ಕಬ್ಬು ಬೆಳೆಗಾರರ ಬೆಲೆ ಸಮಸ್ಯೆಯನ್ನು ಪರಿಹರಿಸಲು ಕಾರ್ಖಾನೆಯಿಂದ 3250 ಸರ್ಕಾರದಿಂದ 50 ರೂಪಾಯಿ ಸೇರಿ ಬೆಲೆ ಕೊಡಲು ನಿರ್ಧರಿಸಿದ್ದಾರೆ. ಈ ಮೂಲಕ ಸರ್ಕಾರ ಕಾರ್ಖಾನೆಗಳ ಮೇಲೆ ಅವಲಂಬಿತವಾಗಿದೆ. ಬೆಳಗಾವಿ ಮಾತ್ರವಲ್ಲದೆ ಬಾಗಲಕೋಟೆ, ಬಿಜಾಪುರ, ಗುಲ್ಬರ್ಗ, ಕೊಪ್ಪಳ ಭಾಗಗಳಲ್ಲಿಯೂ ಕಬ್ಬು ಬೆಳೆಗಾರರಿಗೆ ಅತಿ ಕಡಿಮೆ ದರ ತೋರಿಸಿ ರೈತರಿಗೆ ಮೋಸ ಮಾಡುತ್ತಿದ್ದು ಇದರ ಮೇಲೆ ಸರ್ಕಾರ ನಿಗಾ ಇಡಬೇಕು, ಸಕ್ಕರೆ ಸಚಿವರ ನೇತೃತ್ವದಲ್ಲಿ ಅಧ್ಯಯನ ಸಮಿತಿ ರಚಸಿ ನಿಗಾ ವಹಿಸಬೇಕು” ಎಂದು ದಾವಣಗೆರೆಯಲ್ಲಿ ನಡೆದ ರಾಜ್ಯ ಮಟ್ಟದ ಕಾರ್ಯಕಾರಿಣಿಯಲ್ಲಿ ಆಗ್ರಹಿಸಿದರು.

ದಾವಣಗೆರೆ ನಗರದ ಕೃಷಿ ಮಾರುಕಟ್ಟೆಯ ರೈತ ಭವನದ ಆವರಣದಲ್ಲಿ ಆಯೋಜಿಸಿದ್ದ ರಾಜ್ಯ ರೈತ ಸಂಘದ (ವಾಸುದೇವ ಮೇಟಿ ಬಣ) ರಾಜ್ಯ ಕಾರ್ಯಕಾರಣಿಯಲ್ಲಿ ಭಾಗವಹಿಸಿ ಮಾಧ್ಯಮಗಳಿಗೆ ಮಾತನಾಡಿದ ಅವರು “ರಾಜ್ಯಾದ್ಯಂತ ಮಳೆಯಿಂದ ರೈತರಿಗೆ ಬಹಳಷ್ಟು ಹಾನಿಯಾಗಿದೆ. ಸರ್ಕಾರ ಹೇಳುವ ಪ್ರಕಾರ 11 ಲಕ್ಷ ಹೆಕ್ಟೇರ್ ನಲ್ಲಿ ಬೆಳೆನಾಶವಾಗಿದೆ. ಆದರೆ ರಾಜ್ಯದಲ್ಲಿ 21 ಲಕ್ಷ ಹೆಕ್ಟೇರಿಗೂ ಹೆಚ್ಚು ಜಮೀನಿನಲ್ಲಿ ಬೆಳೆನಾಶದಿಂದ ರೈತರು ನಷ್ಟ ಅನುಭವಿಸಿದ್ದಾರೆ. ಈ ರೈತರ ಪರಿಹಾರಕ್ಕಾಗಿ 285 ಕೋಟಿ ಬಿಡುಗಡೆ ಮಾಡಿದೆ. ಆದರೆ ಇದು ಯಾವುದಕ್ಕೂ ಸಾಲುವುದಿಲ್ಲ. ಬೆಳೆ ನಷ್ಟದ ವಾಸ್ತವ ಅರಿಯಲು ಯಾವುದೇ ಹಳ್ಳಿಗಳಿಗೆ, ರೈತರ ಜಮೀನುಗಳಿಗೆ ಸರ್ಕಾರದ ಸಚಿವರು ಸೇರಿದಂತೆ ಯಾರೂ ಕೂಡ ಭೇಟಿ ನೀಡಿಲ್ಲ. ಸಚಿವ ಸಂಪುಟ ಸಭೆಯಲ್ಲಿ ಕೂಡ ಸರಿಯಾದ ಚರ್ಚೆ ಮಾಡಿಲ್ಲ. ಹಾಗಾಗಿ ರೈತರ ಪರಿಹಾರಕ್ಕೆ ಸಾಕಷ್ಟು ಹಣ ಬಿಡುಗಡೆಯಾಗಬೇಕು ಎಂದು ಮುಖ್ಯಮಂತ್ರಿಗಳಿಗೆ ಆಗ್ರಹಿಸುತ್ತೇವೆ” ಎಂದು ಒತ್ತಾಯಿಸಿದರು.

