ಟೆಕ್ಕಿ ಸಾವು : ಪಿಯು ವಿದ್ಯಾರ್ಥಿಯಿಂದ ಅತ್ಯಾಚಾರ ಯತ್ನ, ಕೊಲೆ; ಪ್ರಬುದ್ಧ ಕೊಲೆ ನೆನಪಿಸಿದ ಪ್ರಕರಣ

Date:

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಮಣ್ಯ ಬಡಾವಣೆಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಜನವರಿ 3ರಂದು ಬೆಂಕಿ ಅವಘಢ ಸಂಭವಿಸಿದ್ದು, ಉಸಿರುಗಟ್ಟಿ ಟೆಕ್ಕಿ ಶರ್ಮಿಳಾ(34) ಮೃತ ಪಟ್ಟಿದ್ದರು ಎಂದು ಹೇಳಲಾಗಿತ್ತು. ಆದರೆ ಈ ಪ್ರಕರಣಕ್ಕೆ ಈಗ ತಿರುವು ಸಿಕ್ಕಿದೆ.

ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದ ಶರ್ಮಿಳಾ ಮನೆಯಲ್ಲಿ ಬೆಂಕಿ ಅವಘಡಕ್ಕೆ ಕಾರಣವೇನೆಂದು ತಿಳಿದು ಬಂದಿರಲಿಲ್ಲ. ಕಿಟಕಿ ತೆರೆದಿದ್ದರೂ ಶರ್ಮಿಳಾ ಉಸಿರುಗಟ್ಟಿ ಸಾವನ್ನಪ್ಪಿದ್ದು ಹೇಗೆ ಎಂಬ ಪ್ರಶ್ನೆಯೂ ಇತ್ತು. ಅದೇ ದಿನ ಅವರ ಮೊಬೈಲ್ ಫೋನ್ ಕಾಣೆಯಾಗಿತ್ತು. ಇದೀಗ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ, ಆಕೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ನೆರೆ ಮನೆಯಲ್ಲಿ ವಾಸಿಸುತ್ತಿದ್ದ 18 ವರ್ಷದ ಕೊಡಗಿನ ಕರ್ನಲ್ ಕುರೈ ಎಂಬ ದ್ವಿತೀಯ ಪಿಯುಸಿ ವಿದ್ಯಾರ್ಥಿ, ಶರ್ಮಿಳಾ ಅವರ ಮೇಲೆ ಅತ್ಯಾಚಾರ ನಡೆಸಿ ಹಾಗೂ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎಂಬ ಆರೋಪದ ಮೇಲೆ ಬಂಧಿಸಲಾಗಿದೆ. ಸಾಕ್ಷ್ಯಗಳನ್ನು ನಾಶಮಾಡಲು ಮತ್ತು ಕೊಲೆಯನ್ನು ಬೆಂಕಿ ಅಪಘಾತದ ಸಾವು ಎಂದು ಬಿಂಬಿಸಲು ಆತ ಪ್ರಯತ್ನಿಸಿದ್ದಾನೆ ಎಂದು ಪೊಲೀಸ್ ಮೂಲಗಳು ಹೇಳಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಕ್ಷಿಣ ಕನ್ನಡ ಮೂಲದ ಶರ್ಮಿಳಾ ಅವರು ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಲೇಔಟ್‌ನಲ್ಲಿ ವಾಸಿಸುತ್ತಿದ್ದರು. ಶರ್ಮಿಳಾ ಮನೆಯ ಪಕ್ಕದಲ್ಲೇ ಆರೋಪಿಯ ಮನೆ ಇತ್ತು. ಆರೋಪಿ ಕರ್ನಲ್ ಕುರೈ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಯಾಗಿದ್ದ.

