‌ಧಾರವಾಡ | ಸರ್ಕಾರ ಕನ್ನಡ ಸಾಹಿತ್ಯ ಪರಿಷತ್ತನ್ನು ಕಡೆಗಣಿಸುತ್ತಿದೆ: ಮಹೇಶ್‌ ಜೋಶಿ

Date:

”ಇತ್ತೀಚಿನ ದಿನಗಳಲ್ಲಿ ಕನ್ನಡಕ್ಕೆ ಕಂಟಕಗಳು ಹೆಚ್ಚಾಗುತ್ತಿರುವ ವಾತಾವರಣ ಸೃಷ್ಟಿಯಾಗುತ್ತಿದೆ. ಬರಗಾಲದ ಕಾರಣದಿಂದ ಮಂಡ್ಯ ಸಾಹಿತ್ಯ ಸಮ್ಮೇಳನವನ್ನು ಮುಂದೂಡಲಾಗಿತ್ತು. ಆದರೆ ಕೆಲವು ಕಿಡಿಗೇಡಿಗಳ ಮಾತುಗಳಿಂದ‌ ಕನ್ನಡ ಸಾಹಿತ್ಯ ಪರಿಷತ್ತಿಗೆ ಕೆಟ್ಟ ಹೆಸರು ಬರುವಂತಾಗಿದೆ” ಎಂದು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ಹೇಳಿದರು.

ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಕಸಾಪ ಸಭಾ ಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

“ಬರಗಾಲದಲ್ಲೂ ಸರ್ಕಾರವು ದಸರಾ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಿರುವುದಕ್ಕಿಂತ ಸರಳವಾಗಿ ಆಚರಿಸಬೇಕಿತ್ತು. ಆದರೆ ಸರ್ಕಾರವೂ ಕನ್ನಡ ಸಾಹಿತ್ಯ ಪರಿಷತ್ತನ್ನು ಕಡೆಗಣಿಸುತ್ತಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ ಎಂಬಂತೆ ಕಡ್ಡಾಯ ಕನ್ನಡ ಕಾನೂನು ಸರ್ಕಾರದಿಂದ ಅಧಿಕೃತ ಜಾರಿಯಾಗಬೇಕು. ನಾನು ಹಲವು ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ತಿಳಿಸಿದರೂ ಪ್ರಯೋಜನವಾಗಿಲ್ಲ. ಹಿಂದೆ ನಡೆದ ಹಾವೇರಿ ಸಾಹಿತ್ಯ ಸಮ್ಮೇಳನದ ಕುರಿತು ಕೆಲವರು ಪರಿಷತ್ತಿನ ಹೆಸರು ಕೆಡಿಸುವ ಕಾರ್ಯಕ್ಕೆ ಬಂದಿಳಿದಿದ್ದರು. ಮುಖ್ಯಮಂತ್ರಿಯವರು ಬೇರೆ ಸಾಹಿತಿಗಳನ್ನು ಭೇಟಿಮಾಡಿ ನನ್ನನ್ನು ಕಡೆಗಣಿಸಿದ್ದಾರೆ. ಇದರಿಂದ ಇಂದಿನ ಸರ್ಕಾರವು ಪರಿಷತ್ತಿನ ಬಗ್ಗೆ ತಾತ್ಸಾರ ಮತ್ತು ಪೂರ್ವಗ್ರಹ ಪೀಡಿತದಂತೆ ಕಾಣಿಸುತ್ತಿದೆ” ಎಂದರು.

“ನಾವು ಮಡಿವಂತಿಕೆಯನ್ನು ಆಚರಿಸುತ್ತಿದ್ದೆವು. ಆದರೆ ಮಡಿವಂತಿಕೆಯನ್ನು ದಾಟಿ ಕನ್ನಡದ ಪರ ನಿಲ್ಲುತ್ತೇವೆ. ಮರಾಠಿಗರು ಕನ್ನಡಿಗರ ಪರ ನಿಲ್ಲಬೇಕು. ಪರಿಷತ್ತಿಗೆ ನ್ಯಾಯಾಂಗದಲ್ಲೂ ಅನ್ಯಾಯವಾಗುತ್ತಿದೆ. ಹೀಗಾಗಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆದ್ಯತೆಯನ್ನು ನೀಡಬೇಕು. ನನಗೂ ಬಿಜೆಪಿಗೂ ಸಂಬಂಧವಿಲ್ಲ, ನಾನು ಬಿಜೆಪಿಯ ಸದಸ್ಯನೂ ಅಲ್ಲ. ನಾನು ಎಡಪಂಥೀಯನೂ ಅಲ್ಲ, ಬಲಪಂಥೀಯನೂ ಅಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಅಂಗನವಾಡಿ ಕೇಂದ್ರಗಳಿಗೆ ಮೊಟ್ಟೆ ಪೂರೈಕೆಯಲ್ಲಿ ಅಕ್ರಮ ಆರೋಪ; ತನಿಖೆಗೆ ಆಗ್ರಹ

“ಬಹುತೇಕ ರೈಲು ನಿಲ್ದಾಣಗಳಲ್ಲಿಯ ಪ್ರಧಾನಿ‌ ಮೋದಿ ಕಟೌಟ್‌ಗಳಲ್ಲಿ ಹಿಂದಿ ಮತ್ತು ಇಂಗ್ಲಿಷ್ ಬಿಟ್ಟರೆ ಒಂದೇ ಒಂದು ಕನ್ನಡ ಶಬ್ಧಕ್ಕೆ ಅವಕಾಶವಿಲ್ಲದಿರುವ ಪ್ರಶ್ನೆಗೆ ನಾವು ಹಿಂದಿ ಹೇರಿಕೆಯನ್ನು ಒಪ್ಪುವುದಿಲ್ಲ” ಎಂದು ಹೇಳಿದರು.

ಪತ್ರಿಕಾಗೋಷ್ಠಿ ವೇಳೆ ಧಾರವಾಡ ಜಿಲ್ಲೆ ಕಸಾಪ ಅಧ್ಯಕ್ಷ ಡಾ. ಲಿಂಗರಾಜ ಅಂಗಡಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...