“ಬಂಡಿಪುರ-ನಾಗರಹೊಳೆ, ಚಾಮರಾಜ ಜಿಲ್ಲೆಯ ಪ್ರದೇಶಗಳಲ್ಲಿ ಕಾಡು ಪ್ರಾಣಿಗಳ ಹಾವಳಿ, ಮಾನವ ಸಂಘರ್ಷ ಹೆಚ್ಚಾಗಿದೆ. ಇದರ ವಿರುದ್ಧ ಅರಣ್ಯ ಸಚಿವರು, ಇಲಾಖೆ ಸೇರಿ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಕೂಡಲೇ ಈ ಸಮಸ್ಯೆ ಬಗ್ಗೆ ಗಮನಹರಿಸಲು ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕುವ ಕೆಲಸ ಮಾಡುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

“ಸರ್ಕಾರ ಶಿಕ್ಷಣ ಸುಧಾರಣೆಗೆ ಒತ್ತು ನೀಡಬೇಕು. ಉದಾಹರಣೆಗೆ ಗುಲ್ಬರ್ಗದಲ್ಲಿ ಸಚಿವರಾದ ಖರ್ಗೆ, ಶರಣಬಸಪ್ಪ ದರ್ಶನಾಪುರ ಇತರೆ ಸಚಿವರು ಹೇಳುವ ಪ್ರಕಾರ ಆ ಭಾಗಗಳಲ್ಲಿ ಶಿಕ್ಷಕರ ಕೊರತೆ ಮತ್ತು ಶಿಕ್ಷಣದ ಗುಣಮಟ್ಟದ ಕೊರತೆ ಇದೆ. ಇದರ ಬಗ್ಗೆ ಸೂಕ್ತ ತೀರ್ಮಾನ ಕೈಗೊಂಡು ಕೂಡಲೇ ಶಿಕ್ಷಕರ ನೇಮಕಾತಿಗೆ ಮತ್ತು ಶಿಕ್ಷಣ ಕ್ಷೇತ್ರದ ಸುಧಾರಣೆಗೆ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು. ಶೈಕ್ಷಣಿಕ ತಜ್ಞರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಬೆಂಗಳೂರಿನ ಗಾಂಧಿ ಭವನದಲ್ಲಿ ಕೃಷಿ ಕಾಯ್ದೆಗಳ ಕುರಿತು ಚಿಂತನ ಮಂಥನ ಮಾಡಬೇಕು, ರಾಜ್ಯದಲ್ಲಿ ಕೆರೆಗಳಿಗೆ ನೀರು ತುಂಬಿಸುವ ಬೇಡಿಕೆ ಕುರಿತಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸುವುದು, ಕೆಎಸ್ಆರ್ಟಿಸಿ ಬಸ್ ಅಭಾವದಿಂದ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಯನ್ನು ಕುರಿತು ಸರ್ಕಾರದ ಕ್ರಮಕ್ಕೆ, ಹಳ್ಳಿಗಳಲ್ಲಿ ಶಿಕ್ಷಕರಿಲ್ಲದೆ ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣ ಸೌಲಭ್ಯದ ಸುಧಾರಣೆ ಕುರಿತು, ಹಾಗೂ ನಾಗರ ಹೊಳೆ ಮತ್ತು ಬಂಡೀಪುರ ಭಾಗದಲ್ಲಿ ಕಾಡುಪ್ರಾಣಿಗಳ ಸಮಸ್ಯೆ ಕುರಿತು ಮುಖ್ಯಮಂತ್ರಿಗಳ ಮನೆ ಮುತ್ತಿಗೆ ಹಾಕುವ, ಸರ್ಕಾರ ಕ್ರಮ ಕೈಗೊಳ್ಳುವ ಬಗ್ಗೆ ಒತ್ತಾಯಿಸಿ ಗಮನ ಸೆಳೆಯುವ ಕುರಿತು ನಿರ್ಧಾರ ಕೈಗೊಳ್ಳಲು ಕಾರ್ಯಕಾರಣಿಯಲ್ಲಿ ಚರ್ಚಿಸಿ ಒತ್ತಾಯಿಸಲಾಯಿತು.
ಈ ಸುದ್ದಿ ಓದಿದ್ದೀರಾ? ದಲಿತರ ಸಾಗುವಳಿ ಭೂಮಿಯ ಅತಿಕ್ರಮಣ; ಅಂದನೂರಿನಲ್ಲಿ ದಲಿತ ಶೋಷಣೆಯ ಮತ್ತೊಂದು ಮಗ್ಗುಲು
ಕಾರ್ಯಕಾರಿಣಿಯಲ್ಲಿ ರಾಜ್ಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಂಗಣ್ಣ ಬಾಗೇವಾಡಿ, ಉಪಾಧ್ಯಕ್ಷ ಗುರುಪ್ರಸಾದ್, ರಾಜ್ಯ ಕಾರ್ಯದರ್ಶಿ ಫಕೀರಪ್ಪ, ರಾಜ್ಯ ಸಂಘಟನಾ ಕಾರ್ಯದರ್ಶಿ ಬಸವರಾಜ್ ಸಂಭೋಜಿ, ರಾಜ್ಯ ಮಹಿಳಾ ಉಪಾಧ್ಯಕ್ಷೆ ಡಾ.ಪುಷ್ಪಲತಾ, ರಾಜ್ಯ ಕಾರ್ಯದರ್ಶಿ ಬಾಳಮ್ಮ ಮುದೇನೂರು, , ದಾವಣಗೆರೆ ಜಿಲ್ಲಾಧ್ಯಕ್ಷ ಗುಮ್ಮನೂರು ಬಸವರಾಜ್, ಜಗಳೂರು ತಾಲೂಕು ಅಧ್ಯಕ್ಷ ಕುಮಾರ್ ಭರಮಸಮುದ್ರ, ಮುಖಂಡರಾದ ಮರೇನಳ್ಳಿ ಓಬಳೇಶ್ ನಾಯಕ ಸೇರಿದಂತೆ ಹಲವು ಜಿಲ್ಲೆ, ತಾಲೂಕುಗಳ ಅಧ್ಯಕ್ಷರು, ಉಪಾಧ್ಯಕ್ಷರು ಸೇರಿದಂತೆ ಮುಖಂಡರು ಕಾರ್ಯಕರ್ತರು, ರೈತರು ಭಾಗವಹಿಸಿದ್ದರು.





