ಕುಮಾರಸ್ವಾಮಿಗೆ ಸುಳ್ಳು ಬಿಟ್ಟು ಬೇರೇನೂ ಗೊತ್ತಿಲ್ಲ, ಸುಳ್ಳೇ ಅವರ ಮನೆದೇವರು: ಸಿಎಂ ಸಿದ್ದರಾಮಯ್ಯ

Date:

  • ಕುಮಾರಸ್ವಾಮಿ ಅವರದು ದ್ವೇಷ ಹಾಗೂ ಅಸೂಯೆಗಳ ರಾಜಕಾರಣ
  • ಬರಪರಿಹಾರದ ಮನವಿಗೆ ಕೇಂದ್ರ ಇನ್ನೂ ಸ್ಪಂದಿಸಿಲ್ಲ: ಸಿದ್ದರಾಮಯ್ಯ

ಮಾಜಿ ಮುಖ್ಯಮತ್ರಿ ಎಚ್ ಡಿ ಕುಮಾರಸ್ವಾಮಿ ಯಾವಾಗ ಸತ್ಯ ಹೇಳಿದ್ದಾರೆ? ಯಾವಾಗಲೂ ಹಿಟ್ ಅಂಡ್ ರನ್ ಕೇಸ್ ಅವರದ್ದು. ವಿಧಾನಸಭಾ ಅಧಿವೇಶನದಲ್ಲಿ ಚರ್ಚೆ ಮಾಡಲಿ. ಉತ್ತರ ಕೊಡುತ್ತೇವೆ. ಸರ್ಕಾರ ಓಡಿಹೋಗುವುದಿಲ್ಲ. ಆದರೆ, ಸುಳ್ಳನ್ನೆಲ್ಲಾ ತನಿಖೆ ಮಾಡಿಸಲು ಆಗುವುದಿಲ್ಲ. ಏನಾದರೂ ಆಧಾರ ಇದ್ದರೆ, ದಾಖಲಾತಿ ಇದ್ದರೆ ತನಿಖೆ ಮಾಡಬಹುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈಸೂರಿನಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿ, “ಕುಮಾರಸ್ವಾಮಿಯಾಗಲಿ, ನಮ್ಮ ಪಕ್ಷದವರಾಗಲಿ ತಪ್ಪು ಮಾಡಿದರೆ ಶಿಕ್ಷೆ ಅನುಭವಿಸಲೇಬೇಕು. ವಿದ್ಯುತ್ ಬಿಲ್ಲನ್ನು ಬೆಸ್ಕಾಂನವರು ನೀಡುತ್ತಾರೆ. ಕುಮಾರಸ್ವಾಮಿಯವರು ಮೊದಲು ತಪ್ಪನ್ನೇ ಮಾಡಿಲ್ಲ ಎಂದವರು. ನಂತರ ದಂಡವನ್ನು ಕಟ್ಟಿರುವುದು, ಅವರು ಅಪರಾಧ ಮಾಡಿರುವುದನ್ನು ಒಪ್ಪಿಕೊಂಡಂತಾಗಿದೆ” ಎಂದರು.

ಜೆಡಿಎಸ್‌ನಿಂದ ಮತ್ತಷ್ಟು ನಾಯಕರು ಕಾಂಗ್ರೆಸ್‌ಗೆ ಬರಲಿದ್ದಾರೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ,  “ಜೆಡಿಎಸ್ ಅಥವಾ ಬಿಜೆಪಿಯ ನಾಯಕರು, ಕಾಂಗ್ರೆಸ್ ನ ಸಿದ್ದಾಂತ ಹಾಗೂ ನಾಯಕತ್ವವನ್ನು ಒಪ್ಪಿ ಬಂದಲ್ಲಿ, ಅವರನ್ನು ಸ್ವಾಗತಿಸಲಾಗುವುದು. ರಾಜ್ಯದ ಒಟ್ಟು 224 ಸ್ಥಾನದಲ್ಲಿ 136 ನ್ನು ಕಾಂಗ್ರೆಸ್ ಪಡೆದಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಕಾಂಗ್ರೆಸ್ ನ ಶಕ್ತಿಯನ್ನು ವಿಸ್ತರಿಸಬೇಕಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೋಮುವಾದಿ ಪಕ್ಷಗಳು ಮತ್ತೆ ಅಧಿಕಾರಕ್ಕೆ ಬರಬಾರದು. ಜೆಡಿಎಸ್ ನ ಕುಮಾರಸ್ವಾಮಿಯವರು ಕೇವಲ ದ್ವೇಷ ಹಾಗೂ ಅಸೂಯೆಗಳ ರಾಜಕಾರಣ ಮಾಡುತ್ತಾರೆ. ನನ್ನ ಮಗ ಯತೀಂದ್ರ ಆಶ್ರಯ ಸಮಿತಿ ಅಧ್ಯಕ್ಷನಾಗಿದ್ದು, ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದರೆ, ಅವರ ಮೇಲೆ ವೃಥಾ ಆರೋಪ ಮಾಡುವ ಮೂಲಕ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ನನ್ನ ರಾಜಕೀಯ ಜೀವನದಲ್ಲಿ ಇದುವರೆಗೂ ದ್ವೇಷದ ರಾಜಕಾರಣವನ್ನು ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ. ಕುಮಾರಸ್ವಾಮಿಯವರಿಗೆ ಸುಳ್ಳು ಹೇಳುವುದು ಬಿಟ್ಟರೆ ಬೇರೇನೂ ತಿಳಿದಿಲ್ಲ. ಸುಳ್ಳೇ ಅವರ ಮನೆದೇವರು” ಎಂದು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ಕುಮಾರಸ್ವಾಮಿ ಹುಚ್ಚರಾಗಿದ್ದು, ತಾಳ್ಮೆ ಕಳೆದುಕೊಂಡಿದ್ದಾರೆ: ಡಿ ಕೆ ಶಿವಕುಮಾರ್‌ ತಿರುಗೇಟು

