ಅಪರಾಧಿಗಳಿಗೆ ಜಾತಿ, ಧರ್ಮಗಳ ಬಣ್ಣ ಹಚ್ಚುವುದು ಅತ್ಯಂತ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ

Date:

  • ಯಡಿಯೂರಪ್ಪನವರನ್ನು ಬಂಧಿಸಿದ ಸರ್ಕಾರ ಆಗ ಹಿಂದು ವಿರೋಧಿ ಎಂದು ಏಕೆ ಕೂಗಾಡಲಿಲ್ಲ?
  • ಕ್ರಿಮಿನಲ್ ಆರೋಪಿಯನ್ನು ಸಮರ್ಥಿಸುವಂತಹ ದುಃಸ್ಥಿತಿ ಬಿಜೆಪಿಗೆ ಬರಬಾರದಿತ್ತು: ಲೇವಡಿ

ನಾಲ್ಕು ವರ್ಷಗಳ ಕಾಲ ದುರಾಡಳಿತ ಮತ್ತು ಭ್ರಷ್ಟಾಚಾರದ ಹಗರಣಗಳಲ್ಲಿಯೇ ಕಾಲ ಕಳೆದಿದ್ದ ಭಾರತೀಯ ಜನತಾ ಪಕ್ಷಕ್ಕೆ ನಮ್ಮ ಸರ್ಕಾರದ ಸಾಧನೆಗಳಿಗೆ ವ್ಯಕ್ತವಾಗುತ್ತಿರುವ ಜನಸ್ಪಂದನ ದಿಗಿಲು ಹುಟ್ಟಿಸಿದೆ. ಇದಕ್ಕಾಗಿ ಹುಬ್ಬಳ್ಳಿಯ ಕ್ರಿಮಿನಲ್ ಆರೋಪಿಯೊಬ್ಬನ ಬಂಧನದ ಎಳೆ ಹಿಡಿದುಕೊಂಡು ನೇತಾಡುತ್ತಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಅವರು ಬುಧವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, “ಅಪರಾಧಿಗಳಿಗೆ ಜಾತಿ, ಧರ್ಮಗಳ ಬಣ್ಣ ಹಚ್ಚುವುದು ಅತ್ಯಂತ ಅಪಾಯಕಾರಿ ಎನ್ನುವುದನ್ನು ಬಿಜೆಪಿ ನಾಯಕರು ಅರ್ಥಮಾಡಿಕೊಳ್ಳಬೇಕು” ಎಂದು ಹೇಳಿದ್ದಾರೆ.

