ದಾವಣಗೆರೆ | ಕಲ್ಯಾಣ ಕರ್ನಾಟಕ ಸೇರಿ 16 ಸಾವಿರ ಶಿಕ್ಷಕರ ನೇಮಕಕ್ಕೆ ಹಣಕಾಸು ಇಲಾಖೆ ಒಪ್ಪಿಗೆ

Date:

“ಕಲ್ಯಾಣ ಕರ್ನಾಟಕಕ್ಕೆ 5.5 ಸಾವಿರ ಶಿಕ್ಷಕರು, 2020ನೇ ಸಾಲಿನವರೆಗೆ ಅನುದಾನಿತ ಶಾಲೆಗಳಿಗೆ 6ಸಾವಿರ ಶಿಕ್ಷಕರು,  ಇನ್ನುಳಿದ ಭಾಗಕ್ಕೆ 5.5 ಸಾವಿರ ಶಿಕ್ಷಕರನ್ನು ಭರ್ತಿ ಮಾಡಲು ಈಗಾಗಲೇ ಹಣಕಾಸು ಇಲಾಖೆಯಿಂದ ಒಪ್ಪಿಗೆ ಸಿಕ್ಕಿದ್ದು ಸದ್ಯದಲ್ಲಿಯೇ ನೇಮಕಾತಿಯ ಪ್ರಕ್ರಿಯೆ ನಡೆಯಲಿದೆ” ಎಂದು ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧುಬಂಗಾರಪ್ಪ ತಿಳಿಸಿದರು.

1001731214
ಚನ್ನಗಿರಿಯಲ್ಲಿ ಕಾಂಗ್ರೆಸ್ ಮುಖಂಡರೊಂದಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಸುದ್ದಿವಾಹಿನಿಗಳ ಜೊತೆ ಮಾತನಾಡಿದ ಅವರು “2025-26ರ  ಬಜೆಟ್ ನಲ್ಲಿ ಶಿಕ್ಷಣ‌ ಕ್ಷೇತ್ರಕ್ಕೆ ಅಧಿಕ ಅನುದಾನ ನೀಡಿದ್ದೇವೆ. ರಾಜ್ಯದಲ್ಲಿ ಕೆಪಿಎಸ್ ಶಾಲೆಗಳಿಗೆ ಹೆಚ್ಚಿನ ಬೇಡಿಕೆ ಇದ್ದು ಪ್ರಸ್ತುತ 300 ಕೆ.ಪಿ.ಎಸ್ ಶಾಲೆಗಳಿದ್ದು ಪ್ರಸ್ತುತ ವರ್ಷದಲ್ಲಿ 500ಕ್ಕೂ ಹೆಚ್ಚು ಕೆ.ಪಿ.ಎಸ್ ಶಾಲೆಗಳನ್ನು ತೆರೆಯುವ ತಯಾರಿ ನಡೆಸಲಾಗಿದೆ. ಅಧುನಿಕ ತಂತ್ರಜ್ಞಾನದಿಂದ ಇಂದಿನ ಮಕ್ಕಳ ಕಲಿಕೆಯಲ್ಲಿ ಕುಂಠಿತವಾಗುತ್ತಿದ್ದು, ಮಾನವೀಯ ಮೌಲ್ಯಗಳು ಸಹ ಕ್ಷೀಣಿಸುತ್ತಿವೆ. ‌ಮುಂದಿನ ವರ್ಷದಿಂದ 1ನೇ ತರಗತಿಯಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣ ಭೋದನೆ ಮಾಡುವ ಉದ್ದೇಶ ಹೊಂದಲಾಗಿದೆ” ಎಂದರು.

