ಸಚಿವರ ಮೂಲಕ ಡಿಸಿಎಂ ವಿಚಾರ ಮುಂದೆ ತಂದಿದ್ದೇ ಸಿದ್ದರಾಮಯ್ಯ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

Date:

ಜನರ ಸಮಸ್ಯೆಗಳನ್ನು ಆಲಿಸಿ, ಪರಿಹಾರ ಕ್ರಮಗಳನ್ನು ಕೈಗೊಳ್ಳುವುದನ್ನು ಬಿಟ್ಟು, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಬಲಿಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ. ಸಚಿವರ ಮೂಲಕ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ವಿಚಾರವನ್ನು ಮುಂದೆ ತಂದಿರುವುದೇ ಸಿದ್ದರಾಮಯ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, “ಸಿದ್ದರಾಮಯ್ಯ ಎಷ್ಟು ದಿನ ಮುಖ್ಯಮಂತ್ರಿ ಆಗಿರುತ್ತಾರೋ ಗೊತ್ತಿಲ್ಲ. ಉಪಮುಖ್ಯಮಂತ್ರಿ ವಿಚಾರದ ಜೊತೆಗೆ ಈಗ ಮುಖ್ಯಮಂತ್ರಿ ಹುದ್ದೆಯ ಚರ್ಚೆಯೂ ಶುರುವಾಗಿದೆ. “ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್‌ ಒಬ್ಬರಿಗೊಬ್ಬರು ಬುಡ ಕೊಯ್ದುಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ರಸ್ತೆಯಲ್ಲಿ ನಿಂತುಕೊಂಡು ಹೊಡೆದಾಡಿಕೊಳ್ಳುವ ಪರಿಸ್ಥಿತಿ ಬಂದಿದೆ. ಮುಂದೇನಾಗುತ್ತದೆ ನೋಡೋಣ” ಎಂದು ಹೇಳಿದ್ದಾರೆ.

“ರಾಜ್ಯದ ಜನರು ಕಾಂಗ್ರೆಸ್ ಸರ್ಕಾರದ ವಿರುದ್ಧ ಅಸಮಾಧಾನಗೊಂಡಿದ್ದಾರೆ. ವಿಶ್ವಾಸ ಕಳೆದುಕೊಂಡಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಗಂಭೀರ ಆರೋಪವಿದೆ. ಆದರೂ, ಸಚಿವ ನಾಗೇಂದ್ರ ಅವರನ್ನು ಕರೆದು ವಿಚಾರಣೆ ನಡೆಸುವ ಧೈರ್ಯವನ್ನು ಎಸ್ಐಟಿ ಮಾಡಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...