“ರಾಜ್ಯದಲ್ಲಿ ಹಿಂದೆ ಬಿಜೆಪಿ ಸರ್ಕಾರ ಇದ್ದಾಗಲೇ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರನ್ನು ಬಂಧಿಸಿ ಜೈಲಿಗಟ್ಟಿದ್ದರು. ಯಡಿಯೂರಪ್ಪನವರಿಗಿಂತ ದೊಡ್ಡ ಹಿಂದೂ? ರಾಮ ಭಕ್ತ ಯಾರಿದ್ದಾರೆ? ಹಾಗಿದ್ದರೆ ಆಗಿನ ಸರ್ಕಾರ ಹಿಂದು ವಿರೋಧಿಯೇ? ಬಿಜೆಪಿ ಬಿಟ್ಟು ಬಿಡಿ, ಅದರ ಪರಿವಾರದ ನಾಯಕರು ಕೂಡಾ ಹಿಂದೂ ಯಡಿಯೂರಪ್ಪನವರನ್ನು ಬಂಧಿಸಿದ ಸರ್ಕಾರ ಹಿಂದೂ ವಿರೋಧಿ ಎಂದು ಕೂಗಾಡಲಿಲ್ಲವಲ್ಲ? ಈಗ ಯಾಕೆ ಈ ಕೂಗಾಟ” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದ ಬಿಜೆಪಿಯ ಸ್ಥಿತಿ ಒಂದು ಮನೆ ನೂರು ಬಾಗಿಲು ಎಂಬಂತಾಗಿದೆ. ಆ ಪಕ್ಷದ ರಾಜ್ಯಾಧ್ಯಕ್ಷರನ್ನು ಅದೇ ಪಕ್ಷದ ಹಿರಿಯ ನಾಯಕರು ಈಗಲೂ ಒಪ್ಪಿಕೊಂಡಿಲ್ಲ, ವಿರೋಧ ಪಕ್ಷದ ನಾಯಕರ ಮಾತಿಗೆ ಸದನದಲ್ಲಿಯೇ ಸದಸ್ಯರು ಬಿಡಿಗಾಸಿನ ಕಿಮ್ಮತ್ತು ಕೊಟ್ಟಿಲ್ಲ. ಯಡಿಯೂರಪ್ಪ ಮತ್ತು ಮಕ್ಕಳ ವಿರುದ್ಧ ದಿನಕ್ಕೊಂದು ಗಂಭೀರ ಸ್ವರೂಪದ ಆರೋಪ ಮಾಡುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕನಿಷ್ಠ ಒಂದು ಎಚ್ಚರಿಕೆಯ ನೋಟಿಸ್ ನೀಡಲಾಗದಷ್ಟು ಪಕ್ಷ ನಿರ್ವಿರ್ಯವಾಗಿದೆ. ಕಾಂಗ್ರೆಸ್ ಸರ್ಕಾರ ದಿನದಿಂದ ದಿನಕ್ಕೆ ಜನಾನುರಾಗಿಯಾಗುತ್ತಿದೆ. ಈ ಹತಾಶೆಯಿಂದ ಹೊರಬರಲು ಒಬ್ಬ ಕ್ರಿಮಿನಲ್ ಆರೋಪಿಯನ್ನು ಮುಂದಿಟ್ಟು ಬಿಜೆಪಿ ನಾಯಕರು ಕೂಗಾಡುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೊಸವರ್ಷದ ಹೊಸ್ತಿಲಲ್ಲಿ ನಮ್ಮನ್ನಗಲಿದ ನಿಜಾಯತಿಯ ಪತ್ರಕರ್ತ ಜಾನ್ ಪಿಲ್ಜರ್

“ಒಬ್ಬ ಕ್ರಿಮಿನಲ್ ಆರೋಪಿಯನ್ನು ಸಮರ್ಥಿಸುವಂತಹ ದುಃಸ್ಥಿತಿ ಒಂದು ರಾಷ್ಟ್ರೀಯ ಪಕ್ಷಕ್ಕೆ ಬರಬಾರದಿತ್ತು. ಹುಬ್ಬಳ್ಳಿಯ ಆರೋಪಿಯನ್ನು ಸಮರ್ಥಿಸಿಕೊಂಡು ಹೋರಾಟಕ್ಕೆ ಇಳಿದಿರುವ ಬಿಜೆಪಿ ನಾಯಕರಲ್ಲಿ ಯಾರಾದರೂ ಸ್ವಲ್ಪ ಬುದ್ಧಿಗಿದ್ದಿ ಹೊಂದಿದವರಿದ್ದರೆ ದಯವಿಟ್ಟು ಆ ವ್ಯಕ್ತಿಯ ಮೇಲಿನ ಆರೋಪಗಳ ಪಟ್ಟಿಯನ್ನು ತರಿಸಿ ಓದಿ, ಆಮೇಲೆ ಹೋರಾಟಕ್ಕೆ ಇಳಿಯಿರಿ. ಜನಸಂಖ್ಯೆಯಲ್ಲಿ ಹಿಂದೂಗಳೇ ಬಹುಸಂಖ್ಯೆಯಲ್ಲಿರುವುದರಿಂದ ಜೈಲುಗಳಲ್ಲಿರುವ ಕೈದಿಗಳಲ್ಲಿಯೂ ಹಿಂದೂ ಧರ್ಮಿಯರೇ ಬಹುಸಂಖ್ಯೆಯಲ್ಲಿದ್ದಾರೆ. ಅವರೆಲ್ಲ ಹಿಂದೂ ಧರ್ಮಕ್ಕೆ ಸೇರಿದವರು ಎನ್ನುವ ಕಾರಣಕ್ಕೆ ಬಿಜೆಪಿ ಅವರ ಪರವಾಗಿ ಹೋರಾಟ ನಡೆಸುತ್ತಾ” ಎಂದು ಪ್ರಶ್ನಿಸಿದ್ದಾರೆ.

