ಚಿತ್ರದುರ್ಗ | ಅಂಬೇಡ್ಕರ್ ಸಂವಿಧಾನ ಸಂರಕ್ಷಣಾ ಸಮಿತಿಯಿಂದ ನಾರಾಯಣ ಗುರು ಜಯಂತಿ. ಪದಾಧಿಕಾರಿಗಳ ಆಯ್ಕೆ

Date:

“ಒಂದೇ ಜಾತಿ, ಒಂದೇ ಮತ, ಒಂದೇ ದೈವ ಮನುಜಗೆ’ ಎಂಬ ಮಹತ್ವಪೂರ್ಣ ಸಂದೇಶವನ್ನು ಜಗತ್ತಿಗೆ ಸಾರಿದ ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರು ಅವರ ಜಯಂತಿಯನ್ನು ಅಂಬೇಡ್ಕರ್ ಸಂವಿಧಾನ ಸಂರಕ್ಷಣಾ ಸಮಿತಿ (ರಿ) ಚಿತ್ರದುರ್ಗ ಜಿಲ್ಲಾ ಸಮಿತಿ ವತಿಯಿಂದ ಚಿತ್ರದುರ್ಗ ಪ್ರವಾಸಿ ಮಂದಿರದಲ್ಲಿ ಆಚರಿಸಲಾಯಿತು.‌ ಇದೇ ವೇಳೆ ಚಿತ್ರದುರ್ಗ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಅಂದಿನ ಕಾಲದಲ್ಲಿ ಹಿಂದುಳಿದವರನ್ನು ಶೋಷಣೆ ಮಾಡಲಾಗುತ್ತಿತ್ತು. ಜೊತೆಗೆ ದೇವಸ್ಥಾನಗಳಿಗೆ ಪ್ರವೇಶವಿರಲಿಲ್ಲ. ಮೇಲು ಜಾತಿಯವರು ನಡೆಯುವ ದಾರಿಯಲ್ಲಿ ನಡೆಯುವಂತಿರಲಿಲ್ಲ. ಮಹಿಳೆಯರು ಕುಪ್ಪಸ ತೊಡುವಂತಿರಲಿಲ್ಲ. ಆಭರಣ ಧರಿಸುವಂತಿರಲಿಲ್ಲ. ಕಾಲಿಗೆ ಚಪ್ಪಲಿ ಹಾಕುವಂತಿರಲಿಲ್ಲ. ಇಂತಹ ಸಂದರ್ಭದಲ್ಲಿ ಸಾಮಾಜಿಕ ಸುಧಾರಣೆಗಾಗಿ ಬಂದ ಗುರುಗಳು ಅಸಮಾನತೆ ತೊಲಗಿಸಲು, ಕಂದಾಚಾರ, ಮೂಢನಂಬಿಕೆಗಳನ್ನು ಹೋಗಲಾಡಿಸಿ ಸಾಮಾಜಿಕ ಕ್ರಾಂತಿ ಮಾಡಿದವರು ನಾರಾಯಣ ಗುರು” ಎಂದು ಮುಖಂಡರು ಸ್ಮರಿಸಿದರು.

ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ ರಾಮಚಂದ್ರ ಅವರ ಮಾರ್ಗದರ್ಶನದಲ್ಲಿ ರಾಜ್ಯ ಸಮಿತಿ ಹಾಗೂ ಚಿತ್ರದುರ್ಗ ಜಿಲ್ಲಾ ಸಮಿತಿಯು ರಾಜ್ಯ ಹಿರಿಯ ಸಲಹಾಗಾರರನ್ನಾಗಿ ತಿಪ್ಪೇಸ್ವಾಮಿ ಪಿ. ಎಂ. ಅಲ್ಪಸಂಖ್ಯಾತರ ಘಟಕ ಜಿಲ್ಲಾಧ್ಯಕ್ಷರನ್ನಾಗಿ ಸಾಧಿಕ್ (ಸೀಮೆಎಣ್ಣೆ) ಜಿಲ್ಲಾ ಕಾರ್ಯಾಧ್ಯಕ್ಷರನ್ನಾಗಿ ದಾದಾಪೀರ್ ಎಸ್. ಕಾರ್ಮಿಕ ಘಟಕ ಜಿಲ್ಲಾಧ್ಯಕ್ಷರನ್ನಾಗಿ ಶರಣಪ್ಪ, ಚಿತ್ರದುರ್ಗ ತಾಲ್ಲೂಕು ಅಧ್ಯಕ್ಷರಾಗಿ ನಾಗರಾಜ್ ಕೆ, ಚಿತ್ರದುರ್ಗ ಜಿಲ್ಲಾ ಯುವ ಘಟಕದ ನೂತನ ಪದಾಧಿಕಾರಿಗಳಾಗಿ ಯುವ ಘಟಕ ಗೌರವಾಧ್ಯಕ್ಷರನ್ನಾಗಿ ಗೌತಮ್ ಎಚ್, ಯುವ ಘಟಕ ಉಪಾಧ್ಯಕ್ಷರನ್ನಾಗಿ ನಿತಿನ್, ಯುವ ಘಟಕ ಪ್ರಧಾನ ಕಾರ್ಯದರ್ಶಿ ಅಭಿಷೇಕ್, ಯುವ ಘಟಕ ಕಾರ್ಯದರ್ಶಿಯನ್ನಾಗಿ ಮಾರುತಿ, ಯುವ ಘಟಕ ಕಾರ್ಯದರ್ಶಿಯನ್ನಾಗಿ ಗಂಗೂಲಿ, ಯುವ ಘಟಕ ಕಾರ್ಯದರ್ಶಿಯನ್ನಾಗಿ ವೆಂಕಟೇಶ್ ಇವರುಗಳನ್ನು ರಾಜ್ಯ ಸಮಿತಿ ಹಾಗೂ ಜಿಲ್ಲಾ ಸಮಿತಿ ಹಾಗೂ ಜಿಲ್ಲಾ ಯುವ ಘಟಕ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ವೈದ್ಯಕೀಯ ಕಾಲೇಜಿನಲ್ಲಿ ಅನಿವಾಸಿ ಕೋಟಾವು ಶಿಕ್ಷಣ ವಿರೋಧಿ: ಶಿಕ್ಷಣ ಉಳಿಸಿ ಸಮಿತಿ

