ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಕಠಿಣ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ನಿನ್ನೆ ಮಧ್ಯಾಹ್ನದ ಹೊತ್ತಿಗೆ 10 ದಿನಗಳ ಕಡ್ಡಾಯ ರಜೆ ಮೇಲೆ ತೆರಳಿದ್ದ ರಾಜಚಂದ್ರ ರಾವ್ ಅವರನ್ನ ರಾತ್ರಿ ಹೊತ್ತಿಗೆ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ವಿಚಾರಣೆ ಇನ್ನೂ ಬಾಕಿಯಿರುವ ಕಾರಣ ಅಮಾನತುಗೊಳಿಸುರುವುದಾಗಿ ಆದೇಶದಲ್ಲಿ ತಿಳಿಸಿದೆ.
ಕಚೇರಿಯಲ್ಲಿ ಕುಳಿತು ಪೊಲೀಸ್ ಸಮವಸ್ತ್ರದಲ್ಲೇ ರಾಮಚಂದ್ರರಾವ್ ಮಹಿಳೆಯೊಬ್ಬರನ್ನ ಅಪ್ಪಿಕೊಂಡು ಮುತ್ತಿಡುತ್ತಿದ್ದ ಹಸಿಬಿಸಿ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕನ್ನಡಿಗರ ಹಕ್ಕುಗಳನ್ನು ಕೊಲ್ಲದಿರಲಿ ಕೇರಳ, ಒಡನೆಯೇ ತಿದ್ದುಪಡಿ ತರಲಿ
ಇದು ರನ್ಯಾರಾವ್ ಪ್ರಕರಣಕ್ಕಿಂತ ಮೊದಲು ನಡೆದಿರುವ ಘಟನೆ ಎಂಬ ಮಾಹಿತಿ ಸಿಕ್ಕಿದೆ. ಅತ್ತ ಮಗಳು ರನ್ಯಾರಾವ್ ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿದ್ದರೆ ಇತ್ತ ಮಲತಂದೆಯ ರಾಸಲೀಲೆಯ ವಿಡಿಯೋ ವೈರಲ್ ಆಗಿರುವುದು ಜನರಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಈ ಹಿಂದೆ ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ್ದ ಪ್ರಕರಣ ಸಂಬಂಧ ನಟಿ ರನ್ಯಾ ರಾವ್ ಬಂಧನ ಬೆನ್ನಲ್ಲೇ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ಅವರ ಹೆಸರೂ ಪ್ರಕರಣದಲ್ಲಿ ತಳಕು ಹಾಕಿಕೊಂಡಿತ್ತು. ನಟಿ ರನ್ಯಾ ರಾವ್‌ಗೆ ವಿಮಾನ ನಿಲ್ದಾಣದಲ್ಲಿ ಪ್ರೋಟೋಕಾಲ್ ನೀಡಿದ ಬಗ್ಗೆ ತನಿಖೆಗೆ ಕರ್ನಾಟಕ ಗೃಹ ಇಲಾಖೆ ಆದೇಶಿಸಿತ್ತು.





