ಗ್ಯಾರಂಟಿ ಯೋಜನೆಗಳ ಜಾಹೀರಾತಿನಲ್ಲಿ ಸಿಎಂ, ಡಿಸಿಎಂ ಫೋಟೋ; ಆಕ್ಷೇಪಿಸಿದ್ದ ಅರ್ಜಿ ವಜಾ

Date:

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಜಾಹೀರಾತಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಸಚಿವರ ಭಾವಚಿತ್ರಗಳು ಹಾಕಲಾಗುತ್ತಿದೆ. ಅವರೆಲ್ಲರ ಭಾವಚಿತ್ರ ಮತ್ತು ಹೆಸರುಗಳನ್ನು ಹಾಕದಂತೆ ನಿರ್ಬಂಧಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಬೆಳಗಾವಿಯ ಆರ್‌ಟಿಐ ಕಾರ್ಯಕರ್ತ ಭೀಮಪ್ಪ ಗಡಾದ ಅವರು ಗ್ಯಾರಂಟಿ ಯೋಜನೆಗಳ ಜಾಹೀರಾತಿನಲ್ಲಿ ಮುಖ್ಯಮಂತ್ರಿ,ಉಪಮುಖ್ಯಮಂತ್ರಿಗಳ ಫೋಟೋ-ಭಾವಚಿತ್ರ ಹಾಕದಂತೆ ನಿರ್ಬಂಧ ಹೇರಬೇಕು ಎಂದು ಪಿಐಎಲ್‌ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ‍ಪಿ.ಬಿ.ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಎಸ್ ಉಮಾಪತಿ, “ಸುಪ್ರೀಂ ಕೋರ್ಟ್‌ ಆದೇಶದ ಪ್ರಕಾರ ಸರ್ಕಾರಿ ಜಾಹೀರಾತುಗಳಲ್ಲಿ ಮುಖ್ಯಮಂತ್ರಿ, ಮಂತ್ರಿಗಳ ಭಾವಚಿತ್ರ ಬಳಸುವಂತಿಲ್ಲ. ಅಧಿಕಾರದಲ್ಲಿರುವವರು ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಭಾವಚಿತ್ರ ಹಾಕಿಕೊಂಡು ಪ್ರಚಾರ ಮಾಡುತ್ತಿದ್ದಾರೆ” ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಾದ ಆಲಿಸಿದ ಹೈಕೋರ್ಟ್‌, “ಸರ್ಕಾರಿ ಜಾಹೀರಾತುಗಳಲ್ಲಿ ಸರ್ಕಾರ ನಡೆಸುವವರು ಭಾವಚಿತ್ರ ಹಾಕಿಕೊಳ್ಳುವುದರಲ್ಲಿ ತಪ್ಪೇನಿದೆ? ಜನರಿಗೆ ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದವರು ತಾವು ಯಾವ-ಯಾವ ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ ಎಂಬ ಕುರಿತು ಮತದಾರರಿಗೆ ಮಾಹಿತಿ ನೀಡುತ್ತಾರೆ. ಒಂದು ವೇಳೆ ಇದಕ್ಕೆ ನಿಮ್ಮ ಆಕ್ಷೇಪ ಇದ್ದರೆ, ಚುನಾವಣೆಯಲ್ಲಿ ಅಂಥವರನ್ನು ಆಯ್ಕೆ ಮಾಡದಿದ್ದರೆ ಆಯಿತು” ಎಂದು ಹೇಳಿದೆ. ಅರ್ಜಿಯನ್ನು ವಜಾಗೊಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...