ಆಸ್ಟ್ರೇಲಿಯನ್ ಹೂಡಿಕೆದಾರರಿಗೆ ಸಿಎಂ ಸಿದ್ದರಾಮಯ್ಯ ಆಹ್ವಾನ

Date:

  • ರಾಜ್ಯದ ಮೂಲಸೌಕರ್ಯ ಅಭಿವೃದ್ಧಿ ವಲಯದಲ್ಲಿ ಹೂಡಿಕೆ
  • ಗ್ರೀನ್ ಫೀಲ್ಡ್ ರೋಡ್ ಕಾರಿಡಾರ್ ವಲಯಗಳಲ್ಲಿ ಹೂಡಿಕೆ

ರಾಜ್ಯದ ಮೂಲಸೌಕರ್ಯ ಅಭಿವೃದ್ಧಿ ವಲಯದಲ್ಲಿ ಹೂಡಿಕೆ ಮಾಡುವಂತೆ ಆಸ್ಟ್ರೇಲಿಯನ್ ಹೂಡಿಕೆದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹ್ವಾನ ನೀಡಿದರು.

ಗುರುವಾರ ತಮ್ಮನ್ನು ಭೇಟಿಯಾದ ನವದೆಹಲಿಯಲ್ಲಿನ ಆಸ್ಟ್ರೇಲಿಯನ್ ಹೈಕಮಿಷನರ್ ಫಿಲಿಪ್ ಗ್ರೀನ್ ಅವರೊಂದಿಗೆ ವಿವಿಧ ವಿಷಯಗಳ ಕುರಿತು ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಹಾಗೂ ಆಸ್ಟ್ರೇಲಿಯಾ ನಡುವಿನ ಬಾಂಧವ್ಯ ಇನ್ನಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಈ ವಿಷಯ ತಿಳಿಸಿದರು.

“ರಾಜ್ಯದಲ್ಲಿ ನಗರ ಸಾರಿಗೆ, ಗ್ರೀನ್ ಫೀಲ್ಡ್ ರೋಡ್ ಕಾರಿಡಾರ್ ಮೊದಲಾದ ವಲಯಗಳಲ್ಲಿ ಹೂಡಿಕೆ ಮಾಡಬಹುದು. ಇದಲ್ಲದೆ ಬೆಂಗಳೂರು ದೇಶದಲ್ಲಿಯೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ತಂತ್ರಜ್ಞಾನ ನಗರಿ, ಜ್ಞಾನನಗರಿ ಎಂದೆಲ್ಲ ಹೆಸರುವಾಸಿಯಾಗಿದೆ. ಕೌಶಲ್ಯಯುಕ್ತ ಮಾನವ ಸಂಪನ್ಮೂಲ ಹಾಗೂ ಅಕುಶಲ ಮಾನವ ಸಂಪನ್ಮೂಲವೂ ಇಲ್ಲಿ ಲಭ್ಯವಿದ್ದು, ಹೂಡಿಕೆಗೆ ರಾಜ್ಯದಲ್ಲಿ ವಿಪುಲ ಅವಕಾಶವಿದೆ” ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಅರ್ಹ ರೈತರಿಗೆ ತಲಾ 2000 ರೂ.ವರೆಗೆ ಬೆಳೆ ಪರಿಹಾರ: ಸಿದ್ದರಾಮಯ್ಯ ಘೋಷಣೆ

ಇದಕ್ಕೆ ಪ್ರತಿಕ್ರಿಯಿಸಿದ ಹೈಕಮಿಷನರ್ ಫಿಲಿಪ್ ಗ್ರೀನ್ ಅವರು ತಾವು ಹೂಡಿಕೆದಾರರ ನಿಯೋಗದೊಂದಿಗೆ ಭೇಟಿಯಾಗುವುದಾಗಿ ಹಾಗೂ ಹೂಡಿದಾರರ ಸಭೆ ಆಯೋಜಿಸುವುದಾಗಿ ತಿಳಿಸಿದರು.

ಶಿಕ್ಷಣ ಕ್ಷೇತ್ರದಲ್ಲಿಯೂ ಕರ್ನಾಟಕ ಹಾಗೂ ಆಸ್ಟ್ರೇಲಿಯಾ ನಡುವೆ ಹಲವು ಒಡಂಬಡಿಕೆಗಳಿಗೆ ಸಹಿ ಮಾಡಲಾಗಿದೆ. ಮುಂದೆಯೂ ಈ ಬಾಂಧವ್ಯ ಮುಂದುವರೆಯಲಿದೆ ಎಂದು ಸಹಮತ ವ್ಯಕ್ತಪಡಿಸಲಾಯಿತು.

ಈ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ಕಾನ್ಸಲ್ ಜನರಲ್ ಹಿಲರಿ ಮೆಕ್ ಗೀಚಿ (Ms Hilary McGeachy), ದಕ್ಷಿಣ ಏಷ್ಯಾ ದಲ್ಲಿ ಆಸ್ಟ್ರೇಲಿಯಾದ ವಾಣಿಜ್ಯ ಹಾಗೂ ವ್ಯಾಪಾರ ಸಚಿವೆ ಕ್ಯಾಥರೀನ್ ಗಲ್ಲಘರ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...