ಮನೆ ಮುಂದೆ ಆಟವಾಡುತ್ತಿದ್ದ 5 ವರ್ಷದ ಬಾಲಕ ಚರಂಡಿಗೆ ಬಿದ್ದು ದಾರುಣವಾಗಿ ಮೃತಪಟ್ಟಿರುವ ಘಟನೆನಡೆದಿದೆ.
ಬೀದರ್ ತಾಲೂಕಿನ ಮರ್ಜಾಪುರ(ಎಂ) ಗ್ರಾಮದಲ್ಲಿ ದುರ್ಘಟನೆ ನಡೆದಿದ್ದು, ಅವಿನಾಶ್ (5) ಮೃತ ಬಾಲಕ ಎಂದು ತಿಳಿದು ಬಂದಿದೆ.
ಹಬ್ಬದ ನಿಮಿತ್ತ ಅಜ್ಜಿ-ತಾತನ ಮನೆಗೆ ಬಾಲಕ ಆಟ ಆಡುವ ವೇಳೆ ಆಯತಪ್ಪಿ ಚರಂಡಿ ನೀರು ತುಂಬಿದ್ದ ಗುಂಡಿಗೆ ಬಿದ್ದಿದ್ದಾನೆ. ಬಾಲಕ ಮನೆಗೆ ಬಾರದೇ ಇದ್ದಾಗ ಗಾಬರಿಗೊಂಡ ಪೋಷಕರು ಹುಡುಕಾಡಿದ್ದಾರೆ.ಬಳಿಕ ಚರಂಡಿ ನೀರಿನಲ್ಲಿ ಬಾಲಕನ ಮೃತದೇಹ ಪತ್ತೆಯಾಗಿದೆ.
ಬಗದಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ತನಿಖೆ ಮುಂದುವರೆದಿದೆ.





