ಕರ್ನಾಟಕಕ್ಕೆ ಮೇಲಿಂದ ಮೇಲೆ ಅನ್ಯಾಯ: ಮತ್ತೆ ಒಂದು ತಿಂಗಳು ಕಾವೇರಿ ನೀರು ಹರಿಸಲು ಸೂಚನೆ

Date:

ಕಾವೇರಿ ನದಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ಮೇಲಿಂದ ಮೇಲೆ ಅನ್ಯಾಯವಾಗುತ್ತಿದೆ. ಇದೀಗ ಮತ್ತೆ ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಾಜ್ಯಕ್ಕೆ ಸೂಚಿಸಿದೆ. ನ್ಯಾಯಾಧೀಕರಣ ಹಾಗೂ ಸುಪ್ರೀಂಕೋರ್ಟ್ ಅಂತಿಮ ತೀರ್ಪು ಪಾಲಿಸುವಂತೆ ಹೇಳಿ ನವೆಂಬರ್ 23ರಿಂದ ಡಿಸೆಂಬರ್ 23ರವರಗೆ 2700 ಕ್ಯೂಸೆಕ್ ನೀರು ಹರಿಸಲು ಸೂಚನೆ ನೀಡಿದೆ.

ದೆಹಲಿಯಲ್ಲಿ ಗುರುವಾರ ಕಾವೇರಿ ನೀರು ನಿರ್ವಹಣಾ ಸಮಿತಿಯ ಸಭೆ ನಡೆದಿದ್ದು, ತಮಿಳುನಾಡಿಗೆ ನೀರು ಬಿಡುಗಡೆ ಸಂಬಂಧ ಚರ್ಚೆ ನಡೆದು ಪ್ರತಿನಿತ್ಯ 2,700 ಕ್ಯೂಸೆಕ್ ನೀರು ಬಿಡುವಂತೆ ಪ್ರಾಧಿಕಾರ ಸೂಚನೆ ನೀಡಿದೆ.

ಬಾಕಿ ಇರುವ 7.5 ಟಿಎಂಸಿ ನೀರನ್ನು ಬಿಡುಗಡೆ ಮಾಡುವಂತೆ ತೀರ್ಮಾನ ತೆಗೆದುಕೊಳ್ಳಲಾಗಿದೆ. ಬಾಕಿ ಬಿಡಬೇಕಾಗಿದ್ದ ನೀರನ್ನು ನವೆಂಬರ್ ಹಾಗೂ ಡಿಸೆಂಬರ್ ತಿಂಗಳಿನಲ್ಲಿ ಬಿಡುಗಡೆ ಮಾಡಲು ಸೂಚನೆ ನೀಡಿದೆ. ಈ ಮೂಲಕ ಸುಪ್ರೀಂ ಕೋರ್ಟ್‌ನ ಆದೇಶವನ್ನು ಪಾಲಿಸುವಂತೆ ಪ್ರಾಧಿಕಾರವು ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸಿಖ್ ಪ್ರತ್ಯೇಕತಾವಾದಿಯ ಕೊಲ್ಲುವ ಸಂಚನ್ನು ವಿಫಲಗೊಳಿಸಿ ಭಾರತಕ್ಕೆ ಎಚ್ಚರಿಕೆ ನೀಡಿದ ಅಮೆರಿಕ

ಗುರುವಾರ ಬೆಳಗ್ಗೆ 11.30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಭೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ ಅಧಿಕಾರಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಬಾಕಿ ನೀರು ಬಿಡಲು ತಮಿಳುನಾಡು ಆಗ್ರಹಿಸಿತು. ಹಳೇ ಬಾಕಿ 11 ಟಿಎಂಸಿ ನೀರು ಬಿಡಲು ಬಾಕಿ ಇದೆ. ತಕ್ಷಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿತು.

ಸದ್ಯ ತಮಿಳುನಾಡಿನಲ್ಲಿ ವಿಪರೀತ ಮಳೆಯಾಗುತ್ತಿದ್ದು, ಅದನ್ನು ಶೇಖರಣೆ ಮಾಡುವ ಬಗ್ಗೆ ತಮಿಳುನಾಡು ಸರಕಾರ ಯಾವುದೇ ಚಿಂತನೆ ನಡೆಸುತ್ತಿಲ್ಲ. ಕಾವೇರಿ ಜಲಾನಯನ ಪ್ರದೇಶದಲ್ಲಿ ಅನಿಯಂತ್ರಿತ ನೀರು ನದಿ ಪಾತ್ರ ಸೇರುತ್ತಿದೆ. 3,000 ಸಾವಿರ ಕ್ಯೂಸೆಕ್ ಅನಿಯಂತ್ರಿತ ನೀರು ಯಾವುದೇ ಅಡೆತಡೆ ಇಲ್ಲದೇ ತಮಿಳುನಾಡು ಸೇರುತ್ತಿದೆ.

ತಮಿಳುನಾಡಿನಲ್ಲಿ ಮಳೆ ಹೆಚ್ಚಾದರೆ ಪುನಃ ನೀರು ಕರ್ನಾಟಕ ಪಡೆಯಲು ಸಾಧ್ಯ ಇಲ್ಲ. ಅಲ್ಲದೇ ಮೆಟ್ಟೂರು ಜಲಾಶಯದಿಂದ ತಮಿಳುನಾಡು ತುಂಬ ಕಡಿಮೆ ಪ್ರಮಾಣದಲ್ಲಿ ನೀರು ಬಿಡುತ್ತಿದೆ. ಹಾಗಾಗಿ ಕರ್ನಾಟಕದಿಂದ ಪುನಃ ನೀರು ಬಿಡಲು ಸಾಧ್ಯವಿಲ್ಲ ಎಂಬುದು ಕರ್ನಾಟಕದ ವಾದವಾಗಿದೆ. ಕರ್ನಾಟಕದಿಂದ ನೀರು ಬಿಡಲು ಸಾಧ್ಯವೇ ಇಲ್ಲ ಎಂದು ವಾದ ಮಂಡಿಸಲು ರಾಜ್ಯದ ಅಧಿಕಾರಿಗಳು ಸಿದ್ದತೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...