ಚಂದ್ರಯಾನ-3 ಉಡ್ಡಯನ ಯಶಸ್ವಿ; ಮೋದಿ, ಸಿದ್ದರಾಮಯ್ಯರಿಂದ ಮೆಚ್ಚುಗೆ

Date:

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಮಹಾತ್ವಾಕಾಂಕ್ಷೆಯ ಚಂದ್ರಯಾನ-3 ಉಡ್ಡಯನ ಯಶಸ್ವಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದಾರಾಮಯ್ಯ ಹಾಗೂ ರಾಷ್ಟ್ರಪತಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್‌ ಉಡ್ಡಯನ ಕೇಂದ್ರದಿಂದ ‘ವಿಕ್ರಮ್‌’ ಲ್ಯಾಂಡರ್‌ ಹಾಗೂ ‘ಪ್ರಜ್ಞಾನ್’ ರೋವರ್‌ ಹೊತ್ತ ದೇಶದ ಐತಿಹಾಸಿಕ ‘ಚಂದ್ರಯಾನ 3’ ಉಡಾವಣಾ ವಾಹಕ ಎಲ್‌ವಿಎಂ-3 ಎಂ4 ಇಂದು (ಜುಲೈ 14) ಮಧ್ಯಾಹ್ನ 2.35 ಗಂಟೆಗೆ ನಭಕ್ಕೆ ಚಿಮ್ಮಿತು. ರಾಕೆಟ್‌ ನಭಕ್ಕೆ ಚಿಮ್ಮುತ್ತಿದ್ದಂತೆ ವಿಜ್ಞಾನಿಗಳು ಮತ್ತು ತಂತ್ರಜ್ಞರ ಮುಖದಲ್ಲಿ ಸಂತಸ ಮೂಡಿತು.

ಚಂದ್ರಯಾನ-3 ಉಡ್ಡಯನ ಯಶಸ್ವಿ ಬಗ್ಗೆ ಟ್ವೀಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ, ಚಂದ್ರಯಾನ-3 ಯೋಜನೆಯನ್ನು ಯಶಸ್ವಿಯಾಗಿ ಉಡ್ಡಯನ ಮಾಡಿದ ಇಸ್ರೋಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದನೆ ಸಲ್ಲಿಸಿದ್ದಾರೆ. “ದೇಶಕ್ಕೆ ಇದು ಹೆಮ್ಮೆಯ ಕ್ಷಣ. ಭಾರತದ ಬಾಹ್ಯಾಕಾಶ ಸಂಶೋಧನೆ ಹಾಗೂ ನಾವೀನ್ಯತೆಯಲ್ಲಿ ಹೊಸ ಮೈಲಿಗಲ್ಲು” ಎಂದು ಬಣ್ಣಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಧಾನಿ ನರೇಂದ್ರ ಮೋದಿ ಕೂಡ ಟ್ವೀಟ್‌ ಮಾಡಿದ್ದು, “ಭಾರತದ ಬಾಹ್ಯಾಕಾಶ ಸಾಹಸದಲ್ಲಿ ಚಂದ್ರಯಾನ-3 ಹೊಸ ಅಧ್ಯಾಯ ಬರೆದಿದೆ. ಇದು ಪ್ರತಿಯೊಬ್ಬ ಭಾರತೀಯನ ಕನಸುಗಳು ಮತ್ತು ಮಹತ್ವಾಕಾಂಕ್ಷೆಗಳನ್ನು ಮತ್ತಷ್ಟು ಎತ್ತರಕ್ಕೆ ಏರಿಸಿದೆ. ಈ ಮಹತ್ವದ ಸಾಧನೆಯು ನಮ್ಮ ವಿಜ್ಞಾನಿಗಳ ನಿರಂತರ ಸಮರ್ಪಣೆಗೆ ಸಾಕ್ಷಿಯಾಗಿದೆ. ನಾನು ಅವರ ಚೈತನ್ಯ ಮತ್ತು ಜಾಣ್ಮೆಯನ್ನು ಅಭಿನಂದಿಸುತ್ತೇನೆ’ ಎಂದು ಮೆಚ್ಚುಗೆ ಸೂಚಿಸಿದ್ದಾರೆ.


eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...