ಜೋಶಿ, ಸಂತೋಷರನ್ನು ಹೊಣೆ ಮಾಡುವ ಧೈರ್ಯ ಬಿಜೆಪಿಗರಿಗಿಲ್ಲ ಏಕೆ: ಕಾಂಗ್ರೆಸ್‌ ಪ್ರಶ್ನೆ

Date:

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಕುರಿತು ನಾಯಕರು ಪರಸ್ಪರ ಆರೋಪ ಪ್ರತ್ಯಾರೋಪ ಮಾಡುತ್ತಿದ್ದಾರೆ. ಈ ಕುರಿತು ಕಾಂಗ್ರೆಸ್‌ ಪ್ರತಿಕ್ರಿಯೆ ನೀಡಿದ್ದು, ಮೋದಿಯನ್ನು ಹೊಣೆ ಮಾಡಿದರೂ ಜೋಶಿ, ಸಂತೋಷರನ್ನು ಹೊಣೆ ಮಾಡುವ ಧೈರ್ಯ ಬಿಜೆಪಿಗರಿಗಿಲ್ಲ ಏಕೆ ಎಂದು ಪ್ರಶ್ನಿಸಿದೆ.

ವಲಸಿಗರಿಂದಲೇ ಬಿಜೆಪಿ ಈ ಬಾರಿ ಸೋಲು ಅನುಭವಿಸಿತ್ತು ಎಂದು ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ನೀಡಿದ್ದ ಹೇಳಿಕೆ, ಬಿಜೆಪಿಯ ಆಂತರಿಕ ಚರ್ಚೆಗೆ ಕಾರಣವಾಗಿತ್ತು. ಈ ಹೇಳಿಕೆಗೆ ಎಂ ಪಿ ರೇಣುಕಾಚಾರ್ಯ ಕೂಡ ದನಿಗೂಡಿಸಿ, ಡಾ. ಕೆ ಸುಧಾಕರ್‌ ವಿರುದ್ಧ ಹರಿಹಾಯ್ದಿದ್ದರು. ಮುಂದುವರಿದು ‘ಪ್ರಧಾನಿ ಮೋದಿಯನ್ನು ಬೀದಿಬೀದಿ ಸುತ್ತಿಸಿದ್ದೇ ಬಿಜೆಪಿ ಸೋಲಿಗೆ ಕಾರಣ’ ಎಂದು ಹೇಳಿದ್ದರು

ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್‌, “ಬಿಜೆಪಿಯ ಹೀನಾಯ ಸೋಲಿಗೆ ಮೋದಿಯೇ ಕಾರಣ ಎಂಬ ವಾಸ್ತವ ಸತ್ಯ ಒಪ್ಪಿಕೊಳ್ಳುವಲ್ಲಿಗೆ ಆತ್ಮಾವಲೋಕನ ಬಂದಿದೆ. ಗೆಲುವಿಗಷ್ಟೇ ಅಲ್ಲ, ಸೋಲಿಗೂ ಮೋದಿಯೇ ಕಾರಣ ಎಂಬ ಸತ್ಯ ಒಪ್ಪಿಕೊಂಡಿದ್ದಕ್ಕೆ ಕರ್ನಾಟಕ ಬಿಜೆಪಿಯನ್ನು ಅಭಿನಂದಿಸಲೇಬೇಕು. ಮೋದಿಯನ್ನು ಹೊಣೆ ಮಾಡಿದರೂ ಜೋಶಿ, ಸಂತೋಷರನ್ನು ಹೊಣೆ ಮಾಡುವ ಧೈರ್ಯ ಬಿಜೆಪಿಗರಿಗಿಲ್ಲ ಏಕೆ?” ಎಂದು ಕುಟುಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಲಸಿಗರಿಂದಲೇ ಬಿಜೆಪಿ ಸೋತಿತು ಎನ್ನುವವರ ಕೂಗಿಗೆ ಈಶ್ವರಪ್ಪನವರ ನಂತರ ರೇಣುಕಾಚಾರ್ಯ ಕೂಡ ದನಿಗೂಡಿಸಿದ್ದಾರೆ. ಪ್ರಣಾಳಿಕೆಯ ಹೊಣೆಯನ್ನು ವಲಸಿಗ ಸುಧಾಕರ್ ಅವರಿಗೆ ಹೊರಿಸಿದ್ದು, ಮತ್ತೊಂದು ಬಣಕ್ಕೆ ಅಸಹನೆ ತರಿಸಿದೆ. ವಲಸಿಗರ ಭವಿಷ್ಯ ಮುಗಿಸಲು ಬಿಜೆಪಿಯಲ್ಲೇ ದೊಡ್ಡ ಪಡೆ ಹೊಂಚು ಹಾಕಿದೆ, ಯಶಸ್ವಿಯೂ ಆಗಿದೆ. ಚುನಾವಣೆಗೂ ಮುಂಚೆ ಕರ್ನಾಟಕ ಬಿಜೆಪಿ ಸ್ಥಿತಿ ಮನೆಯೊಂದು ಮುನ್ನೂರು ಬಾಗಿಲಾಗಿತ್ತು, ಚುನಾವಣೆ ನಂತರ ಮೂರು ಸಾವಿರ ಬಾಗಿಲಾಗಿದೆ” ಎಂದು ಕಾಂಗ್ರೆಸ್‌ ವ್ಯಂಗ್ಯವಾಡಿದೆ.

ಈ ಸುದ್ದಿ ಓದಿದ್ದೀರಾ? ವಿದ್ಯಾರ್ಥಿನಿ ಬರೆದ ಸಾಮಾಜಿಕ ಕಳಕಳಿ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...