ಕಾವೇರಿ 5ನೇ ಹಂತದ ನೀರು ಬಳಕೆಗೆ ಜಲಮಂಡಳಿ ಚಿಂತನೆ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಜಲಮಂಡಳಿ ನೀರಿನ ಸಮಸ್ಯೆ ನಿವಾರಿಸಲು ಹಲವು ಕ್ರಮ ಕೈಗೊಳ್ಳುತ್ತಿದೆ. ಇದೀಗ, ಮೊದಲ ಬಾರಿಗೆ ಕಾವೇರಿ 5ನೇ ಹಂತದ ಯೋಜನೆಯಡಿ ಪಂಪಿಂಗ್ ಸ್ಟೇಷನ್‌ಗಳಿಂದ ಟ್ಯಾಂಕರ್‌ಗಳಲ್ಲಿ ನೀರನ್ನು ಪಡೆದು, ಜನರಿಗೆ ಪೂರೈಸಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು (ಬಿಡಬ್ಲೂಎಸ್‌ಎಸ್‌ಬಿ) ಯೋಜಿಸುತ್ತಿದೆ.

ಈ ಯೋಜನೆಯು ಮೇ ಅಂತ್ಯದ ವೇಳೆಗೆ ಸಂಪೂರ್ಣವಾಗಿ ಕಾರ್ಯಾರಂಭ ಮಾಡಲಿದೆ. ಮೇ ತಿಂಗಳಿನಲ್ಲಿ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಪಂಪಿಂಗ್ ಸ್ಟೇಷನ್‌ಗಳಿಂದ ನೀರನ್ನು ಬಳಸಿಕೊಳ್ಳಲು ಜಲಮಂಡಳಿ ಯೋಜಿಸಿದೆ.

ತಾತಗುಣಿ ಅಥವಾ ಹಾರೋಹಳ್ಳಿ ಪಂಪಿಂಗ್ ಸ್ಟೇಷನ್‌ಗಳಿಗೆ ನೀರನ್ನು ಪಂಪ್ ಮಾಡಲು ಸಾಧ್ಯವಾದರೆ ನಗರಕ್ಕೆ ನೀರು ಬರುವುದು ಸುಲಭ ಎಂದು ಬಿಡಬ್ಲ್ಯೂಎಸ್‌ಎಸ್‌ಬಿ ಅಧ್ಯಕ್ಷ ರಾಮಪ್ರಸಾತ್ ಮನೋಹರ್ ವಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನೀರು ಸಂಸ್ಕರಣಾ ಘಟಕಗಳು ಏಪ್ರಿಲ್ ಅಂತ್ಯದ ವೇಳೆಗೆ ಸಿದ್ಧವಾಗುತ್ತವೆ. ಆಗ ನಾವು ನೀರನ್ನು ಪಂಪ್ ಮಾಡಲು ಸಾಧ್ಯವಾಗುತ್ತದೆ. ಕೊನೆಯ ಮೈಲಿ ಪೈಪ್‌ಲೈನ್ ಸಂಪರ್ಕದ ಸಮಸ್ಯೆಗಳಿಂದಾಗಿ, ಮನೆಗಳಿಗೆ ನೀರು ಸರಬರಾಜು ಮಾಡಲು ಸಾಧ್ಯವಾಗದಿರಬಹುದು. ತಾತಗುಣಿ ಅಥವಾ ಹಾರೋಹಳ್ಳಿ ನಿಲ್ದಾಣದವರೆಗೆ ನೀರು ಸಿಕ್ಕಿದರೆ, ಟ್ಯಾಂಕರ್‌ಗಳನ್ನು ಬಳಸಿ ನಗರಕ್ಕೆ ಸುಲಭವಾಗಿ ಕೊಂಡೊಯ್ಯಬಹುದು. ಮೇ ತಿಂಗಳಲ್ಲಿ ಪರಿಸ್ಥಿತಿ ಹದಗೆಟ್ಟರೆ ಜಾರಿಗೆ ತರಲು ಹೊರಟಿರುವ ಹಲವು ಯೋಜನೆಗಳಲ್ಲಿ ಇದು” ಎಂದು ತಿಳಿಸಿದರು.

