ಶಾಸಕರ ಮನವಿಗೆ ಸಿಎಂ ಸ್ಪಂದನೆ: ಬೆಂಗಳೂರು – ಮೈಸೂರು ದಶಪಥ ಹೆದ್ದಾರಿ ಸಮಸ್ಯೆ ಪರಿಹಾರಕ್ಕೆ ಕ್ರಮ

Date:

  • ಹತ್ತಾರು ಕಾಮಗಾರಿಗಳು ಅಪೂರ್ಣದ ಬಗ್ಗೆ ಗಮನ ಸೆಳೆದಿದ್ದ ಶಾಸಕರು
  • ಸಂಬಂಧಪಟ್ಟ ಅಧಿಕಾರಿಗಳ ಜತೆ ಸಭೆ ನಡೆಸಿ ತೀರ್ಮಾನಿಸಲು ಸೂಚನೆ

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಮೂಲ ಸೌಕರ್ಯವನ್ನು ಕಲ್ಪಿಸದಿರುವುದರ ಬಗ್ಗೆ ಮಂಡ್ಯ ಭಾಗದ ಶಾಸಕರ ಮನವಿಗೆ ಸ್ಪಂದಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯ ನಡುವೆ ಬರುವ ಸರ್ವಿಸ್ ರಸ್ತೆಗಳು, ಇನ್ನಿತರ ಕಾಮಗಾರಿಗಳು ಪೂರ್ಣಗೊಳ್ಳದಿರುವುದು, ಮೂಲ ಸೌಕರ್ಯವನ್ನು ಕಲ್ಪಿಸದಿರುವುದರ ಬಗ್ಗೆ ಮಂಡ್ಯ ಭಾಗದ ಶಾಸಕರಾದ ದಿನೇಶ್ ಗೂಳಿಗೌಡ, ರವಿಕುಮಾರ್ ಗಣಿಗ ಹಾಗೂ ರಮೇಶ್ ಬಂಡಿಸಿದ್ದೇಗೌಡ ಅವರ ಮನವಿ ಸಲ್ಲಿಸಿದ್ದರು.

ಸಿಎಂ ಸೂಚನೆ ಮೇರೆಗೆ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರು ಸಂಬಂಧಪಟ್ಟ ಅಧಿಕಾರಿಗಳ ತುರ್ತು ಸಭೆ ಕರೆದು ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಸೂಚಿಸಿದ್ದಾರೆ. ಅಲ್ಲದೆ, ಜನಪ್ರತಿನಿಗಳ ಅಭಿಪ್ರಾಯವನ್ನು ಪಡೆಯುವಂತೆಯೂ ಸೂಚಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈಗಾಗಲೇ ಈ ಭಾಗದಲ್ಲಿ ಎರಡೆರಡು ಕಡೆ ಟೋಲ್‌ ಸಂಗ್ರಹ ಮಾಡಲಾಗುತ್ತಿದೆ. ಆದರೆ, ಅಗತ್ಯ ಮೂಲ ಸೌಲಭ್ಯವನ್ನು ಕಲ್ಪಿಸಲಾಗಿಲ್ಲ. ಈ ಬಗ್ಗೆ ಗಮನ ಹರಿಸಬೇಕೆಂದು ಶಾಸಕರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಕೋರಿದ್ದರು. ಇದಕ್ಕೆ ಕೂಡಲೇ ಸ್ಪಂದಿಸಿರುವ ಸಿಎಂ ಸಿದ್ದರಾಮಯ್ಯ ಅವರು ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆಯನ್ನು ನೀಡಿದ್ದಾರೆ.

ಈ ನಿಟ್ಟಿನಲ್ಲಿ ಸಂಬಂಧಪಟ್ಟವರ ಸಭೆ ಕರೆದು ಸಮಸ್ಯೆಯನ್ನು ಇತ್ಯರ್ಥ ಮಾಡುವಂತೆ ಪಿಡಬ್ಲ್ಯುಡಿ ಮುಖ್ಯ ಕಾರ್ಯದರ್ಶಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿಯವರು ಸೂಚನೆಯನ್ನು ನೀಡಿದ್ದಾರೆ.

CM Siddaramaiah 6

ಮನವಿ ಪತ್ರದಲ್ಲೇನಿತ್ತು?

