ಸೆಸ್-ಸಚಾರ್ಜ್ ಮೂಲಕ 6 ಲಕ್ಷ ಕೋಟಿ ರೂ.ಸಂಗ್ರಹ; ರಾಜ್ಯಗಳಿಗೆ ಒಂದು ಪೈಸೆಯೂ ಇಲ್ಲ: ಸಿಎಂ ಸಿದ್ದರಾಮಯ್ಯ

Date:

ಕೇಂದ್ರ ಸರ್ಕಾರ ಸೆಸ್ ಮತ್ತು ಸಚಾರ್ಜ್ ಮೂಲಕ ಸುಮಾರು 6 ಲಕ್ಷ ಕೋಟಿ ರೂ. ವಸೂಲಿ ಮಾಡುತ್ತಿದೆ. ಇದರಲ್ಲಿ ರಾಜ್ಯಗಳಿಗೆ ಒಂದು ಪೈಸೆಯೂ ಬರುವುದಿಲ್ಲ. ಈ ಬಗ್ಗೆ ಧ್ವನಿ ಎತ್ತಿ ರಾಜ್ಯಗಳಿಗೂ ಪಾಲು ನೀಡಿ ಎಂದು ನಮ್ಮ ಸರ್ಕಾರ ಒತ್ತಾಯಿಸಿದ್ದರೂ, ಇದು ಜಾರಿಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸೋಮವಾರ ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಕುರಿತ ವಂದನಾ ನಿರ್ಣಯದ ಮೇಲೆ ನಡೆದ ಚರ್ಚೆಗೆ ಸರ್ಕಾರದ ಪರವಾಗಿ ಉತ್ತರಿಸಿದ ಅವರು, ಕೇಂದ್ರ ಸರಕಾರದಿಂದ ರಾಜ್ಯಕ್ಕೆ ಅನುದಾನ ಕಡಿತದ ಬಗ್ಗೆ ನಾನೇ ಹಲವು ಬಾರಿ ಸಂಬಂಧಿಸಿದವರಿಗೆ ಪತ್ರ ಬರೆದಿದ್ದೇನೆ. ಕೇಂದ್ರ ಹಣಕಾಸು ಸಚಿವರನ್ನು ಈ ಸಂಬಂಧ ಭೇಟಿ ಮಾಡಲಾಗಿದೆ. ಜಿಎಸ್‍ಟಿ ಸಮಿತಿ ಸಭೆಯಲ್ಲಿ ರಾಜ್ಯ ಸರ್ಕಾರ ತನ್ನ ನಿಲುವನ್ನು ಮಂಡಿಸಿದರೂ, ಅದನ್ನು ಪರಿಗಣಿಸಲಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

2022 ರಿಂದ ಪ್ರತಿ ವರ್ಷ ರಾಜ್ಯಕ್ಕೆ 18 ರಿಂದ 20 ಸಾವಿರ ಕೋಟಿ ರೂ.ಗಳಷ್ಟು ಜಿಎಸ್‍ಟಿ ಪರಿಹಾರ ನಷ್ಟವಾಗಿದೆ. ಅಂದರೆ, 4 ವರ್ಷಗಳಲ್ಲಿ 75 ರಿಂದ 80 ಸಾವಿರ ಕೋಟಿ ರೂ.ನಷ್ಟವಾಗಿದೆ. ಜಿಎಸ್‍ಟಿ ಪರಿಹಾರದ ಸೆಸ್ಸನ್ನು ಕೇಂದ್ರದವರು ಜನರಿಂದ ಸಂಗ್ರಹಿಸುವುದನ್ನು ನಿಲ್ಲಿಸಿದ್ದರೆ ಒಪ್ಪುತ್ತಿದ್ದೆ. 2025-26 ರಲ್ಲಿ 1.67 ಲಕ್ಷ ಕೋಟಿ ರೂ.ಗಳಷ್ಟು ಸೆಸ್ಸನ್ನು ಸಂಗ್ರಹಿಸಿದ್ದಾರೆ. ಈ ವರ್ಷ ಎಲ್ಲ ಸೆಸ್, ಸಚಾರ್ಜ್ ಮುಂತಾದವು ಸೇರಿ 6 ಲಕ್ಷ ಕೋಟಿ ರೂ.ಸಂಗ್ರಹಿಸುತ್ತಿದ್ದಾರೆ ಮುಖ್ಯಮಂತ್ರಿ ಅಂಕಿ ಅಂಶ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

