ಬೆಳಗಾವಿ | ಸಂಪೂರ್ಣ ಮನೆ ಹಾನಿಗೆ ₹1.2 ಲಕ್ಷ ಪರಿಹಾರದ ಜೊತೆಗೆ ಮನೆ ಕೊಡಲು ತೀರ್ಮಾನ: ಸಿಎಂ ಸಿದ್ದರಾಮಯ್ಯ

Date:


ಮಳೆಯಿಂದ ಸಂಪೂರ್ಣ ಮನೆ ಹಾನಿ ಸಂಭವಿಸಿದ ಸಂತ್ರಸ್ತರಿಗೆ 1.2 ಲಕ್ಷ ರೂ. ಪರಿಹಾರದ ಜೊತೆಗೆ ಮನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ಪ್ರವಾಹ ಪೀಡಿತ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿ ಪರಿಶೀಲಿಸಿದರು.

ಪರಿಹಾರ ವಿತರಣೆಯಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಬಿಜೆಪಿಯವರು ಆರೋಪಿಸಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, “ಹಿಂದೆ ಬಿ.ಎಸ್.ಯಡಿಯೂರಪ್ಪನವರು ಸಂಪೂರ್ಣ ಮನೆ ಹಾನಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದರು. ಈ ನೆರವಿನ ದುರುಪಯೋಗವಾಯಿತು. ಹಾಗೂ ಹಲವರಿಗೆ ಮೊದಲನೇ ಕಂತು ಮಾತ್ರ ಬಿಡುಗಡೆಯಾಗಿ, ಎರಡು ಹಾಗೂ ಮೂರನೇ ಕಂತಿನ ಪರಿಹಾರ ಈವರೆಗೂ ದೊರೆತಿಲ್ಲ. ಈ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ 1.2 ಲಕ್ಷ ರೂ. ಪರಿಹಾರ ಹಾಗೂ ಮನೆ ನೀಡುವ ನಿರ್ಧಾರ ಮಾಡಿದೆ” ಎಂದು ಸ್ಪಷ್ಟ ಪಡಿಸಿದರು.

ಜನರ ಸಹಕಾರವಿದ್ದರೆ ಪದೇ ಪದೇ ಮುಳುಗಡೆಯಾಗುವ ಹಳ್ಳಿಗಳ ಸ್ಥಳಾಂತರ ಮಾಡುವ ಮೂಲಕ ಶಾಶ್ವತ ಪರಿಹಾರ ಒದಗಿಸಲು ಚಿಂತನೆ ಮಾಡಲಾಗುವುದು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪರಿಹಾರ ಕೆಲಸ ಪ್ರಾರಂಭರಾಜ್ಯದ ಹಲವೆಡೆ ಮಳೆಯಿಂದ ಹಾನಿಯಾಗಿದೆ. ಎಲ್ಲ ಕಡೆ ಪರಿಹಾರ ಕೆಲಸಗಳನ್ನು ಪ್ರಾರಂಭಿಸಲಾಗಿದೆ. ಮೈಸೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಭೇಟಿನೀಡಲಾಗಿದ್ದು, ಮೃತಪಟ್ಟವರಿಗೆ ಹಾಗೂ ಜಾನುವಾರುಗಳು ಸತ್ತಿರುವುದಕ್ಕೆ ಕೂಡಲೇ ಪರಿಹಾರ ವಿತರಿಸಲಾಗುತ್ತಿದೆ. ಮನೆಗಳ ಬಿದ್ದಿರುವುದಕ್ಕೆ ಪರಿಹಾರ, ವಿದ್ಯುತ್‌ ಕಂಬ, ಟ್ರಾನ್ಸ್‌ಫಾರ್ಮರ್‌ ಗಳ ದುರಸ್ತಿ ಮೊದಲಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಮುಂದಿನ ವಾರ ಹೆಚ್ಚು ಮಳೆ: ಕಟ್ಟೆಚ್ಚರ ವಹಿಸಲು ಸೂಚನೆ
ಬೆಳಗಾವಿಯಲ್ಲಿ ಕಳೆದ 42 ದಿನದಿಂದ ನಿರಂತರ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿಗಳಿಗೂ ರಜೆ ಘೋಷಣೆ ಮಾಡುವಂತೆ ಸೂಚಿಸಲಾಗಿದೆ. ಮುಂದಿನ ವಾರ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ. ಇದಕ್ಕಾಗಿ ಕಂದಾಯ, ವಿಪತ್ತು ನಿರ್ವಹಣೆ, ಅರಣ್ಯ ಇಲಾಖೆ, ಇಂಧನ, ನೀರಾವರಿ ಸೇರಿದಂತೆ ಎಲ್ಲ ಇಲಾಖೆಗಳು ಎಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ ಎಂದರು.

ಗೃಹಲಕ್ಷ್ಮಿ ಯೋಜನೆ ಹಣ ಮೂರು ತಿಂಗಳಿನಿಂದ ಬಾಕಿ ಇದೆ ಎಂದು ಕೇಳಿದ್ದಕ್ಕೆ “ಜುಲೈ ತಿಂಗಳಿನದ್ದು ಮಾತ್ರ ಬಾಕಿ ಇದೆ. ಅದನ್ನೂ ಶೀಘ್ರವೇ ವಿತರಿಸಲಾಗುವುದು” ಎಂದು ತಿಳಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌, ಬೆಳಗಾವಿ ಜಿಲ್ಲೆಯ ಶಾಸಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...