ದರ್ಶನ್ ಪ್ರಕರಣ | ನಿರ್ಮಾಪಕ ಉಮಾಪತಿಗೆ ಬೆದರಿಕೆ ಹಾಕಿದ್ದ ಅಭಿಮಾನಿ ಬಂಧನ

Date:

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ದರ್ಶನ್ ಪರವಾಗಿ ಆತನ ಅಭಿಮಾನಿಗಳಿಗೆ ಪ್ರಚೋದನೆ ಮಾಡುತ್ತಿದ್ದ ಹಾಗೂ ನಿರ್ಮಾಪಕ ಉಮಾಪತಿಗೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ದರ್ಶನ್ ಅಭಿಮಾನಿ ಚೇತನ್ ಎಂಬುವವರನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಚೇತನ್ ವಿರುದ್ಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 504, 506 ಅಡಿ ಎಫ್ಐಆರ್ ದಾಖಲಾಗಿದೆ.

ಇತ್ತೀಚೆಗೆ ಜೈಲು ಸೇರಿದ್ದ ನಟ ದರ್ಶನ್ ವಿರುದ್ಧ ನಿರ್ಮಾಪಕ ಉಮಾಪತಿ ಗೌಡ ಅವರು ಮಾತನಾಡಿದ್ದರು. ಇದಕ್ಕೆ ಕೋಪಗೊಂಡ ದರ್ಶನ್ ಅಭಿಮಾನಿಯಾದ ಆರೋಪಿ ಚೇತನ್ ನಿರ್ಮಾಪಕ ಉಮಾಪತಿಗೆ ಬೆದರಿಕೆ ಹಾಕಿದ್ದನು. ಅಲ್ಲದೇ, ಅವರಿಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾನೆ. ಜತೆಗೆ, ದರ್ಶನ್ ಅಭಿಮಾನಿಗಳಿಗೆ ಪ್ರಚೋದನೆ ಮಾಡಿದ್ದನು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ನಿರ್ಮಾಪಕ ಉಮಾಪತಿ ಗೌಡ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಪೊಲೀಸರು ಚೇತನ್​ನನ್ನು ಬಂಧಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸೂರಜ್ ರೇವಣ್ಣ ಪ್ರಕರಣ ತನಿಖೆ ಸಿಐಡಿಗೆ ವರ್ಗಾವಣೆ

ಅಭಿಮಾನಿ ಗಾಡಿ ಮೇಲೆ ನಟ ದರ್ಶನ್‌ಗೆ ನೀಡಿರುವ ಖೈದಿ ನಂಬರ್

ಮೈಸೂರಿನಲ್ಲಿ ನಟ ದರ್ಶನ್ ಅಭಿಮಾನಿ ರಾಜೇಶ್ ಎಂಬುವವರು ತಮ್ಮ ಗಾಡಿ ಮೇಲೆ ದರ್ಶನ್‌ಗೆ ಜೈಲಿನಲ್ಲಿ ನೀಡಿರುವ ಖೈದಿ ನಂಬರ್ ಹಾಕಿಸಿಕೊಂಡಿದ್ದಾರೆ.

ರಾಜೇಶ್ ಇವರು ಟಿ.ನರಸೀಪುರ ತಾಲೂಕಿನ ಕರುಹಟ್ಟಿ ಗ್ರಾಮದವರು. ಜೈಲಿನಲ್ಲಿ ನಟ ದರ್ಶನ್‌ಗೆ ಖೈದಿ ನಂಬರ್ 6106 ಕೊಟ್ಟಿದ್ದಾರೆ. ಈಗಾಗಲೇ ಗಾಡಿಗೆ ನಂಬರ್ ಇದ್ದು, ಅದನ್ನು ಬದಲಾಯಿಸಲು ಆಗದ ಕಾರಣ ಗಾಡಿ ಮೇಲೆ 6106 ಹಾಕಿಸಿಕೊಂಡಿದ್ದಾರೆ. ಇದೇ ಲಕ್ಕಿ ನಂಬರ್ ಎಂದು ಗಾಡಿ ಮೇಲೆ ಬರೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...