ಕಾಮೆಡ್-​​​ಕೆ ಯುಜಿಇಟಿ ಪರೀಕ್ಷೆ ಫಲಿತಾಂಶ ಪ್ರಕಟ

Date:

ಕರ್ನಾಟಕ ವೈದ್ಯಕೀಯ, ಎಂಜಿನಿಯರಿಂಗ್‌ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಒಕ್ಕೂಟ (ಕಾಮೆಡ್-ಕೆ) ನಡೆಸಿದ್ದ ಯುಜಿಇಟಿ ಪರೀಕ್ಷೆ ಫಲಿತಾಂಶ ಮೇ 24ರಂದು ಮಧ್ಯಾಹ್ನ ಪ್ರಕಟವಾಗಿದೆ. ಬೆಂಗಳೂರಿನ ಬಾಲಸತ್ಯ ಸರವಣನ್‌ ಪರೀಕ್ಷೆಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ.

ಪರೀಕ್ಷೆ ಬರೆದ 1,03,799 ಅಭ್ಯರ್ಥಿಗಳ ಪೈಕಿ 35,124 ಮಂದಿ ಕರ್ನಾಟಕದವರಾಗಿದ್ದಾರೆ. ಅಲ್ಲದೇ, ಮೊದಲ 10 ರ‍್ಯಾಂಕ್ ಪಡೆದವರಲ್ಲಿ 8 ಅಭ್ಯರ್ಥಿಗಳು ಕರ್ನಾಟಕದವರೇ ಆಗಿದ್ದಾರೆ. 68,675 ಇತರ ರಾಜ್ಯಗಳ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಸುಮಾರು 1.2 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಕಾಮೆಡ್‌ ಕೆ ಅಂಡರ್ ಗ್ರಾಜುಯೇಟ್ ಪ್ರವೇಶ ಪರೀಕ್ಷೆ 2024 ಫಲಿತಾಂಶವನ್ನು ಕಾಮೆಡ್‌ ಕೆನ ಅಧಿಕೃತ ವೆಬ್‌ಸೈಟ್ comedk.org ನಲ್ಲಿ ಪರಿಶೀಲನೆ ಮಾಡಬಹುದು.

ಕರ್ನಾಟಕದ 150 ಖಾಸಗಿ ಎಂಜಿನಿಯರಿಂಗ್‌ ಕಾಲೇಜು, ದೇಶದ ಕೆಲವು ಕಡೆ ಇರುವ 40 ಖಾಸಗಿ ವಿವಿಗಳಲ್ಲಿ ಸುಮಾರು 22 ಸಾವಿರ ಎಂಜಿನಿಯರಿಂಗ್‌ ಸೀಟುಗಳ ಪ್ರವೇಶಾತಿಗಾಗಿ ಈ ಆರ್ಹತಾ ಪರೀಕ್ಷೆಯನ್ನು ನಡೆಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೇ 12ರಂದು ಕಾಮೆಡ್‌ ಕೆ ಯುಜಿಇಟಿ 2024 ಪರೀಕ್ಷೆ ನಡೆಸಲಾಯಿತು. ಕಳೆದ ವರ್ಷದ ಫಲಿತಾಂಶದ ಅಂಕಿಅಂಶಗಳಿಗೆ ಹೋಲಿಸಿದರೆ, ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಕಳೆದ ವರ್ಷ 96,607 ಅಭ್ಯರ್ಥಿಗಳು ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದು, 77,232 ಮಂದಿ ಹಾಜರಾಗಿದ್ದರು. ಅಂತಿಮ ಉತ್ತರದ ಕೀಗಳನ್ನು ಮೇ 21ರಂದು ಬಿಡುಗಡೆ ಮಾಡಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪ್ರಭುದ್ಯಾ ಕೊಲೆ ಪ್ರಕರಣ; 2 ಸಾವಿರಕ್ಕಾಗಿ ಕೊಲೆಗೈದು ಆತ್ಮಹತ್ಯೆ ಎಂದು ಬಿಂಬಿಸಿದ ಅಪ್ರಾಪ್ತ

ಕಾಮೆಡ್‌ ಕೆ ಸ್ಕೋರ್‌ಕಾರ್ಡ್ ಹೆಸರು ಜತೆಗೆ ಅರ್ಜಿ ಅಥವಾ ನೋಂದಣಿ ಸಂಖ್ಯೆ, ಜನ್ಮ ದಿನಾಂಕ, ಪರೀಕ್ಷಾ ಪ್ರವೇಶ ಟಿಕೆಟ್ ಸಂಖ್ಯೆ, ವರ್ಗ, ಆಯ್ದ ಕೋರ್ಸ್, ಫೋಟೋ ಐಡಿ, ಇತರ ವಿವರಗಳು, ಪಡೆದ ಸ್ಕೋರ್ ಮತ್ತು ಪಡೆದ ಶ್ರೇಣಿಯಂತಹ ವಿವರಗಳನ್ನು ಒಳಗೊಂಡಿರುತ್ತದೆ. ಫಲಿತಾಂಶಗಳಲ್ಲಿ ಯಾವುದೇ ವ್ಯತ್ಯಾಸಗಳಿದ್ದಲ್ಲಿ, ಅಭ್ಯರ್ಥಿಗಳು ತಕ್ಷಣದ ತಿದ್ದುಪಡಿಗಾಗಿ ಪರೀಕ್ಷಾ ಪ್ರಾಧಿಕಾರವನ್ನು ತಕ್ಷಣವೇ ಸಂಪರ್ಕಿಸಬಹುದು ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...