ಚಿಕ್ಕಮಗಳೂರು | ನ್ಯಾಯ ಸಿಗದಿದ್ದಕ್ಕೆ ಮನನೊಂದು ಕೋರ್ಟ್​ ಆವರಣದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

Date:

ನ್ಯಾಯ ಸಿಗದೆ ಇದ್ದಿದ್ದಕ್ಕೆ ನೊಂದ ಯುವಕನೊಬ್ಬ ಕೋರ್ಟ್‌ ಆವರಣದಲ್ಲಿಯೇ ವಿಷ ಸೇವಿಸಿ ಆತ್ಮಹತ್ಯಗೆ ಯತ್ನಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ನಡೆದಿದೆ.

ಮಲ್ಲಿಕಾರ್ಜುನ (34) ಆತ್ಮಹತ್ಯೆಗೆ ಯತ್ನಿಸಿದ ಯುವಕ. ಈತ ಕಡೂರು ತಾಲೂಕಿನ ದೇವರಕಾರೇಹಳ್ಳಿಯ ನಿವಾಸಿ. ಜಮೀನು ವಿವಾದದ ಹಿನ್ನೆಲೆ, ಮಲ್ಲಿಕಾರ್ಜುನ್ ನ್ಯಾಯಾಲಯ ಮೆಟ್ಟಿಲೇರಿದ್ದರು.

ನ್ಯಾಯಾಲಯದಲ್ಲಿ ವಿಚಾರಣೆ ಬಳಿಕ ತಮ್ಮ ಪರವಾಗಿ ತೀರ್ಪು ಬಾರದ ಹಿನ್ನೆಲೆ, ಕೋರ್ಟ್‌ ಆವರಣದಲ್ಲಿಯೇ ವಿಡಿಯೋ ರೆಕಾರ್ಡ್‌ ಮಾಡಿ ವಿಷ ಸೇವನೆ ಮಾಡಿದ್ದಾನೆ. ಬಳಿಕ, ಅಸ್ವಸ್ಥಗೊಂಡ ಯುವಕನನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತಂದೆಯ ನಿಧನದ ಬಳಿಕ ಜಮೀನು ಲಪಟಾಯಿಸಲು ನನ್ನ ಮೇಲೆ ಸುಳ್ಳು ಪ್ರಕರಣ ದಾಖಲು ಮಾಡಿದ್ದಾರೆ. ಅಲ್ಲದೇ, ನಮ್ಮ ವಕೀಲರು ಕೂಡ ಇದರಲ್ಲಿ ಶಾಮೀಲಾಗಿದ್ದಾರೆ” ಎಂದು ಮಲ್ಲಿಕಾರ್ಜುನ್ ಆರೋಪ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಐದು ಕಡೆ ಪ್ರವೇಶ, ನಿರ್ಗಮನ ಜತೆಗೆ 18 ಕಿ.ಮೀ ಸುರಂಗ ರಸ್ತೆ ನಿರ್ಮಾಣ; ಬಿಬಿಎಂಪಿ ಪ್ರಸ್ತಾಪ

ನಾನು ಕೈ ಕಾಲು ಮುಗಿದರೂ ನ್ಯಾಯಾಲಯದಲ್ಲಿ ನನ್ನನ್ನು ಏನು ಕೇಳಲಿಲ್ಲ. ಜಮೀನು ಉಳಿಸಿಕೊಳ್ಳಲು ₹20 ಲಕ್ಷ ಸಾಲ ಮಾಡಿದ್ದೇನೆ. ಅಲ್ಲದೇ, ಈ ಬಗ್ಗೆ ಸಿಎಂ, ಡಿಸಿಎಂ ಹಾಗೂ ಸಚಿವರಿಗೆ ಪತ್ರ ಬರೆದಿದ್ದೇನೆ. ಆದರೂ, ನನ್ನ ಪತ್ರಕ್ಕೆ ಸ್ಪಂದನೆ ಸಿಕ್ಕಿಲ್ಲ. ಅಮ್ಮ ನನ್ನನ್ನು ಕ್ಷಮಿಸು, ನೀನು ಚೆನ್ನಾಗಿರು. ನನ್ನ ಸಾವಿಗೆ ಎಂ.ಬಿ.ಷಡಕ್ಷರಪ್ಪ ತಮ್ಮಂದಿರು, ಅವರ ಅಣ್ಣನ ಮಕ್ಕಳು ಮತ್ತು ರಾಜು ಕಾರಣ” ಎಂದು ಹೇಳಿದ್ದಾರೆ.

“ನನಗೆ ನ್ಯಾಯ ಸಿಕ್ಕಿಲ್ಲ. ಈ ಔಷಧಿ ಕುಡಿದು ನ್ಯಾಯಾಲಯದಲ್ಲೇ ಸಾಯುತ್ತಿದ್ದೇನೆ” ಎಂದು ಮಲ್ಲಿಕಾರ್ಜುನ್​ ವಿಷ ಸೇವಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...