ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ: 3 ಚಾಕು, 40 ಸಾವಿರ ನಗದು ಜಪ್ತಿ

Date:

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ 50ಕ್ಕೂ ಹೆಚ್ಚು ಸಿಸಿಬಿ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.

ಲೋಕಸಭಾ ಚುನಾವಣೆ ಆರಂಭಕ್ಕೂ ಕೆಲವೇ ದಿನಗಳ ಮುಂಚೆ ಈ ದಾಳಿ ನಡೆದಿದೆ. ಚುನಾವಣೆ ಹಿನ್ನೆಲೆ, ಮತದಾರರ ಮೇಲೆ ಪ್ರಭಾವ ಬೀರಲು ಜೈಲಿನಿಂದಲೇ ಸಂಚು ಹೂಡಲಾಗಿದೆ ಎಂಬ ಸುಳಿವಿನ ಮೇರೆಗೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳವಾರ ಬೆಳಿಗ್ಗೆ 8ಗಂಟೆ ಸುಮಾರು 50ಕ್ಕೂ ಹೆಚ್ಚು ಸಿಸಿಬಿ ಅಧಿಕಾರಿಗಳ ತಂಡ ಜೈಲಿನ ಎಲ್ಲ ಬ್ಯಾರಕ್ಗಳ ಮೇಲೆ ದಾಳಿ ನಡೆಸಿದ್ದಾರೆ. ಬ್ಯಾರಕ್ನಲ್ಲಿದ್ದ ಕೈದಿಗಳ ಬಳಿಯಿಂದ ₹40 ಸಾವಿರ ನಗದು, ಮೂರು ಚಾಕು ಹಾಗೂ ತಂಬಾಕು ಉತ್ಪನ್ನಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂದಿನ ಕೆಲ ದಿನಗಳಲ್ಲಿ ಲೋಕಸಭಾ ಚುನಾವಣೆ ಆರಂಭವಾಗಿದೆ. ಬೆನ್ನಲ್ಲೇ ಜೈಲಿನಲ್ಲಿರುವ ಕೆಲ ರೌಡಿಶೀಟರ್ಗಳು, ತಮ್ಮ ಸಹಚರರ ಮೂಲಕ ಮತದಾರರ ಮೇಲೆ ಪ್ರಭಾವ ಬೀರುವ ಮಾಹಿತಿ ಇತ್ತು. ಹೀಗಾಗಿ, ಚುನಾವಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು, ಕಾನೂನು ಬಾಹಿರ ಚಟುವಟಿಕೆಗಳು ನಡೆಯ ಬಾರದು, ಮತದಾರರಿಗೆ ಯಾವುದೇ ತೊಂದರೆ ಉಂಟಾಗಬಾರದು ಎಂಬ ಉದ್ದೇಶದಿಂದ ದಾಳಿ ನಡೆಸಲಾಗಿದೆ.

ಜೈಲಿನಲ್ಲಿ ಮೂರು ಚಾಕು ಹಾಗೂ ನಗದು ಪತ್ತೆಯಾಗಿದ್ದು, ಪರಪ್ಪನ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಸುದ್ದಿ ಓದಿದ್ದೀರಾ? ಮೊದಲ ಹಂತದ ಚುನಾವಣೆ | ಏಪ್ರಿಲ್ 17ರಂದು ಬಹಿರಂಗ ಪ್ರಚಾರಕ್ಕೆ ತೆರೆ

ಜೈಲಿನ ಒಳಗಿನಿಂದಲೇ ಚುನಾವಣೆ ಮೇಲೆ ಪ್ರಭಾವ ಬೀರಲು ಪಿತೂರಿ, ಅಕ್ರಮ ಚಟುವಟಿಕೆಗಳು, ಡ್ರಗ್ಸ್ ಬಳಕೆ, ಪೂರೈಕೆ ಹಾಗೂ ಮೊಬೈಲ್ ಬಳಕೆಯನ್ನು ಪರಿಶೀಲನೆ ನಡೆಸಲು ಈ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಗದು, ತಂಬಾಕು ಉತ್ಪನ್ನಗಳು ಮತ್ತು ಚಾಕುಗಳನ್ನು ವಶಪಡಿಸಿಕೊಳ್ಳಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದೂ ಮೂಲಗಳು ತಿಳಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...