ಕೊರೋನಾ | ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ಅಗತ್ಯವಿಲ್ಲ: ಡಾ.ಶರಣ್ ಪ್ರಕಾಶ್ ಪಾಟೀಲ್

Date:

ಹೊಸದಾಗಿ ಕಾಣಿಸಿಕೊಂಡಿರುವ ರೂಪಾಂತರ ಜೆಎನ್- 1 ಸೋಂಕು ರಾಜ್ಯದಲ್ಲಿ ಕಾಣಿಸಿಕೊಂಡಿದ್ದರೂ ಜನತೆ ಅನಗತ್ಯವಾಗಿ ಆತಂಕಕ್ಕೆ ಒಳಪಡದೆ, ಕೆಲವು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಸಲಹೆ ನೀಡಿದರು.

ಮಂಗಳವಾರ ಬೆಂಗಳೂರಿನ ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖಾ ವ್ಯಾಪ್ತಿಗೆ ಒಳಪಡುವ ವಿವಿಧ ಆಸ್ಪತ್ರೆಗಳ ಮುಖ್ಯಸ್ಥರು, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷರು, ಸದಸ್ಯರ ಜೊತೆ ಸಭೆ ನಡೆಸಿದ ಅವರು, ಪ್ರಸ್ತುತ ರಾಜ್ಯದಲ್ಲಿ ಕೋವಿಡ್ -19 ನಿಯಂತ್ರಣ ಹಾಗೂ ಪೂರ್ವ ಸಿದ್ದತೆಗಳ ಕುರಿತು ಮಾಹಿತಿ ಪಡೆದುಕೊಂಡು ಸುದ್ದಿಗಾರರಿಗೆ ಮಾಹಿತಿ ಹಂಚಿಕೊಂಡರು.

“ರೂಪಾಂತರ ಜೆಎನ್-1 ಸೋಂಕು ಕಾಣಿಸಿಕೊಂಡಿದ್ದರೂ ಇದು ಮನುಷ್ಯರ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರುವ ಸಾಧ್ಯತೆ ಇಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಹಾಗೂ ತಜ್ಞರೇ ಹೇಳಿದ್ದಾರೆ. ಕೆಲವು ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳುವ ಕುರಿತು ಜನಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೇಂದ್ರ ಸರ್ಕಾರ ರಾಜ್ಯಕ್ಕೆ 30 ಸಾವಿರ ಕೋವಿಡ್ ವ್ಯಾಕ್ಸಿನ್ ಬಂದಿದೆ. ಇದರ ಕೊರತೆಯಾಗದಂತೆ ಎಲ್ಲ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಂಡಿದ್ದೇವೆ. ರಾಜ್ಯದಲ್ಲಿ ಪ್ರತಿಯೊಬ್ಬ ಅರ್ಹರಿಗೆ ಕೋವಿಡ್ ಲಸಿಕೆ ನೀಡುವ ಅಗತ್ಯವಿಲ್ಲ. 60 ವರ್ಷ ಹಾಗೂ ದೀರ್ಘವ್ಯಾಧಿಯಿಂದ ಬಳಲುತ್ತಿರುವವರು ಬುಧವಾರದಿಂದಲೇ ಜಿಲ್ಲಾಸ್ಪತ್ರೆಗಳಲ್ಲಿ ಕೋವಿಡ್ ವಾಕ್ಸಿನ್ ತೆಗೆದುಕೊಳ್ಳಬಹುದು” ಎಂದು ಹೇಳಿದರು.

“ಒಂದು ಮತ್ತು 2ನೇ ಕೋವಿಡ್ ಸಂದರ್ಭದಲ್ಲಿ ಯಾವ ಲಸಿಕೆಯನ್ನು ನೀಡಲಾಗಿತ್ತೋ ಅದೇ ಲಸಿಕೆಯನ್ನು ನೀಡಲಿದ್ದೇವೆ. ಹೊಸ ಲಸಿಕೆ ನೀಡುವಂತೆ ಕೇಂದ್ರ ಸರ್ಕಾರದಿಂದ ನಮಗೆ ಯಾವುದೇ ನಿರ್ದೇಶನ ಬಂದಿಲ್ಲ” ಎಂದು ಪ್ರಶ್ನೆಯೊಂದಕ್ಕೆ ಸ್ಪಷ್ಟನೆ ನೀಡಿದರು.

