ಮೆಟ್ರೋ ಕಾಮಗಾರಿ ಪೂರ್ಣಗೊಂಡಿರುವ ಕಡೆ ಸರ್ವೀಸ್ ರಸ್ತೆ ಹಾಗೂ ಪಾದಚಾರಿ ಮಾರ್ಗ ಅಭಿವೃದ್ಧಿಪಡಿಸಿ: ತುಷಾರ್ ಗಿರಿ ನಾಥ್

Date:

“ಹೊರ ವರ್ತುಲ ರಸ್ತೆಯಲ್ಲಿ ಮೆಟ್ರೋ ಕಾಮಗಾರಿ ಪೂರ್ಣಗೊಂಡಿರುವ ಕಡೆ ಕೂಡಲೇ ಸರ್ವೀಸ್ ರಸ್ತೆ ಹಾಗೂ ಪಾದಚಾರಿ ಮಾರ್ಗವನ್ನು ಅಭಿವೃದ್ಧಿಪಡಿಸಬೇಕು” ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿಬಿಎಂಪಿ, ಮೆಟ್ರೋ, ಜಲಮಂಡಳಿ ಹಾಗೂ ಒಆರ್‌ಆರ್‌ಸಿಎ ಖಾಸಗಿ ಸಂಸ್ಥೆಯ ಸಹಭಾಗಿತ್ವದಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, “ನಗರದ ಮಹದೇವಪುರ ವಲಯ ವ್ಯಾಪ್ತಿಯ ಹೊರ ವರ್ತುಲ ರಸ್ತೆಯಲ್ಲಿ ಪಾಲಿಕೆ ಹಾಗೂ ಮೆಟ್ರೋ ಅಧಿಕಾರಿಗಳು ಜಂಟಿ ಪರಿಶೀಲನೆ ನಡೆಸಿ ಮೆಟ್ರೋ ಕಾಮಗಾರಿ ಪೂರ್ಣಗೊಂಡಿರುವ ಕಡೆ ಸರ್ವೀಸ್ ರಸ್ತೆ ಹಾಗೂ ಪಾದಚಾರಿ ಮಾರ್ಗವನ್ನು ಅಭಿವೃದ್ಧಿಪಡಿಸಬೇಕು” ಎಂದು ಸೂಚಿಸಿದರು.

“ಹೊರ ವರ್ತುಲ ರಸ್ತೆಗೆ ಸಂಪರ್ಕ ಕಲ್ಪಿಸುವ ಪ್ರಮುಖ 22 ರಸ್ತೆಗಳು ಸುಸ್ತಿತಿಯಲ್ಲಿರುವಂತೆ ನೋಡಿಕೊಳ್ಳಬೇಕು. ಜತೆಗೆ ಹೊರ ವರ್ತುಲ ರಸ್ತೆಯಲ್ಲಿ ಬರುವ ಮೇಲುಸೇತುವೆಗಳಲ್ಲಿನ ಮೇಲ್ಪದರವನ್ನು ಸರಿಪಡಿಸಬೇಕು. ಪಣತ್ತೂರ್ ರಸ್ತೆ ಅಗಲೀಕರಣ ಕಾಮಗಾರಿಯನ್ನು ಶೀಘ್ರವಾಗಿ ಕೈಗೆತ್ತಿಕೊಳ್ಳಬೇಕು” ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹೊರ ವರ್ತುಲ ರಸ್ತೆಯಲ್ಲಿ ಕೈಗೆತ್ತಿಕೊಂಡಿರುವ ಮೆಟ್ರೋ ಕಾಮಗಾರಿ ಪೂರ್ಣಗೊಂಡಲ್ಲಿ ಈ ಭಾಗದಲ್ಲಾಗುವ ಸಂಚಾರದಟ್ಟಣೆಯು ಕಡಿಮೆಯಾಗಲಿದೆ. ಮೆಟ್ರೋ ಕಾಮಗಾರಿ ಪೂರ್ಣಗೊಂಡಿರುವ ಕಡೆ ಹಾಕಿರುವ ಬ್ಯಾರಿಗೇಟ್‌ಗಳನ್ನು ತೆರವುಗೊಳಿಸಬೇಕು. ಸರ್ವೀಸ್ ರಸ್ತೆಯಲ್ಲಿ ವಾಹನ ಸವಾರರಿಗೆ ಸಂಚರಿಸಲು ಯಾವುದೇ ಅಡೆ-ತಡೆ ಆಗದಂತೆ ನೋಡಿಕೊಳ್ಳಕು” ಎಂದು ಹೇಳಿದರು.

“ನಗರದಲ್ಲಿ ಈಗಾಗಲೇ ಮಳೆಗಾಲ ಪ್ರಾರಂಭವಾಗಿದ್ದು, ರಾಜಕಾಲುವೆಗಳ ಸಮರ್ಪಕ ನಿರ್ವಹಣೆ ಮಾಡಿ, ಮಳೆಯಾಗುವ ಸಂದರ್ಭದಲ್ಲಿ ಎಲ್ಲಿಯೂ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ನಟ ದರ್ಶನ್ ವಿರುದ್ಧದ ಕೊಲೆ ಪ್ರಕರಣ; ಮತ್ತಿಬ್ಬರು ಆರೋಪಿಗಳು ಪೊಲೀಸರಿಗೆ ಶರಣಾಗತಿ

ಮೆಟ್ರೋ ವ್ಯವಸ್ಥಾಪಕ ನಿರ್ದೇಶಕರಾದ ಮಹೇಶ್ವರ್ ರಾವ್ ಮಾತನಾಡಿ, “ಮೆಟ್ರೊ 2ಎ ಕಾಮಗಾರಿ ನಡೆಯುವ ರಸ್ತೆಯ ಮಿಡಿಯನ್ ನಿರ್ವಹಣೆ ಮೆಟ್ರೋ ವತಿಯಿಂದಲೇ ಮಾಡಲಿದ್ದು, ಬಿಬಿಎಂಪಿ ಹಾಗೂ ಮೆಟ್ರೊ ಸಮನ್ವಯದಲ್ಲಿ ಮೆಟ್ರೋ ಕಾಮಗಾರಿಯನ್ನು ನಾಗರಿಕರಿಗೆ ಹಾಗೂ ಐಟಿ ಉದ್ಯೋಗಿಗಳಿಗೆ ತೊಂದರೆ ಉಂಟಾಗದ ರೀತಿ ಕಾರ್ಯ ನಿರ್ವಹಿಸಲಿದೆ” ಎಂದು ತಿಳಿಸಿದರು.

ಸಭೆಯಲ್ಲಿ ಮಹದೇವಪುರ ವಲಯ ಆಯುಕ್ತರಾದ ರಮೇಶ್, ಪ್ರಧಾನ ಅಭಿಯಂತರರಾದ ಪ್ರಹ್ಲಾದ್, ಮಹದೇವಪುರ ವಲಯ ಜಂಟಿ ಆಯುಕ್ತರಾದ ದಾಕ್ಷಾಯಿಣಿ, ಮುಖ್ಯ ಅಭಿಯಂತರರಾದ ಲೋಕೇಶ್, ಒಆರ್‌ಆರ್‌ಸಿಎ ಉಪಾಧ್ಯಕ್ಷರಾದ ಅರ್ಚನಾ ಟಯಾದೆ, ಪಾಲಿಕೆ, ಮೆಟ್ರೋ, ಜಲಮಂಡಳಿ ಅಧಿಕಾರಿಗಳು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...