ಭ್ರಷ್ಟಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಅಧಿಕಾರಿಗೆ ‘ಲಂಚ ಪಡೆದು ಭಡ್ತಿ ನೀಡಲಾಗಿದೆ’ ಎಂಬ ಸ್ನೇಹಮಯಿ ಕೃಷ್ಣ ಆರೋಪಕ್ಕೆ ಸ್ಪಷ್ಟನೆ ನೀಡಿರುವ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ‘ಸ್ನೇಹಮಯಿ ಕೃಷ್ಣರ ಆರೋಪದಲ್ಲಿ ಯಾವುದೇ ಹುರುಳಿಲ್ಲ ಮತ್ತು ಕ್ಷುಲ್ಲಕ ಆರೋಪಗಳಾಗಿದ್ದು, ಇಂತಹ ಆಧಾರರಹಿತ ಆರೋಪಗಳಿಗಾಗಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದ್ದಾರೆ.
ಗುರುವಾರ ಮುಖ್ಯ ಕಾರ್ಯದರ್ಶಿ ಪರವಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸರಕಾರದ ಅಧೀನ ಕಾರ್ಯದರ್ಶಿ ಕೇಶವಪ್ರಸಾದ್ ಕೆ.ಎಚ್., ‘ಸ್ನೇಹಮಯಿ ಕೃಷ್ಣ ಕೇಳಿದ 12 ಪ್ರಶ್ನೆಗಳಿಗೆ ಸ್ಪಷ್ಟನೆ ನೀಡಿದ್ದು, ದೂರುದಾರರು ಯಾವುದೇ ಪೂರಕ ಸಾಕ್ಷ್ಯಾಧಾರಗಳನ್ನು ಒದಗಿಸದೆ ಸರಕಾರದ ಉನ್ನತ ಹಂತದಲ್ಲಿರುವ ಅಧಿಕಾರಿಗಳ ವಿರುದ್ಧ ನಿರಾಧಾರ ಆರೋಪ ಮಾಡುತ್ತಿರುವುದು ಅಧಿಕಾರಿಗಳ ಮಾನಹಾನಿ ಮಾಡಿದಂತಾಗಿದೆ ಎಂದು ಹೇಳಿದ್ದಾರೆ.
ಇದನ್ನು ಓದಿದ್ದೀರಾ? 6 ದಶಕಗಳ ಕಾಯುವಿಕೆ ಅಂತ್ಯ: ಬಂಗಾಳವನ್ನು ಬಗ್ಗು ಬಡಿದು ರಣಜಿ ಫೈನಲ್ ಪ್ರವೇಶಿಸಿದ ಜಮ್ಮು ಕಾಶ್ಮೀರ
ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮುಡಾ) ಮಾಜಿ ಆಯುಕ್ತ ಹಾಗೂ ಹಾಲಿ ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಿ.ಬಿ.ನಟೇಶ್ ಅವರಿಗೆ ಸರಕಾರಿ ನೌಕರರ ಮುಂಭಡ್ತಿ ನಿಯಮಾವಳಿಗಳನ್ನು ಪಾಲಿಸಿ ಮುಂಭಡ್ತಿ ನೀಡಲಾಗಿದೆ. ಹೀಗಾಗಿ ನಿಮ್ಮ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಅಲ್ಲಗಳೆದಿದ್ದಾರೆ.
ಆದರೆ, ಸ್ನೇಹಮಯಿ ಕೃಷ್ಣ, ಭ್ರಷ್ಟಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ನಟೇಶ್ ಅವರಿಗೆ ಮುಂಭಡ್ತಿ ನೀಡುವ ಸಲುವಾಗಿ 1.60 ಕೋಟಿ ರೂಪಾಯಿ ಲಂಚ ಪಡೆಯಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದರು.





