ಧಾರವಾಡ | ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ನಿಧನ

Date:

ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ಮಂಗಳವಾರ ತಡರಾತ್ರಿ ಧಾರವಾಡದ ನಿರ್ಮಲಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಧಾರವಾಡದ ಸಪ್ತಾಪೂರದ ದುರ್ಗಾ ಕಾಲೊನಿಯ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಬಿ.ಕೆ.ಲೋಣಿಯಲ್ಲಿ 1928 ಏಪ್ರಿಲ್‌ 2ರಂದು ಗುರುಲಿಂಗ ಕಾಪಸೆ ಜನಿಸಿದ್ದರು. ಅವರಿಗೆ 96 ವಯಸ್ಸಾಗಿತ್ತು. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾಗಿ ನಿವೃತ್ತ ಹೊಂದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಪಸೆ ಅವರ ಸಾಹಿತ್ಯ ಸಾಧನೆಗೆ ವರದರಾಜ ಆದ್ಯ ಪ್ರಶಸ್ತಿ, ಆನಂದಕಂದ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ರಾಜ್ಯ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳು ಒಲಿದುಬಂದಿವೆ. ಇವರು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

‘ಅಕ್ಕಮಹಾದೇವಿ’, ‘ಅರವಿಂದರು’, ‘ಹಲಸಂಗಿ ಗೆಳೆಯರು’, ’ಬಸವೇಶ್ವರ’, ಶಾಲ್ಮಲೆಯಿಂದ ಗೋದಾವರಿಯವರೆಗೆ (ಪ್ರವಾಸ ಕಥನ) ಮೊದಲಾದ ಕೃತಿಗಳನ್ನು ರಚಿಸಿದ್ಧಾರೆ.

ಗುರುಲಿಂಗ ಕಾಪಸೆ ಅವರ ಇಚ್ಛೆಯಂತೆ ಡಾ. ರಾಮಣ್ಣವರ ಚಾರಿಟಬಲ್ ಟ್ರಸ್ಟ್ ಬೈಲಹೊಂಗಲದ ಮುಖಾಂತರ ಬೆಳಗಾವಿಯ ಕೆಎಲ್ಇ ಆಯುರ್ವೇದ ಮಹಾವಿದ್ಯಾಲಯಕ್ಕೆ ದೇಹದಾನ ಮಾಡಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...