ರಾಮಮಂದಿರ ಕಟ್ಟಲು ನಮ್ಮದೇನು ವಿರೋಧವಿಲ್ಲ

ಜನವರಿ 22 ರಂದು ರಾಮಮಂದಿರ ಉದ್ಘಾಟನೆಗೊಳ್ಳಲಿದ್ದು ಇದರ ಲಾಭವನ್ನು ಬಿಜೆಪಿ ಪಡೆಯಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, “ವಿವಾದ ಬಹಳ ವರ್ಷಗಳಿಂದ ಇದ್ದು, ನ್ಯಾಯಾಲಯದಲ್ಲಿ ಇತ್ಯರ್ಥವಾಗಿದೆ. ರಾಮಮಂದಿರ ಕಟ್ಟಲು ನಮ್ಮದೇನು ವಿರೋಧವಿಲ್ಲ. ಅದರಿಂದ ಮತದಾರರು ಬದಲಾಗುತ್ತಾರೆ ಎನ್ನುವುದು ಸುಳ್ಳು. ನಮ್ಮ ದೇಶದ ಜನ ವೈವಿಧ್ಯತೆಯಲ್ಲಿ ಏಕತೆಯನ್ನು ಕಂಡುಕೊಂಡಿದ್ದಾರೆ. ಬ್ರಿಟಿಷರ ಹಾಗೂ ಮೊಘಲರ ದಾಳಿಯಾದರೂ ಒಂದು ದೇಶವಾಗಿ ನಾವು ಉಳಿದುಕೊಂಡಿದ್ದೇವೆ. ಈ ದೇಶದಲ್ಲಿ ಅನೇಕ ಜಾತಿ, ಭಾಷೆಗಳು ಹಾಗೂ ಧರ್ಮಗಳಿದ್ದರೂ ದೇಶವಾಗಿ ಒಂದಾಗಿದ್ದು, ಐಕ್ಯತೆ, ಒಗ್ಗಟ್ಟಿನಿಂದ. ಉಳಿದುಕೊಂಡು ಬಂದಿದ್ದೇವೆ. ಒಳಗೊಳ್ಳುವಿಕೆಯಲ್ಲಿ ನಂಬಿಕೆ ಇಟ್ಟವರು ದೇಶದಲ್ಲಿ ಹೆಚ್ಚಿದ್ದಾರೆ” ಎಂದರು.

ಬರಪರಿಹಾರದ ಮನವಿಗೆ ಕೇಂದ್ರ ಇನ್ನೂ ಸ್ಪಂದಿಸಿಲ್ಲ

ರಾಜ್ಯ ಸರ್ಕಾರ ಬರಪರಿಹಾರ ನೀಡುವ ಸಂಬಂಧ ಕೇಂದ್ರಕ್ಕೆ ಒಂದು ವಾರದ ಗಡುವು ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಕೇಂದ್ರದಿಂದ 17900 ಕೋಟಿ ರೂ.ಗಳ ಬರಪರಿಹಾರಕ್ಕೆ ಮನವಿ ಸಲ್ಲಿಸಲಾಗಿದೆ. ಹಾಗೂ ಕೇಂದ್ರ ಬರ ಅಧ್ಯಯನ ತಂಡ ಪರಿಶೀಲನೆ ನಡೆಸಿ ಒಂದು ತಿಂಗಳಾದರೂ ಕೂಡ ವರದಿಯನ್ನು ನೀಡಿಲ್ಲ ಹಾಗೂ ಸರ್ಕಾರದ ಮನವಿಗೆ ಕೇಂದ್ರ ಇದುವರೆಗೂ ಸ್ಪಂದಿಸಿಲ್ಲ. ಬರಪರಿಹಾರ ರಾಜ್ಯಕ್ಕೆ ನೀಡುವ ಭಿಕ್ಷೆಯಲ್ಲ. ಎನ್ ಡಿ ಆರ್ ಎಫ್ ನಡಿ ಪರಿಹಾರವನ್ನು ನೀಡಬೇಕಿದ್ದು, ಅದನ್ನು ರಾಜ್ಯ ನೀಡಿರುವ ತೆರಿಗೆಯ ಮೊತ್ತವೇ ಆಗಿದೆ. ಬರಪರಿಹಾರಕ್ಕೆ ಸಂಬಂಧಿಸಿದಂತೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆಗಳನ್ನು ನಡೆಸಲಾಗಿದೆ” ಎಂದು ಹೇಳಿದರು.

ಹಗರಣಗಳ ತನಿಖೆ

“ಹಿಂದಿನ ಸರ್ಕಾರದ ಹಗರಣಗಳ ತನಿಖೆ ನಡೆಯುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, 40% ಕಮಿಷನ್, ಕೋವಿಡ್, ಬಿಟ್ ಕಾಯಿನ್ ಸೇರಿದಂತೆ ಇತರೆ ಹಗರಣಗಳ ತನಿಖೆಗೆ ಆಯೋಗಗಳನ್ನು ರಚಿಸಲಾಗಿದ್ದು, ವರದಿಯನ್ನು ನಿರೀಕ್ಷಿಸಲಾಗಿದೆ” ಎಂದರು.

WhatsApp Image 2023 04 01 at 3.53.40 PM e1680350106945
+ posts

ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಪೋಸ್ಟ್ ಹಂಚಿಕೊಳ್ಳಿ:

ಶರಣು ಚಕ್ರಸಾಲಿ
ಶರಣು ಚಕ್ರಸಾಲಿ
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...