ಆರೋಗ್ಯದಲ್ಲಿ ತುಸು ಏರು–ಪೇರು; ಕಲಾಪಗಳಿಂದ ದೂರ ಉಳಿದ ಸಿಎಂ ಸಿದ್ದರಾಮಯ್ಯ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರಾದ ಕಾರಣ, ಬುಧವಾರ ಅವರು ಸದನ ಕಲಾಪಗಳಿಂದ ದೂರ ಉಳಿದರು. ಬೆಳಗಾವಿ ನಗರದ ಪ್ರವಾಸಿ ಮಂದಿರದಲ್ಲೇ ಇಡೀ ದಿನ ವಿಶ್ರಾಂತಿ ಪಡೆದರು.

ನ್ಯಾಷನಲ್‌ ಹೆರಾಲ್ಡ್‌’ ಪ್ರಕರಣದಲ್ಲಿ ನ್ಯಾಯಾಲಯ ನೀಡಿದ ತೀರ್ಪನ್ನು ಬೆಂಬಲಿಸಿ, ಕೇಂದ್ರ ಸರ್ಕಾರ ಸುಳ್ಳು ಪ್ರಕರಣ ದಾಖಲಿಸಿದ್ದನ್ನು ಖಂಡಿಸಿ ಸುವರ್ಣ ವಿಧಾನಸೌಧದ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ ಪಾಲ್ಗೊಂಡರು. ಒಂದು ತಾಸು ಧರಣಿ ಕುಳಿತರು. ಸದನದೊಳಗೆ ಹೋದ ಅವರು, ಕೆಲ ಸಮಯದ ನಂತರ ಪ್ರವಾಸಿ ಮಂದಿರಕ್ಕೆ ಮರಳಿದರು.

ಆರೋಗ್ಯ ವಿಚಾರಿಸಿದ ಸಚಿವರು, ಶಾಸಕರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಕೂಡ ಪ್ರವಾಸಿ ಮಂದಿರಕ್ಕೆ ಬಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದರು.

ಇದನ್ನು ಓದಿದ್ದೀರಾ? ಚಿಕ್ಕೋಡಿ ಗೋಕಾಕ್ ಹೊಸ ಜಿಲ್ಲೆ ರಚನೆಗೆ ನಿಯೋಗ ಮನವಿ

‘ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಲು ಮಾತ್ರ ಬಂದಿದ್ದೇನೆ. ರಾಜಕೀಯ, ಅಭಿವೃದ್ಧಿ ಯಾವುದೇ ಚರ್ಚೆ ಮಾಡಿಲ್ಲ. ಅವರಿಗೆ ಧೈರ್ಯ ಹೇಳೋಣ ಎಂದು ಬಂದಿದ್ದೆ. ಅವರೇ ನಮಗೆ ಧೈರ್ಯ ಹೇಳುವಷ್ಟು ಆರೋಗ್ಯವಾಗಿದ್ದಾರೆ’ ಎಂದು ರಮೇಶ ಹಾರಕಿಹೊಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ನಂತರ ಬಂದ ಸಚಿವ ಭೈರತಿ ಸುರೇಶ್‌, ‘ಸಿ.ಎಂ ಅವರಿಗೆ ಹೊಟ್ಟೆನೋವು ಕಾಣಿಸಿಕೊಂಡಿದೆ. ಅವರೊಂದಿಗೆ ನಾನೂ ಊಟ ಮಾಡಿ ಬಂದಿದ್ದೇನೆ. ಆರೋಗ್ಯ ಸುಧಾರಿಸಿದೆ. ನಾಳೆ ಸದನದಲ್ಲಿ ಉತ್ತರ ಕೊಡಬೇಕಾದ ವಿಷಯಗಳ ಮಾಹಿತಿ ಸಂಗ್ರಹಿಸುತ್ತಿದ್ದಾರೆ’ ಎಂದರು.

ಶಾಸಕ ಜಿ.ಟಿ.ದೇವೇಗೌಡ, ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಸೇರಿ ಹಲವರು ಭೇಟಿ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...