ದರ್ಶನ್ ಪ್ರಕರಣ | ಆರೋಪಿಗಳ ಹೆಚ್ಚಿನ ವಿಚಾರಣೆಗಾಗಿ ಮತ್ತೆ 5 ದಿನ ಪೊಲೀಸ್ ಕಸ್ಟಡಿ ವಿಸ್ತರಣೆ

Date:

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 15 ಆರೋಪಿಗಳನ್ನು ನ್ಯಾಯಾಲಯದ ಆದೇಶ ಮೇರೆಗೆ ಆರು ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ನಾಳೆಗೆ ಕಸ್ಟಡಿ ಅವಧಿ ಮುಗಿಯಲಿದ್ದು, ನಾಳೆ ಭಾನುವಾರ ಇರುವ ಕಾರಣ ಪೊಲೀಸರು ಇಂದೇ ಆರೋಪಿಗಳನ್ನು ಬೆಂಗಳೂರು ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್‌ಗೆ ಹಾಜರುಪಡಿಸಿದ್ದರು. ಇದೀಗ, ಹೆಚ್ಚಿನ ವಿಚಾರಣೆಗಾಗಿ 5 ದಿನಗಳವರೆಗೆ ಆರೋಪಿಗಳನ್ನು ಮತ್ತೆ ಪೊಲೀಸ್​​ ಕಸ್ಟಡಿಗೆ ನೀಡಿ ಕೋರ್ಟ್​​ ಆದೇಶಿಸಿದೆ.

ಸದ್ಯ, ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸರು ನಗರದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಆರೋಪಿಗಳನ್ನು ಹಾಜರುಪಡಿಸಿದ್ದಾರೆ. ಪೊಲೀಸರು ಆರೋಪಿಗಳಿಂದ ಮಹತ್ವದ ಹೇಳಿಕೆಗಳನ್ನು ದಾಖಲಿಸಿ ಕೋರ್ಟ್​​ಗೆ ಹಾಜರು ಪಡಿಸಿದ್ದರು. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ಆರೋಪಿಗಳನ್ನು ಬೌರಿಂಗ್​ ಆಸ್ಪತ್ರೆಯಲ್ಲಿ ಮೆಡಿಕಲ್​ ಚೆಕಪ್​​ ಮಾಡಿಸಲಾಯಿತು.

ಮ್ಯಾಜಿಸ್ಟ್ರೇಟ್ ವಿಶ್ವನಾಥ್ ಗೌಡರ್ ಅವರು ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ಸರ್ಕಾರದ ಪರವಾಗಿ ವಾದಿಸಲು ವಿಶೇಷ ಸರ್ಕಾರಿ ಅಭಿಯೋಜಕರಾಗಿ ಪಿ ಪ್ರಸನ್ನಕುಮಾರ್ ನೇಮಕ ಆಗಿದ್ದಾರೆ. ನಾಳೆಗೆ ಆರೋಪಿಗಳ ಕಸ್ಟಡಿ ಅವಧಿ ಮುಗಿಯಲಿದೆ. ಭಾನುವಾರ ನ್ಯಾಯಾಲಯಕ್ಕೆ ರಜೆ ಇರುವ ಕಾರಣ ಇಂದೇ (ಶನಿವಾರ) ಪೊಲೀಸರು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣದಲ್ಲಿ ಕಸ್ಟಡಿಗೆ ನೀಡಿದ ಅವಧಿಯಲ್ಲಿ ವಾಹನ ಬಳಕೆ, ಸ್ಥಳ ಮಹಜರು ಮಾಡಲಾಗಿದೆ. ಅಲ್ಲದೇ, ಆರೋಪಿಗಳ ಮೊಬೈಲ್​​ ವಶಕ್ಕೆ ಪಡೆಯಲಾಗಿದೆ. ಮೈಸೂರು, ಬೆಂಗಳೂರಿನಲ್ಲಿ ಸ್ಥಳ ಮಹಜರು ಮಾಡಬೇಕಿದೆ. ಜೂನ್ 14ರಂದು ಚಿತ್ರದುರ್ಗದಲ್ಲಿ ಪ್ರಕರಣ ಸಂಬಂಧ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಮೃತದೇಹವನ್ನು ಸಾಗಣೆ ಮಾಡಲು ದರ್ಶನ್​​ ನೀಡಿರುವ ₹30 ಲಕ್ಷ ಆರೋಪದ ಕುರಿತಾಗಿ ಹಣವನ್ನು ಜಪ್ತಿ ಮಾಡಲಾಗಿದೆ. ಈ ಹಣ ಯಾರದ್ದು ಮತ್ತು ಯಾರಿಗೆ ನೀಡಿದ್ದರು ಎಂಬಿತ್ಯಾದಿ ಸೇರಿದಂತೆ ಹಲವು ಮಾಹಿತಿ ತಿಳಿಯಬೇಕಿದೆ” ಎಂದು ಎಸ್​​​ಪಿಪಿ ಪ್ರಸನ್ನ ಕುಮಾರ್​ ಹೇಳಿದರು.