ಜನವರಿ 3 ರಂದು ರಾತ್ರಿ 10.45 ರ ಸುಮಾರಿಗೆ ಅಪಾರ್ಟ್ಮೆಂಟ್ ನ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿರುವುದನ್ನು ಕಂಡ ಸ್ಥಳೀಯರು ತಕ್ಷಣವೇ ಅಗ್ನಿಶಾಮಕ ಮತ್ತು ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಆರಂಭದಲ್ಲಿ, ಮಹಿಳೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಆದರೆ ರೂಮಿನ ಕಿಟಕಿ ತೆರೆದಿರುವುದು, ಫೋನ್ ನಾಪತ್ತೆಯಾಗಿರುವುದು ಹಾಗೂ ಬೆಂಕಿ ಹೊತ್ತುಕೊಳ್ಳಲು ಯಾವುದೇ ಮೂಲವಿಲ್ಲದಿರುವುದು ಪೊಲೀಸರಿಗೆ ಪ್ರಕರಣವು ಅನುಮಾವಾಗಿ ಮಾರ್ಪಟ್ಟಿದೆ.

ಪೊಲೀಸರು ಮತ್ತು ವಿಧಿವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ತಂಡವು ತನಿಖೆ ನಡೆಸಿದೆ. ಸ್ಥಳದಲ್ಲಿ ಶಾರ್ಟ್ ಸರ್ಕ್ಯೂಟ್ ಅಥವಾ ಅನಿಲ ಸ್ಫೋಟ ನಡೆದ ಯಾವುದೇ ನಿಶಾನೆ ಇರಲಿಲ್ಲ. ಶವ ಪತ್ತೆಯಾದ ಕೋಣೆಯ ಕಿಟಕಿ ತೆರೆದಿದ್ದು, ಉಸಿರುಗಟ್ಟಿ ಸಾವು ಸಂಭವಿಸಿರುವ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕಿತು. ಜೊತೆಗೆ ಶರ್ಮಿಳಾ ಅವರ ಮೃತದೇಹ ಮಲಗುವ ಕೋಣೆಯಲ್ಲಿ ಪತ್ತೆಯಾಗಿರದೆ, ಆಕೆಯ ಫ್ಲಾಟ್‌ಮೇಟ್‌ನ ಕೋಣೆಯಲ್ಲಿ ಕಂಡುಬಂದಿತ್ತು. ಘಟನೆ ನಡೆದಾಗ ಫ್ಲಾಟ್‌ಮೇಟ್ ಊರಿನಲ್ಲಿ ಇರಲಿಲ್ಲ. ಇವೆಲ್ಲವೂ ಪೊಲೀಸರಿಗೆ ಅನುಮಾನ ಬರುವಂತೆ ಮಾಡಿತ್ತು.

ಶರ್ಮಿಳಾ ಅವರ ಸ್ನೇಹಿತ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಸುಬ್ರಮಣ್ಯ ನಗರ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ತಾಂತ್ರಿಕ ಪುರಾವೆಗಳನ್ನು ಪತ್ತೆ ಹಚ್ಚಿದ ಪೊಲೀಸರು ಕಾಣೆಯಾದ ಮೊಬೈಲ್ ಫೋನ್ ಅನ್ನು ಹುಡುಕಲು ಆರಂಭಿಸಿದ್ದಾರೆ. ಒಂದು ವಾರದ ನಂತರ ‘ಮೊಬೈಲ್’ ಆರೋಪಿ ಕರ್ನಲ್ ಕುರೈ ಬಳಿ ಸಿಕ್ಕಿದೆ. ಇದರ ಆಧಾರದ ಮೆಲೆ ಆತನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ವಿಚಾರಣೆಯ ವೇಳೆ, “ಲೈಂಗಿಕವಾಗಿ ಆಕೆಯನ್ನು ಬಳಸಿಕೊಳ್ಳಲು ರಾತ್ರಿ 9 ಗಂಟೆಯ ಸುಮಾರಿಗೆ ಸ್ಲೈಡಿಂಗ್ ಕಿಟಕಿಯ ಮೂಲಕ ಆಕೆಯ ಅಪಾರ್ಟ್‌ಮೆಂಟ್‌ಗೆ ಪ್ರವೇಶಿಸಿದ್ದೇನೆ. ಶರ್ಮಿಳಾ ಸಹಕರಿಸಲು ನಿರಾಕರಿಸಿದಾಗ, ಅವಳ ಮೇಲೆ ಅತ್ಯಾಚಾರ ಮಾಡಿದೆ. ಅವಳು ವಿರೋಧಿಸಿದಾಗ, ಬಲವಂತವಾಗಿ ಅವಳ ಬಾಯಿ ಮತ್ತು ಮೂಗನ್ನು ತನ್ನ ಕೈಗಳಿಂದ ಮುಚ್ಚಿದ್ದರಿಂದ ಆಕೆ ಪ್ರಜ್ಞೆ ಕಳೆದುಕೊಂಡಳು” ಎಂದು ಹೇಳಿದ್ದಾನೆ.

