ಬೀದರ್‌ | ಈಶ್ವರ ಖಂಡ್ರೆ ರಾಜ್ಯದ ಮುಖ್ಯಮಂತ್ರಿಯಾಗಲಿ : ಬಸವಲಿಂಗ ಪಟ್ಟದ್ದೇವರು

Date:

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರಾಗಿರುವ ಈಶ್ವರ ಖಂಡ್ರೆ ಅವರು ಮುಂದಿನ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿ ಆಗಲಿ ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್‌ ಅಧ್ಯಕ್ಷರಾದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಆಶಯ ವ್ಯಕ್ತಪಡಿಸಿದರು.

ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮದಲ್ಲಿ ಹಿರೇಮಠ ಸಂಸ್ಥಾನ ಹಾಗೂ ಅಭಿನಂದನಾ ಸಮಿತಿಯಿಂದ ಸೋಮವಾರ ಸಂಜೆ ಆಯೋಜಿಸಿದ್ದ ಅಭಿನಂದನಾ ಸಮಾರಂಭದ ಸಾನಿಧ್ಯ ವಹಿಸಿ ಅವರು ಮಾತನಾಡಿದರು.

ʼಈಶ್ವರ ಖಂಡ್ರೆ ಅವರು ಸಚಿವರಾಗಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರಿಗೆ ಸಿಎಂ ಆಗುವ ಎಲ್ಲಾ ಅರ್ಹತೆಗಳಿವೆ. ಹಾಗಾಗಿ ಈಶ್ವರ ಖಂಡ್ರೆ ಅವರನ್ನು ಸಿಎಂ ಆಗಿ ನೋಡುವ ಈ ಭಾಗದ ಜನರ ಕನಸು ಆದಷ್ಟು ಬೇಗ ಈಡೇರಲಿʼ ಎಂದು
ಆಶಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಚಿವ ಈಶ್ವರ ಖಂಡ್ರೆ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿ, ʼರಾಜ್ಯದ ವೀರಶೈವ ಲಿಂಗಾಯತ ಸಮುದಾಯವನ್ನು ಒಳಪಂಗಡಗಳೊಂದಿಗೆ ಒಗ್ಗೂಡಿಸಿ ಬಲಿಷ್ಠ ಸಮಾಜ ನಿರ್ಮಾಣಕ್ಕೆ ಶ್ರಮಿಸುವೆ. ಪ್ರತಿಯೊಬ್ಬರೂ ಸ್ವಧರ್ಮದಲ್ಲಿ ನಿಷ್ಠೆ ಇಟ್ಟುಕೊಂಡು, ಪರಧರ್ಮಗಳಿಗೂ ಗೌರವ ತೋರಿಸಿ ಸುಂದರ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕುʼ ಎಂದು ಕರೆ ನೀಡಿದರು.

ʼಅಖಿಲ ಭಾರತ ಲಿಂಗಾಯತ ಮಹಾಸಭೆ 122 ವರ್ಷಗಳ ಇತಿಹಾಸ ಹೊಂದಿದ್ದು, ಇದುವರೆಗೆ 23 ಅಧ್ಯಕ್ಷರನ್ನು ಕಂಡಿದೆ. ಸಿರಸಂಗಿ ಲಿಂಗರಾಜ, ಶಿವಕುಮಾರ ಸ್ವಾಮೀಜಿ, ಶರಣಬಸಪ್ಪ ಅಪ್ಪ, ಭೀಮಣ್ಣ ಖಂಡ್ರೆ, ಶಾಮನೂರು ಶಿವಶಂಕರಪ್ಪ ಸೇರಿದಂತೆ ಅನೇಕರು ಮಹಾಸಭೆಗೆ ಶ್ರೇಷ್ಠ ಸೇವೆ ಸಲ್ಲಿಸಿದ್ದಾರೆ. ಇಂತಹ ಮಹಾಸಭೆಯ 24ನೇ ರಾಷ್ಟ್ರೀಯ ಅಧ್ಯಕ್ಷರಾಗಿ ಜವಾಬ್ದಾರಿ ವಹಿಸಿರುವುದು ಗೌರವದ ವಿಷಯ. ಮಠಾಧೀಶರ ಮಾರ್ಗದರ್ಶನ ಹಾಗೂ ಹಿರಿಯರ ಅನುಭವದೊಂದಿಗೆ ಸಮುದಾಯಕ್ಕೆ ಶಕ್ತಿ ತುಂಬುವ ಕೆಲಸ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ವಸತಿ ನಿಲಯಗಳನ್ನು ನಿರ್ಮಿಸಿ ಬಡ ಮಕ್ಕಳ ಶಿಕ್ಷಣಾಭಿವೃದ್ಧಿಗೆ ಶ್ರಮಿಸುವೆʼ ಎಂದು ಭರವಸೆ ನೀಡಿದರು.