1001731219

“ಪಠ್ಯ ಪುಸ್ತಕ ರಚನಾ ಸಮಿತಿಯ ತಂತ್ರಜ್ಞರು ಸಭೆಯನ್ನು ಮುಂದಿನ ವಾರದಿಂದ ಕರೆಯಲಿದ್ದೇವೆ. ಎಲ್ಲಾ ತಂತ್ರಜ್ಞರ ಜೊತೆ ಚರ್ಚಿಸಿ ಈ ಕಾಲಘಟ್ಟದಲ್ಲಿ ಮಕ್ಕಳಿಗೆ ಅಗತ್ಯವಾದ ನೈತಿಕ ಶಿಕ್ಷಣ, ಮೌಲ್ಯಗಳನ್ನು, ಪರಿಸರದ ಕಾಳಜಿ ಇತ್ಯಾದಿಗಳನ್ನು ಬೆಳೆಸುವ ಪಠ್ಯ, ಕಾರ್ಯಕ್ರಮಗಳನ್ನು  ಅಂತಿಮಗೊಳಿಸಿ ಅದಕ್ಕೆ ಬೇಕಾದ ಪಟ್ಟಿಯನ್ನು ತಂತ್ರಜ್ಞರು ತಯಾರಿಸಲಿದ್ದಾರೆ. ವಾರದಲ್ಲಿ ಎರಡು ದಿನ ನೈತಿಕ ಶಿಕ್ಷಣ, ಎರಡು ದಿನ ಬರವಣಿಗೆ, ಎರಡು ದಿನ ಓದುವ ಹವ್ಯಾಸಗಳ ಬಗ್ಗೆ ತಿಳಿಸಲಾಗುವುದು. ಎಲ್.ಕೆ.ಜಿ, ಯು.ಕೆ.ಜಿ ಶಾಲೆಗಳಿಗೂ ರಾಜ್ಯದಲ್ಲಿ ಅಧಿಕ ಬೇಡಿಕೆ ಇದ್ದು ಅವುಗಳನ್ನು ತೆರೆಯಲು ಸಿದ್ಧತೆಗಳು ನಡೆಯುತ್ತಿವೆ. ಆದರೆ ಅಲ್ಲೂ ಹೆಚ್ಚಿನ ಆದ್ಯತೆ ಕನ್ನಡಕ್ಕೆ ಇರಲಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಜಾತಿ ತಾರತಮ್ಯ, ಎಸ್ಡಿಎಂಸಿ ಅಧ್ಯಕ್ಷನಿಂದ ಮುಖ್ಯ ಶಿಕ್ಷಕನ ವಿರುದ್ಧ ದೂರು, ಕ್ರಮಕ್ಕೆ ಆಗ್ರಹ.

“ಕಳೆದ ವಿಧಾನಸಭಾ ಚುನಾವಣಾ ವೇಳೆ ನಾನು ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಸಮಿತಿಯ ಉಪಾಧ್ಯಕ್ಷನಾಗಿದ್ದು, ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಯಂತೆ ರಾಜ್ಯದ ಎಲ್ಲಾ ಸರ್ಕಾರಿ ನೌಕರರಿಗೆ ಒ.ಪಿ.ಎಸ್ ಅನ್ನು ಮುಂದಿನ ದಿನಗಳಲ್ಲಿ ಜಾರಿಗೊಳಿಸಲು ತೀರ್ಮಾನಿಸಲಾಗಿದೆ” ಎಂದು ಮಾಹಿತಿ ನೀಡಿದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ದಾವಣಗೆರೆ | ಕುಟುಂಬ ರಾಜಕಾರಣಕ್ಕೆ ವಿರೋಧ; ಗೆಲ್ಲುವ ಅಭ್ಯರ್ಥಿಗೆ ಟಿಕೆಟ್: ಸಿಎಂ ಸಿದ್ದರಾಮಯ್ಯ

"ನಾನು ಕುಟುಂಬ ರಾಜಕಾರಣ ಬೆಂಬಲಿಸುವುದಿಲ್ಲ, ವಿರೋಧಿಸುತ್ತೇನೆ. ಆದರೆ ಕ್ಷೇತ್ರದಲ್ಲಿ ಅಳೆದು ತೂಗಿ...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಸಮಾಜ ಸ್ಪಂದನಶೀಲೆ- ಸೌಭಾಗ್ಯ ಸಿ. 

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...