“ಅವಳಿಗೆ ರಕ್ತಸ್ರಾವದ ಗಾಯಗಳೂ ಆಗಿದ್ದವು. ತಾನು ಸಿಕ್ಕಿಬೀಳುತ್ತೇನೆ ಎಂದು ಹೆದರಿದ ಆರೋಪಿ ಕರ್ನಲ್ ಸಂತ್ರಸ್ತೆಯ ದೇಹಕ್ಕೆ ಮತ್ತು ಕೋಣೆಯಲ್ಲಿದ್ದ ಇತರ ವಸ್ತುಗಳಿಗೆ ಬೆಂಕಿ ಹಚ್ಚುವ ಮೂಲಕ ಸಾಕ್ಷ್ಯವನ್ನು ನಾಶಮಾಡಲು ಪ್ರಯತ್ನಿಸಿದ್ದಾನೆ. ನಂತರ ಆಕೆಯ ಮೊಬೈಲ್ ಫೋನ್ ತೆಗೆದುಕೊಂಡು ಸ್ಥಳದಿಂದ ಪರಾರಿಯಾಗಿದ್ದನು. ಪೋನ್ ಅನ್ನು ಪತ್ತೆ ಹಚ್ಚಿದ ನಂತರ ಆರೋಪಿ ಸಿಕ್ಕಿದ್ದಾನೆ. ಬಿಎನ್​ಎಸ್ ಸೆಕ್ಷನ್ 103, 64(2), 67 ಮತ್ತು 238ರ ಅಡಿಯಲ್ಲಿ ಪ್ರಕರಣ ದಾಖಲಿಸಿ ಆತನನ್ನು ಬಂಧಿಸಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಶರ್ಮಿಳಾ

34 ವರ್ಷದ ಶರ್ಮಿಳಾ ಮೂಲತಃ ಮಂಗಳೂರಿನವರು. ಅಕ್ಸೆಂಚರ್ ಕಂಪನಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದರು. ಮಂಗಳೂರಿನಿಂದ ಒಂದು ವರ್ಷದ ಹಿಂದೆ ಬೆಂಗಳೂರಿಗೆ ಕೆಲಸಕ್ಕೆ ಬಂದಿದ್ದ ಅವರು, ಸುಬ್ರಮಣ್ಯ ಲೇಔಟ್​ನಲ್ಲಿ ವಾಸವಿದ್ದರು.

ಪ್ರಬುದ್ಧ ಸಾವಿನ ನೆನಪು

ಸುಬ್ರಹ್ಮಣ್ಯಪುರ ಪೊಲೀಸ್ ಠಾಣಿ ವ್ಯಾಪ್ತಿಯಲ್ಲಿ ದ್ವಿತೀಯ ಬಿಬಿಎ ವಿದ್ಯಾರ್ಥಿನಿ 20 ವರ್ಷದ ಪ್ರಬುದ್ಧ ಎರಡು ವರ್ಷದ ಹಿಂದೆ ಕೊಲೆಯಾಗಿದ್ದರು.

ಬೆಂಗಳೂರಿನ ಪದ್ಮನಾಭನಗರ ಬಳಿಯ ಬೃಂದಾವನ ಲೇಔಟ್‌ನ ಮನೆಯಲ್ಲಿ 2024 ಮೇ 15ರಂದು ಪ್ರಬುದ್ಧ ಅವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದರು. ಪ್ರಬುದ್ಧ ಅವರದ್ದು ಆತ್ಮಹತ್ಯೆ ಎಂಬುದಾಗಿ ಆರಂಭದಲ್ಲಿ ಬಿಂಬಿಸಲಾಗಿತ್ತು. ಸಾವಿನ ಬಗ್ಗೆ ಪೊಲೀಸರಿಗೂ ಆರಂಭದಲ್ಲಿ ಸುಳಿವು ಸಿಕ್ಕಿರಲಿಲ್ಲ. ಆರೋಪಿಯು, ಪೊಲೀಸರ ದಿಕ್ಕು ತಪ್ಪಿಸುವ ರೀತಿಯಲ್ಲಿ ವ್ಯವಸ್ಥಿತ ಸಂಚು ರೂಪಿಸಿ ಕೃತ್ಯ ಎಸಗಿದ್ದನು.