ʼರಾಜಕೀಯವನ್ನು ಸಮಾಜ ಸೇವೆಯೆಂದು ಅರಿತು ನಮ್ಮ ತಂದೆ ಡಾ.ಭೀಮಣ್ಣ ಖಂಡ್ರೆ ರಾಜಕೀಯ ಪ್ರವೇಶಿಸಿದ್ದರು. ನಮ್ಮ ತಂದೆಯವರ ಮಾರ್ಗದರ್ಶನದಲ್ಲೇ ನಾನೂ ರಾಜಕೀಯಕ್ಕೆ ಬಂದಿದ್ದು, 2 ಬಾರಿ ಸಚಿವ ಹಾಗೂ 4 ಬಾರಿ ಶಾಸಕರಾಗಿ ಜನಸೇವೆಯಲ್ಲಿ ತೊಡಗಿದ್ದೇನೆ. ವ್ಯಕ್ತಿಗಳು ಹುಟ್ಟಿ ಅಳಿದು ಹೋಗುತ್ತಾರೆ, ಸಂಸ್ಥೆಗಳು ಹುಟ್ಟಿ ಸಾಯುತ್ತವೆ, ಸಾಮ್ರಾಜ್ಯಗಳು ಪತನವಾಗುತ್ತವೆ. ಆದರೆ ಮಾಡುವ ಸಮಾಜ ಸೇವೆ ಶಾಶ್ವತವಾಗಿ ಉಳಿಯುತ್ತದೆʼ ಎಂದು ಆಶಯ ವ್ಯಕ್ತಪಡಿಸಿದರು.

ನೇತ್ರತ್ವ ವಹಿಸಿದ ಗುರುಬಸವ ಪಟ್ಟದ್ದೇವರು ಮಾತನಾಡಿ, ʼಶತಮಾನೋತ್ಸವ ಕಂಡಿರುವ ವೀರಶೈವ ಲಿಂಗಾಯತ ಮಹಾಸಭೆಗೆ ಈಶ್ವರ ಖಂಡ್ರೆ ಅವರು ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಸಂತಸದ ಸಂಗತಿ. ಅವರ ಕಾರ್ಯಕಾಲದಲ್ಲಿ ಸಮುದಾಯ ಇನ್ನಷ್ಟು ಪ್ರಗತಿ ಕಾಣಲಿʼ ಎಂದು ಆಶಿಸಿದರು.

ʼಈಶ್ವರ ಖಂಡ್ರೆ ಅವರು ರಾಜಕೀಯ ಸೇವೆಯ ಜೊತೆಗೆ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕನ್ನಾಗಿ ಘೋಷಿಸುವ ಕಾರ್ಯ, ಅನುಭವ ಮಂಟಪ ಕಟ್ಟಡ ನಿರ್ಮಾಣಕ್ಕೆ ನೀಲನಕಾಶೆ ಹಾಗೂ ಅನುದಾನ ಬಿಡುಗಡೆ, ಬಸವಣ್ಣನವರ ಹೆಸರಿನಲ್ಲಿ ಉದ್ಯಾನವನ ನಿರ್ಮಾಣ ಸೇರಿದಂತೆ ಹಲವು ಕಾರ್ಯಗಳನ್ನು ಮಾಡಿದ್ದಾರೆʼ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಹಿರೇಮಠ ಸಂಸ್ಥಾನ ಹಾಗೂ ಅಭಿನಂದನಾ ಸಮಿತಿ ವತಿಯಿಂದ ಈಶ್ವರ ಖಂಡ್ರೆ ದಂಪತಿಗೆ ಸನ್ಮಾನಿಸಿ ಅಭಿನಂದನಾ ಪತ್ರ ನೀಡಿ ಆಶೀರ್ವದಿಸಲಾಯಿತು. ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಮಹಿಳೆಯರು ಸೇರಿದಂತೆ ಅಭಿಮಾನಿಗಳು ಸನ್ಮಾನಿಸಿದರು.

ಇದನ್ನೂ ಓದಿ : ಬೀದರ್‌ನಲ್ಲಿ ಫೆ.22 ರಂದು ಉದ್ಯೋಗ ಮೇಳ

ಅಭಿನಂದನಾ ಸಮಿತಿ ಅಧ್ಯಕ್ಷ ರಾಜಶೇಖರ ಅಷ್ಟೂರೆ ಅಧ್ಯಕ್ಷತೆ ವಹಿಸಿದರು. ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಡಾ.ಗೀತಾ ಈಶ್ವರ ಖಂಡ್ರೆ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ಸ್ವಾಗತಿಸಿದರು. ದೀಪಕ ಠಮಕೆ ನಿರೂಪಿಸಿದರು. ಸಂತೋಷ ಬಿಜಿ ಪಾಟೀಲ್ ವಂದಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಚನ ಸ್ತೋತ್ರ ಹಾಗೂ ಪ್ರಾರ್ಥನಾ ಗೀತೆಗಳನ್ನು ಪ್ರಸ್ತುತಪಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...