ಶವರ್ಮಾದಲ್ಲಿ ಅಪಾಯಕಾರಿ ಬಾಕ್ಟೀರಿಯಾ ಪತ್ತೆ; ಬ್ಯಾನ್​ಗೆ ಚಿಂತನೆ ನಡೆಸಿದ ಎಫ್‌ಎಎಸ್‌ಎಸ್‌ಎಐ

Date:

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ (ಎಫ್‌ಎಎಸ್‌ಎಸ್‌ಎಐ) ನಡೆಸಿದ ಟೆಸ್ಟ್​ನಲ್ಲಿ ಗೋಬಿ ಮಂಚೂರಿ, ಕಬಾಬ್​​, ಪಾನಿಪುರಿಯಲ್ಲಿ ಕ್ಯಾನ್ಸರ್​ ಕಾರಕ ಅಂಶಗಳು ಪತ್ತೆಯಾಗಿದ್ದವು. ಇದೀಗ, ಈ ಪಟ್ಟಿಯಲ್ಲಿ ಶವರ್ಮಾ ಕೂಡ ಸೇರಿಕೊಂಡಿದ್ದು, ಆರೋಗ್ಯದ ದೃಷ್ಟಿಯಿಂದ ಶವರ್ಮಾ ನಿಷೇಧಿಸಲು ಎಫ್‌ಎಎಸ್‌ಎಸ್‌ಎಐ ಚಿಂತನೆ ನಡೆಸಿದೆ.

ರಾಜ್ಯದ ನಾನಾಕಡೆಯಿಂದ 17 ಮಾದರಿಯ ಶವರ್ಮಾವನ್ನು ಆಹಾರ ಮತ್ತು ಗುಣಮಟ್ಟ ಇಲಾಖೆಯು ಪರೀಕ್ಷೆ ನಡೆಸಿದೆ. ಈ ಪೈಕಿ 8 ಶವರ್ಮಾ ಮಾದರಿಯಲ್ಲಿ ಬ್ಯಾಕ್ಟೀರಿಯಾ ಈಸ್ಟ್‌ ಪತ್ತೆಯಾಗಿದೆ.

ಸರಿಯಾದ ಕ್ರಮದಲ್ಲಿ ಆಹಾರ ತಯಾರಿ ಮಾಡದ ಕಾರಣ ಬ್ಯಾಕ್ಟಿರೀಯಾಗಳು ಪತ್ತೆಯಾಗಿವೆ. ಈಗಾಗಲೇ ಅಸುರಕ್ಷಿತ ಶವರ್ಮಾ ನೀಡಿರುವ ಅಂಗಡಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶವರ್ಮಾ ಮಾರಾಟಗಾರರು ಕಡ್ಡಾಯವಾಗಿ ಎಫ್‌ಎಸ್‌ಎಸ್‌ಎಐ ನೋಂದಣಿ ಮಾಡಿಸುವುದು ಕಡ್ಡಾಯಗೊಳಿಸಲಾಗಿದೆ. ಒಂದು ವೇಳೆ, ಮಾರಾಟಗಾರರು ನೋಂದಣಿ ಮಾಡಿಸದಿದ್ದರೇ, ಬ್ಯಾನ್ ಮಾಡುವ ಎಚ್ಚರಿಕೆ ನೀಡಲಾಗಿದೆ.

ಜತೆಗೆ, ಶವರ್ಮಾ ತಯಾರಿ ಮಾಡುವಾಗ ಮಾರಾಟಗಾರರು ಮುಖ್ಯವಾಗಿ ಶುಚಿತ್ವ ಕಾಪಾಡಿಕೊಳ್ಳಬೇಕು ಎಂದು ಹೇಳಿದೆ. ಶುಚಿತ್ವ ನಿರ್ವಹಣೆ, ನೋಂದಣಿ ಮಾಡಿಸದಿದ್ದರೂ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಗೋಬಿ, ಕಬಾಬ್ ಮತ್ತು ಪಾನಿಪುರಿಯಲ್ಲಿ ಕ್ಯಾನ್ಸರ್‌ಕಾರಕ ಅಂಶಗಳು ಪತ್ತೆಯಾಗಿದೆ. ಕಬಾಬ್ ತಯಾರಿ ಮಾಡಲು ಬಳಕೆ ಮಾಡುವ ಕೃತಕ ಬಣ್ಣದಲ್ಲಿ ಅಪಾಯಕಾರಿ ಅಂಶ ಪತ್ತೆಯಾಗಿದೆ. ಹೀಗಾಗಿ, ಬಣ್ಣ ಬಳಕೆ ಮಾಡಬಾರದು ಎಂದು ಕರ್ನಾಟಕ ಆರೋಗ್ಯ ಇಲಾಖೆ ಇತ್ತೀಚೆಗೆ ಸುತ್ತೋಲೆ ಹೊರಡಿಸಿತ್ತು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅಪಹರಣ​ ಪ್ರಕರಣ; ಕನ್ನಡಪರ ಸಂಘಟನೆ ಅಧ್ಯಕ್ಷ ಸೇರಿ 6 ಜನರ ವಿರುದ್ಧ ಎಫ್​ಐಆರ್

ಅಲ್ಲದೆ, ಗೋಬಿ ಮಂಚೂರಿ, ಕಾಟನ್‌ ಕ್ಯಾಂಡಿಗೂ ಬಣ್ಣ ಬಳಸದಂತೆ ಸೂಚಿಸಿದೆ. ನಂತರ ಈಗ ಶವರ್ಮಾದಲ್ಲೂ ಆರೋಗ್ಯಕ್ಕೆ ಹಾನಿಯುಂಟುಮಾಡುವ ಅಂಶ ಇರುವುದು ಬಹಿರಂಗವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...