“ಜನದಟ್ಟಣೆ ಮತ್ತಿತರ ಕಡೆ ಅಗತ್ಯ ಇರುವವರು ಮುಂಜಾಗ್ರತಾ ಕ್ರಮವಾಗಿ ಮಾಸ್ಕ್‌ಗಳನ್ನು ಧರಿಸುವುದು ಉತ್ತಮ. ಆದರೆ ಕಡ್ಡಾಯವಾಗಿ ಮಾಸ್ಕ್‌ಗಳನ್ನು ಧರಿಸಲೇಬೇಕೆಂಬ ಆದೇಶವನ್ನು ಹೊರಡಿಸುವುದಿಲ್ಲ. ಹಾಗಂತ ಜನರು ಮೈ ಮರೆಯಬಾರದು” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅತ್ತ ಅತಿಥಿ ಉಪನ್ಯಾಸಕರು ಇತ್ತ ಸರಕಾರ; ನಡುವೆ ನಲುಗದಿರಲಿ ವಿದ್ಯಾರ್ಥಿಗಳು

“ಆಕ್ಸಿಜನ್ ಬೆಡ್, ಐಸಿಯು, ವೆಂಟಿಲೇಟರ್, ಔಷಧಗಳು, ಸೇರಿದಂತೆ ಲಭ್ಯವಿರುವ ಉಪಕರಣಗಳ ಬಗ್ಗೆ ಮಾಹಿತಿ ಪಡೆಯಲಾಗಿದೆ. ಕೆಲವು ಆಸ್ಪತ್ರೆಗಳಲ್ಲಿ ಸಿಬ್ಬಂದಿ ನೇಮಕ, ಉಪಕರಣಗಳ ಖರೀದಿಸುವ ಬಗ್ಗೆ ನನ್ನ ಗಮನಕ್ಕೆ ತಂದಿದ್ದಾರೆ. ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಕೋವಿಡ್ ಸಂಬಂಧ ಔಷಧಗಳನ್ನು ಖರೀದಿಸಲು ಹಣಕಾಸಿನ ಕೊರತೆ ಇಲ್ಲ” ಎಂದು ಸಚಿವರು ವಿವರಿಸಿದರು.

“ರಾಜ್ಯದಲ್ಲಿ ಇತ್ತೀಚೆಗೆ 10 ಮಂದಿ ಸಾವನ್ನಪ್ಪಿದ್ದರು. ಇದು ಕೋವಿಡ್ ಕಾರಣದಿಂದಾಗಿ ಮೃತಪಟ್ಟಿಲ್ಲ. ಅವರು ವಿವಿಧ ವ್ಯಾದಿಗಳಿಂದ ಬಳಲುತ್ತಿದ್ದರು. ಹೀಗಾಗಿ ಸಾವನ್ನಪ್ಪಿದ್ದಾರೆ” ಎಂದರು.

ಪ್ರತಿ ಜಿಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ 50 ಬೆಡ್‍ಗಳನ್ನು ಮೀಸಲಿಡಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ವೈದ್ಯಕೀಯ ಕಾಲೇಜಿನಲ್ಲಿ 18,141 ಸರ್ಕಾರಿ ಆಸ್ಪತ್ರೆಗಳಲ್ಲಿ 10 ಸಾವಿರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಬರುವ ಆಸ್ಪತ್ರೆಗಳಲ್ಲಿ 11,500 ಹಾಸಿಗೆಗಳು ಇವೆ” ಎಂದು ಹೇಳಿದರು.

ಸಭೆಯಲ್ಲಿ 99 ಮೆಡಿಕಲ್ ಕಾಲೇಜುಗಳು, 10 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ದೇಶಕರ ಜೊತೆ ಚರ್ಚೆ ನಡೆಸಲಾಗಿದೆ. ಎಲ್ಲ ಸರ್ಕಾರಿ ಕಾಲೇಜುಗಳಲ್ಲೂ ಪ್ರತ್ಯೇಕವಾದ ಆಕ್ಸಿಜನ್ ಬೆಡ್ ಮತ್ತು ಐಸಿಯು ವ್ಯವಸ್ಥೆ ಮಾಡಲಾಗಿದೆ. ಅಗತ್ಯ ಮಾನವ ಸಂಪನ್ಮೂಲಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ” ಎಂದರು.

ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ವೈದ್ಯಕೀಯ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕಿ ಡಾ.ಸುಜಾತ ರಾಥೋಡ, ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ ಎನ್‌ ಮಂಜುನಾಥ್, ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ.ರವಿ ಸೇರಿದಂತೆ ಹಿರಿಯ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...