ಒಳಮೀಸಲಾತಿ ಜಾರಿಯಲ್ಲಿ ಲಂಬಾಣಿ ಸಮುದಾಕ್ಕೆ ಅನ್ಯಾಯವಾಗಿದೆ ಎಂದು ಬಂಜಾರ ಸಮುದಾಯದ ಜನರು ಡಿಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಕಪ್ಪು ಬಟ್ಟೆ ಪ್ರದರ್ಶಿಸಿದ ಘಟನೆ ಸಂತ ಸೇವಾಲಾಲ್ ಅವರ 287ನೇ ಜಯಂತಿಯಲ್ಲಿ ನಡೆದಿದೆ.
ಹೊನ್ನಾಳಿಯ ಸೂರಗೊಂಡನಕೊಪ್ಪದ ಭಾಯಾಗಡದಲ್ಲಿ ಸಂತ ಸೇವಾಲಾಲ್ ಅವರ 287ನೇ ಜಯಂತಿ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಗಮಿಸುತ್ತಿದ್ದಂತೆ ಸಭಾಂಗಣದಲ್ಲಿದ್ದ ಯುವಕರು ಎದ್ದು ನಿಂತು ಕಪ್ಪು ಬಟ್ಟೆ ಪ್ರದರ್ಶನ ಮಾಡಿದರು. ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತಂದಿರುವ ಒಳಮೀಸಲಾತಿ ನೀತಿಯಿಂದ ಸಮುದಾಯಕ್ಕೆ ದೊಡ್ಡ ಅನ್ಯಾಯ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಡಿ.ಕೆ. ಶಿವಕುಮಾರ್ ಮುಜುಗರಕ್ಕೆ ಒಳಗಾದರು.
ಒಳಮೀಸಲಾತಿ ವಿರೋಧಿಸುವ ನಾಮಫಲಕ ಪ್ರದರ್ಶನ ಮಾಡಿದರು. ಅಲ್ಲದೇ ರಾಜ್ಯ ಸರಕಾರದ ವಿರುದ್ದ ಘೋಷಣೆ ಕೂಗಿದರು.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಖರ್ಗೆ ಭಾಷಣ ಕಿತ್ತು ಹಾಕಿದ್ದು ಖಂಡನೀಯ; ಅಂದು ದ್ರೋಣಾಚಾರ್ಯ, ಇಂದು ಸಂಘಾಚಾರ್ಯ!
ಈ ವೇಳೆ ಮಾಜಿ ಶಾಸಕ ರಾಜೀವ್ ಮಾತನಾಡಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಂದಿದ್ದಾರೆ. ಅವರಿಗೆ ಗೌರವ ನೀಡುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.
ವಿಧಾನಸಭಾ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಮಾತನಾಡಿ. ಇದು ನಮ್ಮ ಸಮುದಾಯದ ಧಾರ್ಮಿಕ ಕಾರ್ಯಕ್ರಮ, ಎಲ್ಲರೂ ಇಲ್ಲಿ ಗೌರವ ನೀಡಬೇಕು. ಸಮುದಾಯದ ಜನರು ಇದಕ್ಕೆ ಸಹಕಾರ ನೀಡಬೇಕು. ಎಲ್ಲರೂ ಕುಳಿತು ಮಾತನಾಡಿ ಪರಿಹಾರ ಕಂಡುಕೊಳ್ಳೋಣ’ ಎಂದರು.