“ರಾಜ್ಯದಲ್ಲಿ ಕ್ರಿಮಿನಲ್ ಕೃತ್ಯಗಳು ಹೆಚ್ಚಾಗಲು ಅಪರಾಧ ಮತ್ತು ಅಪರಾಧಿಗಳಿಗೆ ಜಾತಿ-ಧರ್ಮದ ಬಣ್ಣ ಹಚ್ಚುವ ಬಿಜೆಪಿಯ ಕಾನೂನು ವಿರೋಧಿ ನಡವಳಿಕೆಗಳೇ ಕಾರಣ. ವ್ಯಕ್ತಿಯೊಬ್ಬ ಎಂತಹ ಘನಘೋರ ಅಪರಾಧಗಳನ್ನು ಬೇಕಾದರೂ ಎಸಗಲಿ, ಆತ ಕೇಸರಿ ಶಾಲನ್ನು ತಲೆಗೆ ಸುತ್ತಿಕೊಂಡು ನಾನೊಬ್ಬ ಹಿಂದೂ ಎಂದು ಕೂಗಿದರೆ ಬಿಜೆಪಿ ನಾಯಕರು ಆತನ ರಕ್ಷಣೆಗೆ ಧಾವಿಸುತ್ತಾರೆ. ಈ ಮೂಲಕ ಕೇಸರಿ ಶಾಲು ಮಾತ್ರವಲ್ಲ ಹಿಂದೂ ಧರ್ಮಕ್ಕೂ ಬಿಜೆಪಿ ನಾಯಕರು ಅವಮಾನ ಮಾಡುತ್ತಿದ್ದಾರೆ. ಇದು ಧರ್ಮದ್ರೋಹದ ನಡೆ. ಕಾನೂನನ್ನು ಅದರ ಪಾಡಿಗೆ ಕೆಲಸ ಮಾಡಲು ಬಿಟ್ಟು ಬಿಡಿ” ಎಂದು ಹೇಳಿದ್ದಾರೆ.

“ರಾಜ್ಯದ ಬಿಜೆಪಿ ನಾಯಕರಲ್ಲಿ ಈಗಲೂ ನಾನು ವಿನಂತಿ ಮಾಡುತ್ತಿದ್ದೇನೆ. ದೇವರು-ಧರ್ಮದ ಹೆಸರಲ್ಲಿ ಕ್ಷುಲ್ಲಕ ರಾಜಕೀಯ ಮಾಡುವುದನ್ನು ಕೈಬಿಟ್ಟು ಜವಾಬ್ದಾರಿಯುತವಾದ ವಿರೋಧಪಕ್ಷವಾಗಿ ಕಾರ್ಯನಿರ್ವಹಿಸುವ ಪ್ರಯತ್ನ ಮಾಡಿ. ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆ ಎಂದು ಹೇಳುತ್ತಿರುವ ಬಿಜೆಪಿ ರೀತಿಯಲ್ಲಿ ನಾವು ರಾಜ್ಯವನ್ನು ಬಿಜೆಪಿ ಮುಕ್ತ ಮಾಡುತ್ತೇವೆ ಎಂಬ ಸೊಕ್ಕಿನ ಹೇಳಿಕೆಗಳನ್ನು ನೀಡುವುದಿಲ್ಲ. ಆದರೆ ರಾಜ್ಯದಲ್ಲಿ ಬಿಜೆಪಿಯನ್ನು ಶಾಶ್ವತವಾಗಿ ವಿರೋಧಪಕ್ಷದ ಸ್ಥಾನದಲ್ಲಿ ಕೂರಿಸಬೇಕೆಂಬುದು ನನ್ನ ಗುರಿ. ರಾಜ್ಯ ಬಿಜೆಪಿ ನಾಯಕರ ಇತ್ತೀಚಿನ ಅವಾಂತರಗಳನ್ನೆಲ್ಲ ನೋಡಿದರೆ ಈ ಗುರಿ ಸಾಧನೆಗೆ ಅವರೇ ಸಹಕಾರ ನೀಡುತ್ತಿರುವಂತೆ ಕಾಣುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...