*ಇತ್ತೀಚೆಗೆ ದಾವಣಗೆರೆಯ ಚಿಗಟೇರಿ ಜಿಲ್ಲಾ ಆಸ್ಪತ್ರೆ, ಆಜಾದ್ ನಗರದಲ್ಲಿ ನಡೆದಿರುವ ಮುಸ್ಲಿಂ ಯುವಕರ ಗುಂಪುಗಳ ನಡುವಿನ ಘರ್ಷಣೆಯ ನಂತರ ಸಮಾಜದ ವಿರುದ್ಧ ಕೆಟ್ಟ ಅಭಿಪ್ರಾಯ ಬರುವ ರೀತಿಯಲ್ಲಿ ಕೋಮುವಾದಿ ಹೇಳಿಕೆಗಳನ್ನು ನೀಡುತ್ತಿರುವವರು ಕುರಿತು ಕ್ರಮಕೈಗೊಳ್ಳುವಂತೆ ಎಐಎಂಐಎಂ ಪಕ್ಷಿದ ಮುಖಂಡರು ಹಾಗೂ ದಾವಣಗೆರೆ ತಂಜೀಮುಲ್ ಮುಸ್ಲಿಮೀನ್ ಫಂಡ್ ಅಸೋಸಿಯೇಷನ್ ಮುಖಂಡರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪ್ರತ್ಯೇಕವಾಗಿ ಮನವಿ ಸಲ್ಲಿಸಿದರು.

ದಾವಣಗೆರೆ ತಂಜೀಮುಲ್ ಮುಸ್ಲಿಮೀನ್ ಫಂಡ್ ಅಸೋಸಿಯೇಷನ್ ಅಧ್ಯಕ್ಷರಾದ ಜನಾಬ್ ಶೇಕ್ ದಾದಾಪೀರ್ (ದಾದು ಸೇಠ್) ರವರ ನೇತೃತ್ವದ ತಂಡ ಹಾಗೂ ಜಿಲ್ಲಾಧ್ಯಕ್ಷ ಮುಹಮ್ಮದ್ ಅಲಿ ಶೋಯೆಬ್ ನೇತೃತ್ವದ ಎಐಎಂಐಎಂ (AIMIM) ನಿಯೋಗವು ಇಂದು ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರನ್ನು ಭೇಟಿಯಾಗಿ, ಇತ್ತೀಚೆಗೆ ಯುವ ಗುಂಪುಗಳ ನಡುವಿನ ಘರ್ಷಣೆಯನ್ನು ಕೋಮುವಾದೀಕರಣಗೊಳಿಸುವುದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.
ಈ ವೇಳೆ ಮಾತನಾಡಿದ ಮಹಮದ್ ಅಲಿ ಶೋಯೆಬ್ “ಬಿಜೆಪಿ ಸದಸ್ಯರು “ಜಿಹಾದಿ “ಮತಾಂಧ”ನಂತಹ ಪ್ರಚೋದನಕಾರಿ ಪದಗಳನ್ನು ಬಳಸಿಕೊಂಡು ಘಟನೆಯನ್ನು ಪೊಲೀಸ್-ವರ್ಸಸ್-ಸಮುದಾಯ ಸಮಸ್ಯೆಯಂತೆ ಸುಳ್ಳಾಗಿ ತಿರುಚುತ್ತಿದ್ದಾರೆ. ತಮ್ಮ ರಾಜಕೀಯ ಲಾಭಕ್ಕಾಗಿ ಬಳಸುತ್ತಿದ್ದಾರೆ. ಮತ್ತು ಸಾರ್ವಜನಿಕ ಸಾಮರಸ್ಯಕ್ಕೆ ಅಪಾಯವನ್ನುಂಟು ಮಾಡುತ್ತಿದ್ದಾರೆ. ಸಮಾಜದಲ್ಲಿ ಹಿಂದೂ ಮುಸ್ಲಿಂ ಬಾಂಧವರು ಸಾಮರಸ್ಯದಿಂದ ಇದ್ದಾರೆ. ಇದರ ಬಗ್ಗೆ ಸೂಕ್ತ ಕ್ರಮ ಕೈಗೊಡಬೇಕು” ಎಂದು ಅಭಿಪ್ರಾಯಪಟ್ಟರು.
“ಮುಸ್ಲಿಂ ಸಮಾಜದ ವಿರುದ್ಧ ಪ್ರಚೋದನಕಾರಿ ಮತ್ತು ಕೋಮುವಾದಿ ಹೇಳಿಕೆ ಗಳು ನೀಡಿರುವವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕು. ದ್ವೇಷಪೂರಿತ ಹೇಳಿಕೆಗಳನ್ನು ನೀಡಿ ಸಮಾಜದ ಸಾಮರಸ್ಯ ಹಾಳು ಮಾಡುವ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ತಂಜೀಂ ಮುಖಂಡ ದಾದು ಸೇಠ್ ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ವಸತಿ ರಹಿತರಿಗೆ ಹಕ್ಕುಪತ್ರ ನೀಡಲು ಆಗ್ರಹಿಸಿ ಅಂಬೇಡ್ಕರ್ ಸೇವಾ ಸಮಿತಿ ಅನಿರ್ದಿಷ್ಟ ಧರಣಿ
ವಿಷಯವನ್ನು ಪರಿಶೀಲಿಸಿ, ನಿಷ್ಪಕ್ಷಪಾತ ಕಾನೂನು ಜಾರಿ ಮತ್ತು ಶಾಂತಿಗೆ ಇಲಾಖೆಯ ಬದ್ಧವಾಗಿದೆ ಎಂದು ಎಸ್ಪಿ ಭರವಸೆ ನೀಡಿದರು.
ಈ ಸುದ್ದಿ ಓದಿ – ದಾವಣಗೆರೆ | ಬಸ್ ನಿಲ್ದಾಣದಲ್ಲಿ ಸುರಕ್ಷತೆಗೆ ಸಿಸಿಟಿವಿ ಅಳವಡಿಕೆಗೆ ಆಮ್ ಆದ್ಮಿ ಪಕ್ಷದ ಒತ್ತಾಯ
ಈ ವೇಳೆ ಎಐಎಂಐಎಂ ಪಕ್ಷದ ಕಾರ್ಯಕರ್ತರು ತಂಜೀಮ್ ನ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು.





