ಸಿಪಿಎಂ ಹಿರಿಯ ನಾಯಕ ನಿತ್ಯಾನಂದ ಸ್ವಾಮಿ ನಿಧನ

Date:

ಭಾರತ ಕಮ್ಯೂನಿಸ್ಟ್‌ ಪಕ್ಷದ (ಸಿಪಿಎಂ) ಕರ್ನಾಟಕ ರಾಜ್ಯ ಸಮಿತಿಯ ಮಾಜಿ ಕಾರ್ಯದರ್ಶಿ, ಕೃಷಿಕೂಲಿಕಾರ ಸಂಘದ ಮಾಜಿ ರಾಜ್ಯ ಅಧ್ಯಕ್ಷರೂ ಆಗಿದ್ದ ನಿತ್ಯಾನಂದ ಸ್ವಾಮಿ (77) ಅವರು ಸೋಮವಾರ ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ನಿತ್ಯಾನಂದ ಸ್ವಾಮಿ ಬೆಂಗಳೂರಿನ ಮದರ್‌ ‌ತೆರೆಸಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿತ್ಯಾನಂದಸ್ವಾಮಿ ನಿಧನಕ್ಕೆ ಭಾರತ ಕಮ್ಯೂನಿಸ್ಟ್‌ ಪಕ್ಷದ (ಮಾರ್ಕ್ಸ್‌ವಾದಿ) ರಾಜ್ಯ ಸಮಿತಿ ವಿಷಾದ ವ್ಯಕ್ತಪಡಿಸಿದೆ.

ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್‌ನಲ್ಲಿರುವ ಪಕ್ಷದ ಕಚೇರಿಯಲ್ಲಿ ಮಂಗಳವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆವರೆಗೆ ನಿತ್ಯಾನಂದಸ್ವಾಮಿ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿತ್ಯಾನಂದಸ್ವಾಮಿ ಅವರು 1949ರ ಆಗಸ್ಟ್ 25ರಂದು ಉಡುಪಿಯ ಕಲ್ಯಾಣಪುರದಲ್ಲಿ ಕ್ರಿಶ್ಚಿಯನ್ ಕುಟುಂಬದಲ್ಲಿ ಜನಿಸಿದ್ದರು. ಕ್ರಿಶ್ಚಿಯನ್ ಪಂಥದ ಅನುಸಾರವಾಗಿಯೇ ಆರಂಭಿಕ ಮತ್ತು ಉನ್ನತ ಶಿಕ್ಷಣ ಪಡೆದಿದ್ದರು.

1980ರಲ್ಲಿ ಸರ್ಕಾರದ ತೆರಿಗೆ ಹೇರಿಕೆ ವಿರುದ್ಧ ಮಲಪ್ರಭಾ ಬಳಕೆದಾರ ರೈತರು ನಡೆಸಿದ ಐತಿಹಾಸಿಕ ನರಗುಂದ, ನವಲಗುಂದದ ರೈತ ಚಳವಳಿ ಪ್ರಭಾವಕ್ಕೆ ಒಳಗಾದ ಅವರು ಅಂತಿಮವಾಗಿ ತನ್ನ ಧರ್ಮ ಪ್ರಚಾರಕ ಹುದ್ದೆಯನ್ನು ತೊರೆದು ರೈತ ಕಾರ್ಮಿಕ ಚಳವಳಿಗೆ ಧುಮುಕಿದ್ದರು.

ಭಾರತ ಕಮ್ಯೂನಿಸ್ಟ್ ಪಕ್ಷದ (ಮಾರ್ಕ್ಸ್ ವಾದಿ) ಪೂರ್ಣವಧಿ ಕಾರ್ಯಕರ್ತರಾಗಿದ್ದ ನಿತ್ಯಾನಂದಸ್ವಾಮಿ ಅವರು ಅವಿಭಜಿತ ಧಾರವಾಡ ಜಿಲ್ಲಾ ಪಕ್ಷದ ಜಿಲ್ಲಾ ಕಾರ್ಯದರ್ಶಿಯಾಗಿ ಹಲವು ದಶಕಗಳ ಕಾಲ ಹುಬ್ಬಳ್ಳಿ, ಹರಿಹರ, ಹಾನಗಲ್, ದಾಂಡೇಲಿ ಕೇಂದ್ರವಾಗಿಸಿಕೊಂಡು ಕೆಲಸ ಮಾಡಿದ್ದರು.

ಶಿಕ್ಷಣದಿಂದ, ಸಮಾಜದಿಂದ ವಂಚಿತರಾದ ಹತ್ತಾರು ಮಕ್ಕಳಿಗೆ ಶಿಕ್ಷಣ ಕೊಡಿಸುವಲ್ಲಿ ವಿದ್ಯಾರ್ಥಿ ಚಳವಳಿಯ ಸಕ್ರಿಯ ಕಾರ್ಯಕರ್ತರನ್ನಾಗಿ ಬೆಳೆಸುವಲ್ಲಿ ಮಾತ್ರವಲ್ಲ, ಹಲವು ಯುವ ಜನರಿಗೆ ಸಮಸಮಾಜ ಕಟ್ಟುವ ಕನಸಿನೊಂದಿಗೆ ಅಂತರ್ಜಾತಿ ಮದುವೆಗಳನ್ನು ಮಾಡಿಸಿ ಅವರ ಬದುಕಿಗೆ ಆಸರೆಯಾಗಿ ನಿಲ್ಲುವಲ್ಲಿ, ದೇವದಾಸಿ ಪದ್ಧತಿ ವಿರುದ್ಧದ ಚಳವಳಿಯಲ್ಲೂ ಅವರು ಅನುಕರಣೀಯ ಪಾತ್ರವಹಿಸಿದ್ದರು.