16ನೆ ಹಣಕಾಸು ಆಯೋಗದ ಶಿಫಾರಸ್ಸುಗಳನ್ನು ಕೇಂದ್ರ ಸರಕಾರ ಒಪ್ಪಿಕೊಂಡಿದೆ. 14ನೆ ಹಣಕಾಸು ಆಯೋಗವು ನಮಗೆ ಶೇ.4.71ರಷ್ಟು ತೆರಿಗೆ ಹಂಚಿಕೆ ಮಾಡಿತ್ತು. ಅದಕ್ಕಿಂತ ಹೆಚ್ಚಿನ ಅನುದಾನ ಸಿಕ್ಕರೆ ಮಾತ್ರ ನಮಗೆ ನ್ಯಾಯ ದೊರೆಯುತ್ತದೆ. ಆದರೆ, 16ನೆ ಹಣಕಾಸು ಆಯೋಗವು ಶೇ.4.131 ರಷ್ಟನ್ನು ಮಾತ್ರ ಶಿಫಾರಸ್ಸು ಮಾಡಿದೆ. ತೆರಿಗೆ ಪಾಲನ್ನು ಶೇ.50ಕ್ಕೆ ಏರಿಸಿ ಎಂದು ಕೇಳಿದ್ದೆವು. ಆದರೆ, ಶೇ.41ರಷ್ಟೇ ಕೊಟ್ಟಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ| ₹100 ತೆರಿಗೆಯಲ್ಲಿ ₹5 ಕೂಡ ವಾಪಸು ಸಿಗ್ತಿಲ್ಲ; ರಾಜ್ಯಕ್ಕೆ ಮೋದಿ ಮುಂದುವರೆಸಿದ ಅಗಾಧ ಅನ್ಯಾಯ!

ಕರ್ನಾಟಕದ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ 5 ವರ್ಷಗಳಲ್ಲಿ 37,372 ಕೋಟಿ ರೂ. ಸಿಕ್ಕಿದ್ದರೆ, ಉತ್ತರಪ್ರದೇಶಕ್ಕೆ 1.17 ಲಕ್ಷ ಕೋಟಿ ರೂ., ಮಹಾರಾಷ್ಟ್ರಕ್ಕೆ 79.6 ಸಾವಿರ ಕೋಟಿ ರೂ., ಮಧ್ಯಪ್ರದೇಶಕ್ಕೆ 48 ಸಾವಿರ ಕೋಟಿ ರೂ. ದೊರೆಯಲಿದೆ. ಹಾಗೆಯೇ ಪ್ರಕೃತಿ ವಿಕೋಪ ನಿಧಿಯಲ್ಲೂ ರಾಜ್ಯಕ್ಕೆ ಭಾರಿ ಅನ್ಯಾಯ ಮಾಡಲಾಗಿದೆ. ನಮಗೆ 5,135 ಕೋಟಿ ರೂ., ಮಹಾರಾಷ್ಟ್ರಕ್ಕೆ 31,597 ಕೋಟಿ ರೂ., ಗುಜರಾತಿಗೆ 6,766 ಕೋಟಿ ರೂ. ಸಿಗಲಿದೆ ಎಂದು ಅವರು ಮಾಹಿತಿ ನೀಡಿದರು.

ಬೆಂಗಳೂರಿನ ಅಭಿವೃದ್ಧಿಗೆ, ಕಲ್ಯಾಣ ಕರ್ನಾಟಕ, ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು, ಅನುದಾನಗಳನ್ನು ಕೇಳಿದ್ದೆವು. ನಯಾಪೈಸೆ ಕೊಡಲಿಲ್ಲ. ಹಿಂದೆ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ‘ಗ್ರಾಮೀಣಾಭಿವೃದ್ಧಿಗೆ ಮನರೆಗಾ ಸಂಜೀವಿನಿ’ ಎಂದಿದ್ದರು. ಆದರೆ ಅಂದು ಬೆಂಬಲಿಸಿದವರು ಇಂದು ಬಿಜೆಪಿಯವರೊಂದಿಗೆ ಹೊಂದಾಣಿಕೆ ಮಾಡಿಕೊಂಡು ವಿರೋಧಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಟೀಕಿಸಿದರು.

ಕೇಂದ್ರ ಹಣಕಾಸು ಸಚಿವರು ಕೃಷ್ಣಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ.ಅನುದಾನ ನೀಡುವುದಾಗಿ ಘೋಷಿಸಿದ್ದನ್ನು ಕೊಡಲಿಲ್ಲ. ಇದನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಿಲ್ಲ. 15ನೆ ಹಣಕಾಸು ಆಯೋಗದಲ್ಲಿ ಶಿಫಾರಸ್ಸು ಮಾಡಲಾಗಿದ್ದ 11,495 ಕೋಟಿ ರೂ.ಗಳು ರಾಜ್ಯಕ್ಕೆ ನೀಡಲಿಲ್ಲ. 14ನೆ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಕೊಡುತ್ತಿದ್ದ ಶೇ.4.71ರಷ್ಟು ತೆರಿಗೆ ಹಂಚಿಕೆ ಪ್ರಮಾಣವನ್ನು 15ನೆ ಆಯೋಗದಲ್ಲಿ ಶೇ.3.64ಕ್ಕೆ ಇಳಿಸಿದ್ದರಿಂದ ಐದು ವರ್ಷಗಳಲ್ಲಿ ರಾಜ್ಯಕ್ಕೆ 1.25 ಲಕ್ಷ ಕೋಟಿ ರೂ.ಕೊರತೆ ಉಂಟಾಯಿತು. ರಾಜ್ಯದಿಂದ 4.50 ಲಕ್ಷ ಕೋಟಿ ರೂ. ತೆರಿಗೆ ಕೊಟ್ಟರೆ, ನಮಗೆ ಕೇವಲ 55 ರಿಂದ 60 ಸಾವಿರ ಕೋಟಿ ರೂ. ಬರುತ್ತದೆ ಎಂದು ಅವರು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...