ಕೈ ಹಾಗೂ ಕತ್ತಿನ ಭಾಗದಲ್ಲಿ ಗಾಯವಿದ್ದಿದ್ದರಿಂದ ಇದೊಂದು ಕೊಲೆ ಎಂಬುದಾಗಿ ತಾಯಿ ದೂರು ನೀಡಿದ್ದರು. ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಹಲವು ಪುರಾವೆಗಳನ್ನು ಆಧರಿಸಿ, 14 ವರ್ಷದ ಬಾಲನೊಬ್ಬನನ್ನು ವಶಕ್ಕೆ ಪಡೆದಿದ್ದರು. ₹2 ಸಾವಿರ ವಾಪಸು ಕೇಳಿದ್ದಕ್ಕಾಗಿ ಬಾಲಕ ಈ ಕೃತ್ಯ ಎಸಗಿದ್ದ ಎನ್ನುವುದು ಬಯಲಾಗಿತ್ತು.

ಪ್ರಬುದ್ಧ ಕುಟುಂಬಕ್ಕೆ ಪರಿಚಯಸ್ಥನಾಗಿರುವ ಆರೋಪಿ ಬಾಲಕ, ಕೆಲ ದಿನಗಳ ಹಿಂದೆ ಅವರ ಮನೆಯಲ್ಲಿ ₹2 ಸಾವಿರ ರೂ. ಕದ್ದಿದ್ದ. ಇದನ್ನು ನೋಡಿದ್ದ ಪ್ರಬುದ್ಧ, ಪೋಷಕರಿಗೆ ತಿಳಿಸುವುದಾಗಿ ಹೇಳಿದ್ದರು. ಈ ಕಾರಣಕ್ಕೆ ಪ್ರಬುದ್ಧಳನ್ನು ಮೇ 15ರಂದು ಚಾಕುವಿನಿಂದ ಕತ್ತು ಮತ್ತು ಕೈ ಕುಯ್ದು ಅಮಾನುಷವಾಗಿ ಕೊಲೆಗೈದಿದ್ದ ಎಂಬುದು ತನಿಖೆಯಿಂದ ಗೊತ್ತಾಗಿದೆ.