ಪೊಲೀಸರ ತನಿಖೆಯ ಅಂಶಗಳ ಬಗ್ಗೆ ಕೋರ್ಟ್​​​ಗೆ ಮಾಹಿತಿ ನೀಡಿದ ಅವರು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್​​ ಕಷ್ಟಡಿಗೆ ನೀಡಬೇಕು ಎಂದು ಕೋರ್ಟ್​​ ಎದುರು ಮನವಿ ಮೂಲಕ ವಾದ ಮಂಡಿಸಿದರು.

ಮೃತ ವ್ಯಕ್ತಿ ರೇಣುಕಾಸ್ವಾಮಿಗೆ ಎಲೆಕ್ಟ್ರಿಕ್ ಶಾಕ್ ನೀಡಲಾಗಿದೆ ಎಂದು ಕೋರ್ಟ್‌ ಗಮನಕ್ಕೆ ತರಲಾಗಿದೆ.

ಪವಿತ್ರಾ ಗೌಡ ಅವರನ್ನು 6 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಈಗ ರಿಮ್ಯಾಂಡ್ ಅರ್ಜಿ ನೀಡುತ್ತಿಲ್ಲ. ಈಗಾಗಲೇ 5 ದಿನ ಅವರನ್ನು ಕಸ್ಟಡಿಗೆ ಪಡೆದಿದ್ದಾರೆ. ಆರೋಪಿಗಳ ಪೈಕಿ ಮಹಿಳೆ ನೋವನ್ನು ಅನುಭವಿಸುತ್ತಿದ್ದಾರೆ ಎಂದು ಪವಿತ್ರಾ ಗೌಡ ಪರ ವಕೀಲ ನಾರಾಯಣಸ್ವಾಮಿ ವಾದ ಮಂಡನೆ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಾಹನ ಸವಾರರಿಗೆ ಮತ್ತೆ ಬೆಲೆ ಏರಿಕೆ ಬಿಸಿ; ಪೆಟ್ರೋಲ್, ಡೀಸೆಲ್ ದರ ಹೆಚ್ಚಳ

ನಟ ದರ್ಶನ್ ಪರ ವಕೀಲ ಅನಿಲ್ ಬಾಬು, “ಎಲ್ಲದಕ್ಕೂ ಎರಡನೇ ಆರೋಪಿ ದರ್ಶನ್‌ ಕಾರಣ ಎನ್ನುವುದು ಎಷ್ಟರ ಮಟ್ಟಿಗೆ ಸರಿ. ಅನುಮತಿಯಿಲ್ಲದೇ ಎಲ್ಲ ಆರೋಪಿಗಳ ಮೊಬೈಲ್‌ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ. A5 ನಂದೀಶ್​ ಮತ್ತು A13 ದೀಪಕ್​​ಗೆ ಪೊಲೀಸರು ಕರೆಂಟ್​​​ ಶಾಕ್​​​​​​​ ನೀಡಿದ್ದಾರೆ. ಆರೋಪಿಗಳ ಹೇಳಿಕೆ ಸೋರಿಕೆಯಾಗುತ್ತಿವೆ. ಇದರಿಂದ ಕೇಸ್​​ ಬಗ್ಗೆ ಗಾಸಿಪ್​​ ಹರಡುತ್ತಿವೆ” ಎಂದು ವಾದ ಮಂಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...