ಕೋಗಿಲು ಬಡಾವಣೆಯಲ್ಲಿ ಮನೆಗಳ ತೆರವು; ವಿಸ್ತೃತ ವರದಿ ಸಲ್ಲಿಸಲು ಅಮೈಕಸ್ ಕ್ಯೂರಿಗೆ ಹೈಕೋರ್ಟ್ ನಿರ್ದೇಶನ

Date:

ಯಲಹಂಕ ಬಳಿಯ ಕೋಗಿಲು ಬಡಾವಣೆಯಲ್ಲಿನ ವಾಸಿಂ ಮತ್ತು ಫಕೀರ್ ಕಾಲನಿಗಳಲ್ಲಿನ ಮನೆಗಳ ತೆರವು ಕಾರ್ಯಾಚರಣೆಯಲ್ಲಿ ಎಷ್ಟು ಮಂದಿ ನಿರ್ಗತಿಕರಾಗಿದ್ದಾರೆ ಹಾಗೂ ಸಂತ್ರಸ್ತರಿಗೆ ಕಲ್ಪಿಸಲಾಗಿರುವ ಪುನರ್ವಸತಿ ವ್ಯವಸ್ಥೆ ಕುರಿತ ಮಾಹಿತಿ ಒಳಗೊಂಡ ವಿವರವಾದ ವರದಿ ಸಲ್ಲಿಸುವಂತೆ ಪ್ರಕರಣದ ಅಮೈಕಸ್‌ ಕ್ಯೂರಿಗೆ ಹೈಕೋರ್ಟ್‌ ನಿರ್ದೇಶಿಸಿದೆ.

ಅಕ್ರಮವಾಗಿ ಮನೆಗಳ ತೆರವು ಕಾರ್ಯಾಚರಣೆ ನಡೆಸಲಾಗಿದ್ದು, ಅದನ್ನು ಅಸಾಂವಿಧಾನಿಕ ಎಂದು ಘೋಷಿಸುವಂತೆ ಕೋರಿ ಕೋಗಿಲು ಬಡಾವಣೆ ನಿವಾಸಿಗಳಾದ ಜೈಬಾ ತಬಸ್ಸುಮ್, ರೆಹಾನಾ ಹಾಗೂ ಆರೀಫ್ ಬೇಗಂ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ವಿಚಾರಣೆ ಆರಂಭವಾಗುತ್ತಿದ್ದಂತೆ ನ್ಯಾಯಪೀಠ, ಅಮೈಕಸ್‌ ಕ್ಯೂರಿ ಬಿ.ವಿ. ವಿದ್ಯುಲ್ಲತಾ ಅವರನ್ನು ಕುರಿತು, ಮನೆಗಳ ತೆರವು ಕಾರ್ಯಾಚರಣೆಯಿಂದ ಎಷ್ಟು ಮಂದಿ ನಿರ್ಗತಿಕರಾಗಿದ್ದಾರೆ. ಎಷ್ಟು ಜನರ ಮನೆ ತೆರವು ಮಾಡಲಾಗಿದೆ. ಎಷ್ಟು ಗುಡಿಸಲುಗಳನ್ನು ನಾಶಪಡಿಸಲಾಗಿದೆ. ಎಷ್ಟು ಕುಟುಂಬಗಳು ನಿರ್ಗತಿಕವಾಗಿವೆ. ಪುನರ್ವಸತಿಯ ವ್ಯವಸ್ಥೆ ಹೇಗಿದೆ ಎಂಬ ಅಂಶಗಳನ್ನೊಳಗೊಂಡ ವಿವರವಾದ ವರದಿ ಸಲ್ಲಿಸಬೇಕು ಎಂದು ಸೂಚಿಸಿತಲ್ಲದೆ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು (ಕೆಎಸ್‌ಎಲ್‌ಎಸ್‌ಎ) ಅಮೈಕಸ್ ಕ್ಯೂರಿ ಅವರಿಗೆ ಸಂಪೂರ್ಣ ನೆರವು ನೀಡಬೇಕು ಎಂದು ಆದೇಶಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಜನಪ್ರತಿನಿಧಿಗಳ ಘನತೆ ಇಲ್ಲದ ಮಾತಿಗೆ ಲಗಾಮು ಬೀಳಬೇಕು

ಮತ್ತೊಂದು ಅರ್ಜಿಯಲ್ಲಿ ಸರ್ಕಾರಕ್ಕೆ ನೋಟಿಸ್

ಫಕೀರ್‌ ಕಾಲನಿಯಲ್ಲಿ 1990ರಿಂದ ನೆಲೆಸಿರುವ 15 ಮಂದಿಯ ನಿವಾಸಗಳನ್ನು ತೆರವು ಮಾಡಲಾಗಿರುವುದನ್ನು ಆಕ್ಷೇಪಿಸಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಪ್ರತ್ಯೇಕ ನೋಟಿಸ್‌ ಜಾರಿಗೊಳಿಸಿದೆ.

ಕೋಗಿಲು ಬಡಾವಣೆಯ ರಬಿಯಾ, ಮೊಹಮ್ಮದ್‌ ರಫೀಕ್‌ ಸೇರಿದಂತೆ 15 ಮಂದಿ ಸಲ್ಲಿಸಿರುವ ಕುರಿತು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಕೀಲ ಕ್ಲಿಫ್ಟನ್‌ ರೊಜಾರಿಯೊ ವಾದ ಮಂಡಿಸಿ, ಅರ್ಜಿದಾರರು ಫಕೀರ್‌ ಕಾಲನಿಯಲ್ಲಿ 1990ರಿಂದ ನೆಲೆಸಿದ್ದಾರೆ. ಎಲ್ಲರಿಗೂ ಕರ್ನಾಟಕ ಭೂ ಕಂದಾಯ ಕಾಯ್ದೆ ಸೆಕ್ಷನ್‌ 94ಸಿಸಿ ಅನುಸಾರ ಹಕ್ಕು ಪತ್ರ ನೀಡಲಾಗಿದೆ. ಇದಕ್ಕೆ ಪೂರಕವಾಗಿ ಗೂಗಲ್‌ ಅರ್ಥ್ ದಾಖಲೆ ಇದೆ. ಸರ್ಕಾರದ ದಾಖಲೆಯೇ ಇದೆ. ಅದಾಗ್ಯೂ, ಮನೆಗಳನ್ನು ತೆರವು ಮಾಡಲಾಗಿದೆ ಎಂದು ಆಕ್ಷೇಪಿಸಿದರು.

ವಾದ ಆಲಿಸಿದ ನ್ಯಾಯಪೀಠ, ಅರ್ಜಿ ಸಂಬಂಧ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಿ, ಆಕ್ಷೇಪಣೆ ಸಲ್ಲಿಸಲು ನಿರ್ದೇಶಿಸಿತು. ಜತೆಗೆ, ಈ ಪ್ರಕರಣದಲ್ಲೂ ನೆರವು ನೀಡುವಂತೆ ಅಮೈಕಸ್‌ ಕ್ಯೂರಿಗೆ ಸೂಚಿಸಿ, ಅರ್ಜಿ ವಿಚಾರಣೆಯನ್ನು ಮಾರ್ಚ್‌ 12ಕ್ಕೆ ಮುಂದೂಡಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...