ಬಿಜೆಪಿ ಸರ್ಕಾರ ಕಾನೂನು ಉಲ್ಲಂಘಿಸಿ ಆರ್‌ಎಸ್‌ಎಸ್‌ಗೆ ಭೂಮಿ ನೀಡಿದೆ: ದಿನೇಶ್ ಗುಂಡೂರಾವ್

Date:

  • ಬಿಜೆಪಿ ಸರ್ಕಾರದ ಭೂ ಅಕ್ರಮ ಬಂಡವಾಳ ತೆರೆದಿಟ್ಟ ಸಚಿವ ಗುಂಡೂರಾವ್
  • ಸಿಎಂ ಹಾಗೂ ಕಂದಾಯ ಸಚಿವರು ಈ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ಜರುಗಿಸುತ್ತಾರೆ

ತಮ್ಮ ಪಕ್ಷ ಹಾಗೂ ಪಕ್ಷದ ಸಿದ್ಧಾಂತ ಬೆಳವಣಿಗೆಯ ಸಲುವಾಗಿ ಹಿಂದಿದ್ದ ಬಿಜೆಪಿ ಸರ್ಕಾರ ಕಾನೂನು ಉಲ್ಲಂಘಿಸಿ ಆರ್‌ಎಸ್‌ಎಸ್‌ ಸಂಸ್ಥೆಗೆ ಅಕ್ರಮ ಭೂ ಹಂಚಿಕೆ ಮಾಡಿರುವುದು ನಿಜ. ಈ ಸಂಬಂಧ ದಾಖಲೆಗಳು ಲಭ್ಯವಾಗಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಈ ಅಕ್ರಮ ಪರಭಾರೆ ವಿಚಾರವನ್ನು ಕೂಲಂಕಷವಾಗಿ ಪರಿಶೀಲಿಸಲಾಗುತ್ತಿದೆ. ಈ ಸಂಬಂಧ ಕಂದಾಯ ಸಚಿವರು ಹಾಗೂ ಮುಖ್ಯಮಂತ್ರಿಗಳು ಚರ್ಚಿಸಿ ಮುಂದಿನ ಕ್ರಮ ಜರುಗಿಸಲಿದ್ದಾರೆ ಎಂದು ಅವರು ಹೇಳಿದರು.

ಬಿಜೆಪಿಯವರು ಇತಿಹಾಸ ತಿರುಚುವ ಕೆಲಸ ಮಾಡಿದ್ದಾರೆ, ತಮ್ಮ ಅಧಿಕಾರದಲ್ಲಿ ದ್ವೇಷವನ್ನ ಬಿತ್ತುವ ಕೆಲಸ ಮಾಡುತ್ತಿದ್ದರು, ಪಠ್ಯಗಳಲ್ಲಿ ಬದಲಾವಣೆ ಮಾಡಿದ್ದೂ ಕೂಡ ಇದೇ ಕಾರಣಕ್ಕೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿಂದಿನ ಸರ್ಕಾರದ ಅವಧಿಯಲ್ಲಿ ಸಾಕಷ್ಟು ಅಕ್ರಮಗಳಾಗಿದ್ದವು. ಹೀಗಾಗಿ ಈಗಾಗಲೇ ಕೆಲ ಟೆಂಡರ್ ಗಳನ್ನ ರದ್ದುಪಡಿಸಿದ್ದೇವೆ, ಇದರಲ್ಲಿ ಜಿಕೆವಿಕೆ ಸಂಸ್ಥೆಗೆ ನೀಡಿದ್ದ 108 ಗುತ್ತಿಗೆಯನ್ನ ರದ್ದುಪಡಿಸಿದ್ದೇವೆ ಎಂದು ಅವರು ತಿಳಿಸಿದರು.

ಇದಿಷ್ಟೇ ಅಲ್ಲದೆ, ರಾಜ್ಯದ ಡಯಾಲಿಸಿಸ್ ಕೇಂದ್ರಗಳಲ್ಲಿ ಅವ್ಯವಸ್ಥೆ ಇದೆ, ಹಾಗಾಗಿ ಡಯಾಲಿಸಿಸ್ ಟೆಂಡರ್ ಅನ್ನೂ ರದ್ದುಪಡಿಸಲಾಗಿದೆ, ಈಗ ಜರೂರಾಗಿರುವ ಕೆಲಸಗಳನ್ನ ಮಾಡುತ್ತಿದ್ದೇವೆ, ಇಲಾಖೆಯ ಕಾರ್ಯನಿರ್ವಹಣೆ ಬದಲಾವಣೆ ಕೆಲಸ ನಡೆಯುತ್ತಿದೆ, ಅಧಿಕಾರಿಗಳು, ವೈದ್ಯರ ಕಾರ್ಯನಿರ್ವಹಣೆ ಸರಿಪಡಿಸಬೇಕಿದೆ, ಪಾಲಿಸಿ ವಿಚಾರಗಳನ್ನ ಬದಲಾಯಿಸಬೇಕಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಈ ಸುದ್ದಿ ಓದಿದ್ದೀರಾ? : ಸಾರ್ವಜನಿಕರು ಬೆಂಗಳೂರುವರೆಗೆ ಬರುವುದು ತಪ್ಪಿಸಲು ನಾನೇ ಜನರ ಬಳಿ ಹೋಗುವೆ: ಸಚಿವ ಜಮೀರ್ ಅಹ್ಮದ್

ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣದ ಮರುತನಿಖೆ

ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣದ ಮರುತನಿಖೆ ನಡೆಸಲು ಸರ್ಕಾರಕ್ಕೆ ತಿಳಿಸಿದ್ದೇನೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಹೇಳಿದರು.

ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಸಮನ್ವಯ ಇರುವುದರಿಂದ ಈ ಬಗ್ಗೆ ತನಿಖೆ ಮಾಡಬೇಕಿದೆ. ಈ ಹಿಂದಿನ ಸರ್ಕಾರ ಆದೇಶಿಸಿದ್ದ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಹಾಗಾಗಿ ನಮ್ಮ ಸರ್ಕಾರ ಮರು ತನಿಖೆಗೆ ನಿರ್ಧಾರ ಮಾಡಿದೆ, ಇದಕ್ಕೆ ಡಿಪಿಆರ್ ಕೂಡ ಸಿದ್ಧವಾಗುತ್ತಿದೆ ಎಂದು ಹೇಳಿದರು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...