ಸಭೆಯಲ್ಲಿ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ರಾಮಚಂದ್ರ ಕೆ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ರಾಘವೇಂದ್ರ ಆರ್, ರಾಜ್ಯ ಕಾರ್ಯದರ್ಶಿಗಳಾದ ಮಾರುತಿ ಎನ್, ರಾಜ್ಯ ಕಾರ್ಯದರ್ಶಿ ರೇವಣ್ಣಸಿದ್ದಪ್ಪ. ಬಿ. ಕಲ್ಕುಂಟೆ ರಾಜ್ಯ ಕಾನೂನು ಸಲಹೆಗಾರರಾದ ಗೋಣೆಪ್ಪ ಸಂಗೊಳ್ಳಿ, ಬೆಂಗಳೂರು ವಿಭಾಗ ಅಧ್ಯಕ್ಷರಾದ ನರಸಿಂಹಸ್ವಾಮಿ, ಜಿಲ್ಲಾಧ್ಯಕ್ಷರಾದ ಆರ್ ಶಿವರಾಜ್ ಕುಮಾರ್, ಜಿಲ್ಲಾ ಉಪಾಧ್ಯಕ್ಷರಾದ ಲಕ್ಷ್ಮಣರಾವ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಲ್ಲೇಶ್, ಯುವ ಘಟಕ ಜಿಲ್ಲಾಧ್ಯಕ್ಷರಾದ ಮಳ್ಳಪ್ಪ, ಎಸ್ಟಿ ಘಟಕ ಜಿಲ್ಲಾಧ್ಯಕ್ಷರಾದ ಓ ರಾಮಣ್ಣ, ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾದ ತಿಪ್ಪೇಸ್ವಾಮಿ, ಹಿರಿಯೂರು ತಾಲೂಕು ಅಧ್ಯಕ್ಷರಾದ ಓಂಕಾರ್ ಮೂರ್ತಿ, ಜಿಲ್ಲಾ ಅಲ್ಪಸಂಖ್ಯಾತರ ಘಟಕ ಜಿಲ್ಲಾ ಕಾರ್ಯದರ್ಶಿಯಾದ ಮೆಹಬೂಬ್ ಬಾಷ ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಕೌಟುಂಬಿಕ ಕಲಹ: ಪತ್ನಿ, ಮಗಳು ಸೇರಿ ಐವರ ಮೇಲೆ ಆಸಿಡ್‌ ದಾಳಿ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ವ್ಯಕ್ತಿಯೊಬ್ಬ ತನ್ನನ್ನು ಬಿಟ್ಟು ಹೋಗಿದ್ದ ಪತ್ನಿ,...

ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

ನಾಪತ್ತೆಯಾದ ಪ್ರತಿ ಜೀವವೂ ಮರಳಿ ತನ್ನ ಮನೆ ಸೇರುವಂತಾಗಲು ಮತ್ತು ಮುಂದಿನ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉದ್ದಿಮೆ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ರಸರೆಕ್ಷನ್: ಇಂದ್ರಿಯಗಳ ಮೂಲಕ ಒಂದು ಶತಮಾನದ ಸಿನೆಮಾ ಪಯಣ ಬಿಡಿಸಿಡುವ ಚಿತ್ರ

'ರಸರೆಕ್ಷನ್' ಸಿನಿಮಾ ಅಂತಿಮವಾಗಿ ಹೇಳುವುದೇನೆಂದರೆ ಬದುಕು ಎಷ್ಟೇ ದೀರ್ಘವಾಗಿದ್ದರೂ, ಕನಸುಗಳಿಲ್ಲದಿದ್ದರೆ ಅದು...