ಇದನ್ನು ಓದಿದ್ದೀರಾ? ಇರಾನ್‌ನ ‘ಉಕ್ಕಿನ ಮನುಷ್ಯ’ ಆಯತೊಲ್ಲಾ ಅಲಿ ಖಮೇನಿ

ಸಿಐಟಿಯು ರಾಜ್ಯ ಮುಖಂಡರಾಗಿ ರಾಜ್ಯದಲ್ಲಿ ನೇಕಾರರೂ ಸೇರಿದಂತೆ ಇತರೆ ಕಾರ್ಮಿಕರನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ನಿತ್ಯಾನಂದಸ್ವಾಮಿ ಅವರು ಕರ್ನಾಟಕ ರಾಜ್ಯ ನೇಕಾರರ ಸಮನ್ವಯ ಸಮಿತಿ ಅಧ್ಯಕ್ಷರಾಗಿ ನೇಕಾರರ ಬದುಕನ್ನು ಉತ್ತಮಪಡಿಸಲು ಹಲವು ಹೋರಾಟಗಳನ್ನು ಮುನ್ನಡೆಸಿದ್ದರು.

ಇದಲ್ಲದೆ ಬೀಡಿ, ಹಾಸ್ಟೆಲ್ ಹೊರಗುತ್ತಿಗೆ ಕಾರ್ಮಿಕರನ್ನು ಸಂಘಟಿಸಿ ಅವರಿಗೆ ಘನತೆಯ ಬದುಕಿಗಾಗಿ ಶ್ರಮಿಸಿದ್ದರು. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕೃಷಿಕೂಲಿಕಾರರನ್ನು ಸಂಘಟಿಸಿ ಭೂಮಿಯ ಹಕ್ಕಿಗಾಗಿ ಹಲವು ವರ್ಷಗಳ ಕಾಲ ಹೋರಾಟ ನಡೆಸಿದ್ದರು. ಜತೆಗೆ, ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಒಂದು ತಿಂಗಳು ಸೆರೆವಾಸ ಅನುಭವಿಸಿದ್ದರು.

ಕೃಷಿಕೂಲಿಕಾರರ ಸಂಘದ ರಾಜ್ಯ ಅಧ್ಯಕ್ಷರಾಗಿ ನಿತ್ಯಾನಂದಸ್ವಾಮಿ ಅವರು ಗಂಗಾವತಿ ಸೇರಿ ರಾಜ್ಯದ ಹಲವಡೆ ಕೂಲಿಗಾಗಿ, ಉದ್ಯೋಗ ಖಾತ್ರಿ ಯೋಜನೆ ಜಾರಿಗಾಗಿ ಹೋರಾಟದ ನೇತೃತ್ವ ವಹಿಸಿದ್ದರು. ಇದೇ ಅವಧಿಯಲ್ಲಿ ಗಂಗಾವತಿಯ ಮರಕಾಂಬಿ ಗ್ರಾಮದ ದಲಿತರ ಮೇಲೆ ನಡೆದ ದೌರ್ಜನ್ಯಗಳ ವಿರುದ್ಧ ನಿರಂತರವಾಗಿ ಹೋರಾಟ ನಡೆಸಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಕೊಡಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಭಾರತ ಕಮ್ಯೂನಿಸ್ಟ್ ಪಕ್ಷದ (ಮಾರ್ಕ್ಸ್ ವಾದಿ) ಅತ್ಯುತ್ತಮ ಕಾರ್ಯಕರ್ತರಾಗಿ, ಆದರ್ಶ ನಾಯಕರಾಗಿ, ಮಾರ್ಕ್ಸ್ ವಾದದಲ್ಲಿ ಅತ್ಯಂತ ದೃಢತೆ ಮತ್ತು ಬದ್ಧತೆ ಹಾಗೂ ಅಚಲವಾದ ನಂಬಿಕೆಯೊಂದಿಗೆ ನಾಲ್ಕುವರೆ ದಶಕಗಳಿಂದ ಪಕ್ಷ ಮತ್ತು ಜನಚಳವಳಿಯನ್ನೇ ತಮ್ಮ ಕುಟುಂಬವೆಂದು ಕೆಲಸ ಮಾಡಿದ್ದರು. ಪಕ್ಷದ ಶಿಕ್ಷಣ ಉಪಸಮಿತಿ ಸಂಚಾಲಕರಾಗಿಯೂ ಕೆಲಸ ಮಾಡಿದ್ದರು. ‘ಜನಶಕ್ತಿ’ ಕನ್ನಡ ವಾರ ಪತ್ರಿಕೆಯ ಸಂಪಾದಕರಾಗಿಯೂ ಅವರು ಕೆಲಸ ಮಾಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಹೆಚ್ಚಳ

ಹಣದುಬ್ಬರಕ್ಕೆ ಅನುಗುಣವಾಗಿ ನಡೆಯುವ ವಾರ್ಷಿಕ ದರ ಪರಿಷ್ಕರಣೆಯ ಭಾಗವಾಗಿ ಏಪ್ರಿಲ್ 1ರಿಂದ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...