“ನಗರದಲ್ಲಿ ತಾಪಮಾನ ಹೆಚ್ಚಳವಾಗುತ್ತಿರುವ ಕಾರಣ ಇನ್ನು ಶುಷ್ಕ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಮೇ ತಿಂಗಳಲ್ಲಿ ಹೆಚ್ಚಿನ ಬೋರ್‌ವೆಲ್‌ಗಳು ನಿಷ್ಕ್ರಿಯವಾಗಬಹುದು. ಇದು ಕಾವೇರಿ ನೀರಿನ ಮೇಲಿನ ಅವಲಂಬನೆ ಮತ್ತು ಬೇಡಿಕೆಯನ್ನು ಹೆಚ್ಚಿಸಬಹುದು. ಹೀಗಾಗಿ, ಯಾವುದೇ ಕೊರತೆಯಾಗದಂತೆ ಯೋಜನೆಗಳನ್ನು ರೂಪಿಸುತ್ತಿದ್ದೇವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಏ.18 ರಿಂದ ಸಿಇಟಿ ಪರೀಕ್ಷೆ ಆರಂಭ : ಮಾರ್ಗಸೂಚಿಗಳೇನು?

“ನಗರದ ಅಗತ್ಯಗಳಿಗೆ ಅನುಗುಣವಾಗಿ, ಜಲಮಂಡಳಿ ಪಂಪಿಂಗ್ ಸ್ಟೇಷನ್‌ಗಳಿಂದ 30-40 ಎಮ್‌ಎಲ್‌ಡಿ ನೀರನ್ನು ಹೊರತೆಗೆಯಬಹುದು. ನೀರು ಉಳಿಸುವ ಕ್ರಮಗಳನ್ನು ಉತ್ತೇಜಿಸುವ ಮೂಲಕ ಮತ್ತು ಸಂಸ್ಕರಿಸಿದ ನೀರಿನ ಬಳಕೆಯನ್ನು ಹೆಚ್ಚಿಸುವ ಮೂಲಕ ನೀರಿನ ಬಿಕ್ಕಟ್ಟನ್ನು ನಿಯಂತ್ರಣದಲ್ಲಿಡಲು ಸಾಧ್ಯವಾಯಿತು. ಆದರೆ, ಇಷ್ಟೆಲ್ಲ ಕ್ರಮಗಳ ನಂತರವೂ ಮೇ ತಿಂಗಳಿನಲ್ಲಿ ಕೊರತೆಯಾದರೆ ಇತರ ಜಲಮೂಲಗಳನ್ನು ಅನ್ವೇಷಿಸಬೇಕಾಗಿದ್ದು, ಕಾವೇರಿ 5ನೇ ಹಂತದ ಯೋಜನೆ ಬಹುತೇಕ ಪೂರ್ಣಗೊಂಡಿರುವುದರಿಂದ ಅಲ್ಲಿರುವ ಸಂಪನ್ಮೂಲಗಳನ್ನು ಬಳಸಿಕೊಳ್ಳಬಹುದು” ಎಂದರು.

ಇದಲ್ಲದೆ, ಪ್ರಸ್ತುತ 0.3 ಟಿಎಂಸಿ ನೀರಿರುವ ಹೆಸರಘಟ್ಟ ಕೆರೆಯಿಂದ ಕನಿಷ್ಠ 10 ಎಂಎಲ್‌ಡಿ ನೀರನ್ನು ಪಡೆಯಲು ಬಿಡಬ್ಲ್ಯೂಎಸ್‌ಎಸ್‌ಬಿ ಯೋಜಿಸುತ್ತಿದೆ. ಜಲಮಂಡಳಿಯೂ 20% ರಷ್ಟು ಬೃಹತ್ ಗ್ರಾಹಕರಿಗೆ ನೀರಿನ ಸರಬರಾಜನ್ನು ಕಡಿತಗೊಳಿಸಿ, ನೀರನ್ನು ಉಳಿಸಲು ಸಮರ್ಥವಾಗಿದೆ. ಸಂಸ್ಕರಿಸಿದ ನೀರು ಮತ್ತು ಟ್ಯಾಪ್‌ಗಳಿಗೆ ಏರೇಟರ್‌ಗಳ ಬಳಕೆಯಂತಹ ನೀರು ಉಳಿಸುವ ಕ್ರಮಗಳನ್ನು ಅನುಷ್ಠಾನಗೊಳಿಸುವುದು. ಇಲ್ಲಿಯವರೆಗೆ, ಈ ಕ್ರಮಗಳು ಮಂಡಳಿಯು ಕನಿಷ್ಟ 300 ಎಮ್‌ಎಲ್‌ಡಿ ನೀರನ್ನು ಉಳಿಸಲು ಮತ್ತು ಕೊರತೆಯಿರುವ ಪ್ರದೇಶಗಳಿಗೆ ಮರುಹಂಚಿಕೆ ಮಾಡಲು ಸಹಾಯ ಮಾಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...