ಬೆಂಗಳೂರು-ಮೈಸೂರು ನಡುವಿನ ದಶಪಥ ಹೆದ್ದಾರಿಯು ಮಾರ್ಚ್ ತಿಂಗಳಲ್ಲಿ ಲೋಕಾರ್ಪಣೆಗೊಂಡಿದೆ. ಇದರಿಂದ ಬೆಂಗಳೂರು ಹಾಗೂ ಸಾಂಸ್ಕೃತಿಕ ನಗರಿ ಮೈಸೂರಿಗೆ ಶೀಘ್ರ ಸಂಚಾರಕ್ಕೆ ಅನುಕೂಲವಾಗಿದೆ ಎಂಬ ಅಂಶ ಬಿಟ್ಟರೆ ಇದು ಜನರಿಗೆ ನಿಜಕ್ಕೂ ಜೇಬು ಸುಡುವ ರಹದಾರಿಯಾಗಿದೆ. ಈ ಮಾರ್ಗದಲ್ಲಿ ಜನರು ಟೋಲ್ ಕಟ್ಟಿ ಕಟ್ಟಿ ಬಸವಳಿಯುವ ಸ್ಥಿತಿ ನಿರ್ಮಾಣವಾಗುತ್ತಿದೆ. ಈಗ ಇದ್ದದ್ದು ಸಾಲದೆಂಬಂತೆ ಶ್ರೀರಂಗಪಟ್ಟಣದಲ್ಲಿ ಸಹ ಇದೇ ಜುಲೈ 1ರಿಂದ ಟೋಲ್ ಸಂಗ್ರಹಕ್ಕೆ ಮುಂದಾಗಲಿರುವುದು ಜನರಿಗೆ ನುಂಗಲಾರದ ತುತ್ತಾಗಿದೆ. ಇದಕ್ಕೆ ತಕ್ಕಂತೆ ಅಗತ್ಯ ಸೌಲಭ್ಯವನ್ನು ಕಲ್ಪಿಸಬೇಕು.

ಈ ಸುದ್ದಿ ಓದಿದ್ದೀರಾ? ಮರಳು ಮಾಫಿಯಾ ವಿರುದ್ಧ ಟ್ವಿಟ್ಟರ್‌ನಲ್ಲಿ ಬಂದ ದೂರಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ : ಕ್ರಮಕ್ಕೆ ಸೂಚನೆ

ಇಲ್ಲಿ ಎಲ್ಲ ಕಾಮಗಾರಿಗಳೂ ಪೂರ್ಣಗೊಂಡಿವೆಯೆ ಎಂಬುದನ್ನು ನೋಡುವುದಾದರೆ ಖಂಡಿತವಾಗಿಯೂ ಆಗಿಲ್ಲ. ಆಗಬೇಕಿರುವ ಕಾಮಗಾರಿಗಳು ಹತ್ತಾರು ಇವೆ. ಅವು ಇನ್ನೂ ಕುಂಟುತ್ತಾ ಸಾಗಿವೆ. ಕೇಳಿದರೆ ಕುಂಟು ನೆಪಗಳನ್ನು ಹೇಳಲಾಗುತ್ತದೆ. ಆದರೆ, ಜನರಿಂದ ದುಡ್ಡು ಪಡೆಯಲು ಮಾತ್ರ ಇದಾವುದೂ ಲೆಕ್ಕಕ್ಕೇ ಬಾರದು ಎಂದರೆ ಹೇಗೆ? ಉದಾಹರಣೆಯಾಗಿ ಹೇಳುವುದಾದರೆ, ಮಂಡ್ಯ ತಾಲೂಕಿನ ಹನಕೆರೆ ಅಂಡರ್ ಪಾಸ್, ಹಳೇ ಬೂದನೂರು ಹಾಗೂ ಹೊಸ ಬೂದನೂರು ನಡುವಿನ ಸರ್ವಿಸ್ ರಸ್ತೆಗೆ ನಿರ್ಮಾಣ ಮಾಡುತ್ತಿರುವ ಸೇತುವೆ ಸೇರಿದಂತೆ ಹಲವು ಕಾಮಗಾರಿಗಳು ಅಪೂರ್ಣವಾಗಿವೆ. ಇನ್ನು ಹಲವು ಕಡೆ ಸರ್ವಿಸ್ ರಸ್ತೆ ಕಾಮಗಾರಿ ಸಹ ಪೂರ್ಣಗೊಂಡಿಲ್ಲ. ಈ ಹಂತದಲ್ಲಿ ಟೋಲ್ ಸಂಗ್ರಹ ಮಾಡುವುದು ಸರಿ ಅಲ್ಲ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈ ನಡೆ ಖಂಡನಾರ್ಹವಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಪ್ರವೇಶ ಮಾಡಬೇಕು. ಸರ್ವಿಸ್ ರಸ್ತೆಗಳು ಸೇರಿದಂತೆ ಇನ್ನಿತರ ಕಾಮಗಾರಿ ಪೂರ್ಣವಾಗುವ ಸಂಬಂಧ ಕ್ರಮ ವಹಿಸಬೇಕು ಎಂದು ಶಾಸಕರಾದ ದಿನೇಶ್ ಗೂಳಿಗೌಡ, ರವಿಕುಮಾರ್ ಗಣಿಗ ಹಾಗೂ ರಮೇಶ್ ಬಂಡಿಸಿದ್ದೇಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...