ಮುಂಗಾರು ಮಳೆ ನಿರ್ವಹಣೆಗೆ ಸಜ್ಜಾಗುತ್ತಿರುವ ಪಾಲಿಕೆ; ಚರಂಡಿ ಸ್ವಚ್ಛತಾ ಕಾರ್ಯದಲ್ಲಿ ನಿರತ

Date:

ಇನ್ನೇನು ಬೇಸಿಗೆ ಕಳೆದು ಮಳೆಗಾಲ ಹತ್ತಿರ ಬರುತ್ತಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಮುಂಗಾರು ಮಳೆಗೆ ಸಜ್ಜಾಗುತ್ತಿದ್ದು, ಮೇ 30ರೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಪಾಲಿಕೆಯ ಮುಂಗಾರು ಪೂರ್ವ ಸಿದ್ಧತೆ ಕುರಿತು ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು, “ಮಳೆಗಾಲ ಮುಗಿಯುವವರೆಗೆ ಪ್ರತಿ ತಿಂಗಳ ಮೂರು ವಾರಕ್ಕೊಮ್ಮೆ ಚರಂಡಿಗಳನ್ನು ಸ್ವಚ್ಛಗೊಳಿಸುವಂತೆ ಎಸ್‌ಡಬ್ಲ್ಯೂಡಿ ವಿಭಾಗದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ” ಎಂದು ಹೇಳಿದ್ದಾರೆ.

ಹವಾಮಾನ ಇಲಾಖೆ ಮುನ್ಸೂಚನೆಯಂತೆ ಮುಂದಿನ ಕೆಲ ದಿನಗಳಲ್ಲಿ ಮುಂಗಾರು ಪೂರ್ವ ಮಳೆ ಸುರಿಯಲಿದೆ. ಮಳೆಯಿಂದಾಗಿ ನಗರದಲ್ಲಿ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗುವುದನ್ನು ತಪ್ಪಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರಮುಖವಾಗಿ ಚರಂಡಿ, ರಾಜಕಾಲುವೆಗಳಲ್ಲಿ ಶೇಖರಣೆಯಾಗಿರುವ ತ್ಯಾಜ್ಯ, ಹೂಳನ್ನು ತೆಗೆಯಲಾಗುತ್ತಿದೆ. ಅದಕ್ಕಾಗಿ ವಲಯ ಅಧಿಕಾರಿಗಳಿಗೆ ಮೇ 10ರೊಳಗೆ ಚರಂಡಿ, ರಾಜಕಾಲುವೆ ಸ್ವಚ್ಛಗೊಳಿಸುವಂತೆ ಸೂಚಿಸಲಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮನೆ ನಿರ್ಮಾಣಕ್ಕಾಗಿ ರಸ್ತೆಬದಿಯಲ್ಲಿ ಬಿಸಾಡಿರುವ ಅವಶೇಷಗಳು ಮತ್ತು ಇತರ ವಸ್ತುಗಳನ್ನು ತ್ವರಿತವಾಗಿ ನಾಗರಿಕರು ಸ್ವಚ್ಛಗೊಳಿಸಬೇಕು. ಇಲ್ಲದಿದ್ದರೇ, ಇದು ನೀರಿನ ಹರಿವಿಗೆ ತೊಂದರೆ ಉಂಟು ಮಾಡುತ್ತದೆ. ಅಲ್ಲದೇ, ರಸ್ತೆ ಬದಿ ಶೇಖರಣೆಯಾಗಿರುವ ತ್ಯಾಜ್ಯ ಮತ್ತು ಕಟ್ಟಡ ತ್ಯಾಜ್ಯವನ್ನು ಕೂಡಲೇ ತೆರವು ಮಾಡುವಂತೆಯೂ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ. ಜತೆಗೆ ರಸ್ತೆ ಬದಿ ಕಟ್ಟಡ ತ್ಯಾಜ್ಯ ಸುರಿಯುವವರನ್ನು ಪತ್ತೆ ಮಾಡಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆಯೂ ಹೇಳಲಾಗಿದೆ” ಎಂದು ಹೇಳಿದ್ದಾರೆ.

“ವಲಯ ಆಯುಕ್ತರು, ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆ, ಬಿಬಿಎಂಪಿ ಅರಣ್ಯ ಕೋಶ, ಬಿಡಬ್ಲ್ಯೂಎಸ್ಎಸ್ಬಿ ಹಾಗೂ ಬೆಸ್ಕಾಂ ಅಧಿಕಾರಿಗಳು ಸಭೆ ನಡೆಸಿ, ಮಳೆಗಾಲದಲ್ಲಿ ದೂರುಗಳನ್ನು ಪರಿಹರಿಸಲು 63 ಉಪವಿಭಾಗಗಳಲ್ಲಿ ವಾಟ್ಸಾಆಪ್ ಗ್ರೌಂಡ್ ರಚಿಸಲಾಗಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆಸ್ಕಾಂ ಅಧಿಕಾರಿಗಳಿಗೆ ಬೆದರಿಕೆ : ದೂರು ದಾಖಲು

ನಾವು ಎಲ್ಲ ಇಲಾಖೆಗಳೊಂದಿಗೆ ಸಮನ್ವಯದಿಂದ ಕೆಲಸ ಮಾಡುತ್ತಿದ್ದೇವೆ. ಪ್ರತಿ ಮೂರು ತಿಂಗಳಿಗೊಮ್ಮೆ ಎಸ್‌ಡಬ್ಲೂಡಿಯ 859 ಕಿಮೀ ಉದ್ದದ ಮಳೆನೀರಿನ ಚರಂಡಿಗಳ ಸ್ವಚ್ಛ ಮಾಡಲಾಗುತ್ತಿದೆ. ಮೇ 3ರವರೆಗೆ ಶೇ.75ರಷ್ಟು ಸ್ವಚ್ಛತಾ ಕಾರ್ಯ ನಡೆದಿದ್ದು, ಇನ್ನುಳಿದ ಕಾಮಗಾರಿಯನ್ನು ಒಂದು ವಾರದಲ್ಲಿ ಮಾಡಲಾಗುವುದು” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...