ಪ್ರಬುದ್ಧ ಮನೆಯ ಸಮೀಪವೇ ಅಪ್ರಾಪ್ತನ ಮನೆಯೂ ಇತ್ತು. ಹೀಗಾಗಿ ಎರಡೂ ಕುಟುಂಬಗಳಿಗೆ ಪರಿಚಯವಿತ್ತು. ಪ್ರಬುದ್ಧಳನ್ನು ಅಕ್ಕ… ಅಕ್ಕ ಎಂದು ಕರೆಯುತ್ತಿದ್ದ. ಇದೇ ಸಲುಗೆಯಿಂದ ಮೇ 15ರಂದು 4 ಗಂಟೆ ಸುಮಾರಿಗೆ ಮನೆಗೆ ಬಂದು ಬಾಗಿಲು ತಟ್ಟಿದ್ದಾನೆ. ಪರಿಚಯ ಇದ್ದಿದ್ದರಿಂದ ಪ್ರಬುದ್ಧ ಬಾಗಿಲು ತೆಗೆದಿದ್ದಾರೆ. ಈ ಸಂದರ್ಭದಲ್ಲಿ ಹಣ ಕದ್ದ ವಿಚಾರವೂ ಪ್ರಸ್ತಾಪವಾಗಿದೆ. ಇಬ್ಬರ ನಡುವೆ ಮಾತುಕತೆಯಾಗಿದೆ. ತಪ್ಪಿನ ಅರಿವಾಗಿ ಕ್ಷಮೆ ಕೇಳುವ ನಾಟಕವಾಡಿದ್ದಾನೆ. ಕಾಲಿಗೆ ಬೀಳಲು ಹೋಗಿದ್ದಾನೆ. ಆಗ ಎರಡೂ ಕಾಲು ಎಳೆದಿದ್ದಾನೆ. ಆಯತಪ್ಪಿದ ಪ್ರಬುದ್ಧ ಟೈಲ್ಸ್‌ ಮೇಲೆ ದಿಢೀರ್‌ ಬಿದ್ದು ಪ್ರಜ್ಞೆ ಕಳೆದುಕೊಂಡಿದ್ದಾರೆ. ಆನಂತರ ಅಡುಗೆಮನೆಯಿಂದ ಚಾಕು ತಂದು ಆಕೆಯ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ. ಆರೋಪಿ 9ನೇ ತರಗತಿ ಪಾಸಾಗಿದ್ದ. ಆರೋಪಿ ಅಪ್ರಾಪ್ತನಾಗಿರುವ ಕಾರಣ ಒಂದೇ ತಿಂಗಳೊಳಗೆ ಬಿಡುಗಡೆಯಾಗಿದ್ದಾನೆ. ಆ ಸಂದರ್ಭದಲ್ಲಿ ಬಾಲ ನ್ಯಾಯ (ಆರೈಕೆ ಮತ್ತು ಸಂರಕ್ಷಣೆ) ಕಾಯ್ದೆ 2000ಕ್ಕೆತಿದ್ದುಪಡಿ ತರಬೇಕು ಎಂಬ ಒತ್ತಾಯವನ್ನು ಪ್ರಬುದ್ಧ ಕುಟುಂಬ ಮತ್ತು ಪ್ರಗತಿಪರ ಸಂಘಟನೆಗಳು ಮಾಡಿದ್ದವು. ಬಾಲಾಪರಾಧಿ ಎಂದು ಪರಿಗಣಿಸುವ ವಯೋಮಾನ ಇಳಿಕೆ ಮಾಡುವ ಅಗತ್ಯವಿದೆ ಎಂಬುದು ಕೆಲವರ ವಾದ. ಸದ್ಯ ಹದಿನೇಳರ ಆಸುಪಾಸಿನ ಯುವಕರು ಹೆಚ್ಚು ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗುವ ವರದಿಗಳು ಬರುತ್ತಿವೆ. ಅದರಲ್ಲೂ ಅತ್ಯಾಚಾರ ಪ್ರಕರಣಗಳಲ್ಲಿ ಶಾಲಾ ಬಾಲಕರು ಭಾಗಿಯಾಗುತ್ತಿರುವುದು ಅತ್ಯಂತ ಆತಂಕದ ಸಂಗತಿ.

ಬೆಂಗಳೂರಿನಲ್ಲಿ ಈ ರೀತಿಯ ಅಮಾನುಷ ಕೃತ್ಯಗಳು ನಡೆಯುತ್ತಿರುವುದು ಮೊದಲೇನಲ್ಲ. ಪೊಲೀಸ್ ಇಲಾಖೆ ಈ ರೀತಿಯ ಸಾವುಗಳು ಸಂಭವಿಸುತ್ತಿರುವುದಕ್ಕೆ ತುರ್ತು ಕ್ರಮಕೈಗೊಳ್ಳಬೇಕಿದೆ. ಪ್ರೀತಿಯಿಂದ ಸಾಕಿ ಸಲಹಿದ್ದ ಜೀವಗಳು ಬಲಿಯಾಗುವುದನ್ನು ತಡೆಯಬೇಕಿದೆ. ನಮ್ಮ ಸಮಾಜ ಯಾವ ದಿಕ್ಕಿನ ಕಡೆ ಹೋಗುತ್ತಿದೆ ಎಂಬ ಬಗ್ಗೆ ಪ್ರಶ್ನೆ ಹುಟ್ಟುಹಾಕುತ್ತದೆ. ನೆನ್ನೆ ಪ್ರಬುದ್ಧ, ಇಂದು ಶರ್ಮಿಳಾ. ಇದು ಇಲ್ಲಿಗೆ ನಿಲ್ಲಬೇಕು. ಸರ್ಕಾರ ಮತ್ತು ಗೃಹ ಇಲಾಖೆ ಎಚ್ಚರವಹಿಸಬೇಕು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...