ಲಕ್ಷ್ಮೀಶ ತೋಳ್ಪಾಡಿ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Date:

ಹಿರಿಯ ಚಿಂತಕ, ಬರಹಗಾರ, ವಾಗ್ಮಿ ಲಕ್ಷ್ಮೀಶ ತೋಳ್ಪಾಡಿ ಅವರಿಗೆ ಪ್ರಸಕ್ತ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಘೋಷಣೆಯಾಗಿದೆ.

ಕೇಂದ್ರ ಸಾಹಿತ್ಯ ಅಕಾಡೆಮಿಯು ತನ್ನ ವಾರ್ಷಿಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳನ್ನು 24 ಭಾಷೆಗಳಲ್ಲಿ ಬುಧವಾರ (ಡಿ.20) ಪ್ರಕಟಿಸಿದೆ. ಇದರಲ್ಲಿ 9 ಕವನಗಳು, 6 ಕಾದಂಬರಿಗಳು, 5 ಸಣ್ಣ ಕಥೆಗಳು, 3 ಪ್ರಬಂಧಗಳು ಮತ್ತು 1 ಸಾಹಿತ್ಯ ಅಧ್ಯಯನ 2023ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿವೆ.

ಲಕ್ಷ್ಮೀಶ ತೋಳ್ಪಾಡಿ ಅವರ ‘ಮಹಾಭಾರತ ಅನುಸಂಧಾನದ ಭಾರತಯಾತ್ರೆ’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿದೆ ಎಂದು ಸಾಹಿತ್ಯ ಅಕಾಡೆಮಿ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಮಾಧವ್ ಕೌಶಿಕ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 24 ಭಾರತೀಯ ಭಾಷೆಗಳಲ್ಲಿ ಪ್ರತಿಷ್ಠಿತ ತೀರ್ಪುಗಾರರ ಸದಸ್ಯರು ಶಿಫಾರಸು ಮಾಡಿದ ಪ್ರಶಸ್ತಿಗಳನ್ನು ಸಾಹಿತ್ಯ ಅಕಾಡೆಮಿಯ ಕಾರ್ಯಕಾರಿ ಮಂಡಳಿಯು ಅನುಮೋದಿಸಿತು. ಕೇಂದ್ರ ಸಾಹಿತ್ಯ ಅಕಾಡೆಮಿಯ ಕನ್ನಡ ವಿಭಾಗದ ಆಯ್ಕೆ ಸಮಿತಿಯಲ್ಲಿ ನಾಗೇಶ ಹೆಗಡೆ, ಆನಂದ ಝುಂಜರವಾಡ, ಜ ನಾ ತೇಜಶ್ರೀ ಅವರು ಇದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೂಷಣೆ ಬಿಡಲಿ, ಆತ್ಮಹತ್ಯೆಯಿಂದ ರೈತರನ್ನು ದೂರ ಮಾಡಲಿ

ಲಕ್ಷ್ಮೀಶ ತೋಳ್ಪಾಡಿ ಕುರಿತ ಸಂಕ್ಷಿಪ್ತ ಮಾಹಿತಿ

ಲಕ್ಷ್ಮೀಶ ತೋಳ್ಪಾಡಿ ಅವರು ಲೇಖಕ, ಚಿಂತಕ ಮತ್ತು ವಿದ್ವಾಂಸರು. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬಳಿಯ ಶಾಂತಿಗೋಡು ಗ್ರಾಮದವರು. ಇವರ ಆಡುಭಾಷೆ ತುಳು. ಇವರು ತಾರುಣ್ಯದಲ್ಲಿ ಕೆಲ ಕಾಲ ಬೆಂಗಳೂರಿನಲ್ಲಿದ್ದರು. ವೈ.ಎನ್.ಕೆ, ಗೋಪಾಲಕೃಷ್ಣ ಅಡಿಗ, ಲಂಕೇಶ್, ಕಿ.ರಂ. ನಾಗರಾಜ ಅವರ ಒಡನಾಟ ಇವರಿಗೆ ಲಭಿಸಿತ್ತು.

ನಾಡಿನ ಹಲವು ಪತ್ರಿಕೆಗಳಲ್ಲಿ ಅವರ ಲೇಖನಗಳು ಪ್ರಕಟವಾಗಿವೆ. ಭಗವದ್ಗೀತೆಯ ಬಗೆಗಿನ ‘ಮಹಾಯುದ್ದಕ್ಕೆ ಮುನ್ನ’ ಮೊದಲ ಪ್ರಕಟಿತ ಕೃತಿ. ಈ ಕೃತಿಯ ಬಗ್ಗೆ ಬಂದಿರುವ ಪತ್ರಿಕಾ ವಿಮರ್ಶೆಯಲ್ಲಿ ‘ಆಧುನಿಕನಿಗೆ ಹೃದಯಸ್ಪರ್ಶಿ’ ಎಂಬ ಮೆಚ್ಚುಗೆ ವ್ಯಕ್ತವಾಗಿತ್ತು. ಅಂತರ್ಜಾಲ ಪತ್ರಿಕೆಯಲ್ಲಿ ಭಾಗವತದ ಬಗ್ಗೆ ಬರೆದ ಸರಣಿ ಬರಹಗಳ ಸಂಕಲನ ‘ಸಂಪಿಗೆ ಭಾಗವತ’, ‘ಬೆಟ್ಟ ಮಹಮದನ ಬಳಿಗೆ ಬಾರದಿದ್ದರೆ’, ‘ಭವ ತಲ್ಲಣ’ (ತಾಳಮದ್ದಲೆ ಕುರಿತು) ಕೃತಿಗಳು ಪ್ರಕಟವಾಗಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...