೆ. ಇದೇ ವೇಳೆ ವಾರ್ಡ್‌ವಾರು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಜಿಬಿಎ ಬ್ಯಾಪ್ತಿಯಲ್ಲಿ ಒಟ್ಟು 88.91 ಲಕ್ಷ ಮತದಾರರಿದ್ದಾರೆ.

​ಮತಪತ್ರ ಬಳಕೆ ಏಕೆ?
ಜಿಬಿಎ ಕಾಯ್ದೆಯ ಅನ್ವಯ ಚುನಾವಣೆಯಲ್ಲಿ ಮತಪತ್ರ ಅಥವಾ ಇವಿಎಂ ಎರಡನ್ನೂ ಬಳಸಲು ಅವಕಾಶವಿದೆ. “ಮತಪತ್ರಗಳ ಬಳಕೆಗೆ ಯಾವುದೇ ಕಾನೂನು ಅಡ್ಡಿಯಿಲ್ಲ ಮತ್ತು ನ್ಯಾಯಾಲಯದ ನಿರ್ದೇಶನಗಳೂ ಇಲ್ಲದಿರುವುದರಿಂದ, ಈ ಬಾರಿ ನಾವು ಮತಪತ್ರಗಳ ಮೂಲಕವೇ ಚುನಾವಣೆ ನಡೆಸಲಿದ್ದೇವೆ,” ಎಂದು ಆಯುಕ್ತರು ಸ್ಪಷ್ಟಪಡಿಸಿದರು.

​ಚುನಾವಣಾ ವೇಳಾಪಟ್ಟಿಯ ಬಗ್ಗೆ ಮಾಹಿತಿ ನೀಡಿದ ಆಯುಕ್ತರು, ಮೇ 25 ರ ನಂತರ ಹಾಗೂ ಜೂನ್ 30 ರೊಳಗೆ ನಾಗರಿಕ ಸಂಸ್ಥೆಯ ಚುನಾವಣೆಗಳನ್ನು ನಡೆಸಲಾಗುವುದು ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

​ಐದು ಪಾಲಿಕೆಗಳು, 369 ವಾರ್ಡ್‌ಗಳು
ಈ ಕರಡು ಮತದಾರರ ಪಟ್ಟಿಯು ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಪಶ್ಚಿಮ ಎಂಬ ಐದು ಹೊಸ ನಗರ ಪಾಲಿಕೆಗಳ ವ್ಯಾಪ್ತಿಯ ಒಟ್ಟು 369 ವಾರ್ಡ್‌ಗಳನ್ನು ಒಳಗೊಂಡಿದೆ.

​ಬೃಹತ್ ಬೆಂಗಳೂರು ಪ್ರಾಧಿಕಾರದ ವಿಶೇಷ ಆಯುಕ್ತ ಆರ್. ರಾಮಚಂದ್ರನ್ ಅವರು ನೀಡಿದ ಅಂಕಿಅಂಶಗಳ ಪ್ರಕಾರ, ಜಿಬಿಎ ವ್ಯಾಪ್ತಿಯಲ್ಲಿ ​ಪುರುಷರು: 45,69,193
​ಮಹಿಳೆಯರು: 43,20,583, ​ಇತರರು: 1,635 ಮತರಾರರಿದ್ದಾರೆ.

ಮುಂದೆ ಓದಿ? ಈ ದಿನ ಸಂಪಾದಕೀಯ | ಪ್ರಾದೇಶಿಕ ಪಕ್ಷಗಳನ್ನು ನುಂಗುವ ಬಿಜೆಪಿ ತಂತ್ರ ಅರಿಯಲು ಜೆಡಿಎಸ್‌ಗೆ ಸಕಾಲ!

ಪರಿಷ್ಕರಣೆ ಮತ್ತು ವೇಳಾಪಟ್ಟಿ
ಮತದಾರರ ಪಟ್ಟಿ ಪರಿಷ್ಕರಣೆಯ ಭಾಗವಾಗಿ, ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) 2026ರ ಜನವರಿ 20 ರಿಂದ ಫೆಬ್ರವರಿ 3ರವರೆಗೆ ಮನೆ-ಮನೆಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ. ಈ ಅವಧಿಯಲ್ಲಿ ಮತದಾರರು ತಮ್ಮ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಬಹುದು.

​ಆಕ್ಷೇಪಣೆಗಳ ವಿಲೇವಾರಿ: ಫೆಬ್ರವರಿ 4 ರಿಂದ ಫೆಬ್ರವರಿ 18 ರವರೆಗೆ.
​ಅಂತಿಮ ಮತದಾರರ ಪಟ್ಟಿ ಪ್ರಕಟಣೆ: ಮಾರ್ಚ್ 16, 2026.

ಅತಿ ಹೆಚ್ಚು-ಕಡಿಮೆ ಮತದಾರರಿರುವ ವಾರ್ಡ್‌ಗಳು
​ಗರಿಷ್ಠ: ಬೆಂಗಳೂರು ಪಶ್ಚಿಮ ಪಾಲಿಕೆಯ ವಾರ್ಡ್ ಸಂಖ್ಯೆ 23 ಅತಿ ಹೆಚ್ಚು ಮತದಾರರನ್ನು (49,530) ಹೊಂದಿದೆ.
​ಕನಿಷ್ಠ: ಬೆಂಗಳೂರು ಪೂರ್ವ ಪಾಲಿಕೆಯ ವಾರ್ಡ್ ಸಂಖ್ಯೆ 16 ಅತಿ ಕಡಿಮೆ ಮತದಾರರನ್ನು (10,926) ಹೊಂದಿದೆ.
​ಚುನಾವಣಾ ಪ್ರಕ್ರಿಯೆಗೆ ಅನುಕೂಲವಾಗುವಂತೆ 369 ವಾರ್ಡ್‌ಗಳ ವ್ಯಾಪ್ತಿಯಲ್ಲಿ ಒಟ್ಟು 8,044 ಮತಗಟ್ಟೆಗಳನ್ನು ಸ್ಥಾಪಿಸಲು ಆಯೋಗ ನಿರ್ಧರಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

ನಾಪತ್ತೆಯಾದ ಪ್ರತಿ ಜೀವವೂ ಮರಳಿ ತನ್ನ ಮನೆ ಸೇರುವಂತಾಗಲು ಮತ್ತು ಮುಂದಿನ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉದ್ದಿಮೆ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ರಸರೆಕ್ಷನ್: ಇಂದ್ರಿಯಗಳ ಮೂಲಕ ಒಂದು ಶತಮಾನದ ಸಿನೆಮಾ ಪಯಣ ಬಿಡಿಸಿಡುವ ಚಿತ್ರ

'ರಸರೆಕ್ಷನ್' ಸಿನಿಮಾ ಅಂತಿಮವಾಗಿ ಹೇಳುವುದೇನೆಂದರೆ ಬದುಕು ಎಷ್ಟೇ ದೀರ್ಘವಾಗಿದ್ದರೂ, ಕನಸುಗಳಿಲ್ಲದಿದ್ದರೆ ಅದು...

ನ್ಯಾಯಾಲಯದ ಆಜ್ಞೆಗೆ ಕಿಮ್ಮತ್ತಿಲ್ಲ; ಮಾಹಿತಿ ನೀಡಲು ಬೆಸ್ಕಾಂ, ಜಲಮಂಡಳಿ ಅಧಿಕಾರಿಗಳ ಹಿಂದೇಟು

ಕರ್ನಾಟಕ ಉಚ್ಚ ನ್ಯಾಯಾಲಯ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಆಜ್ಞೆಗಳನ್ನು...