ಬೀದರ್ | ಸಂವಿಧಾನ ಜಾಗೃತಿ ಜಾಥಾಕ್ಕೆ ಅಡ್ಡಿ: 11 ಜನರ ವಿರುದ್ಧ ಪ್ರಕರಣ ದಾಖಲು, ಇಬ್ಬರ ಬಂಧನ

Date:

ಭಾಲ್ಕಿ ತಾಲೂಕಿನ ಮಳಚಾಪುರ ಗ್ರಾಮದಲ್ಲಿ ಶುಕ್ರವಾರ ನಡೆದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿ, ಕಲ್ಲು ತೂರಾಟ ನಡೆಸಿದ ಅದೇ ಗ್ರಾಮದ 11 ಜನರ ವಿರುದ್ಧ ಪ್ರಕರಣ ದಾಖಲಿಸಿ, ಇಬ್ಬರನ್ನು ಧನ್ನೂರಾ ಠಾಣೆ ಪೊಲೀಸರು ಶನಿವಾರ ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

“ಸಮಾಜ ಕಲ್ಯಾಣ ಇಲಾಖೆಯಿಂದ ಮಾಳಚಾಪೂರ ಗ್ರಾಮದಲ್ಲಿ ಶುಕ್ರವಾರ ಸಂಜೆ ಸಂವಿಧಾನ ಜಾಗೃತಿ ಜಾಥಾ ಆಯೋಜಿಸಲಾಗಿತ್ತು. ಈ ವೇಳೆ ಆಗಮಿಸಿದ ಯುವಕರ ಗುಂಪು ‘ಬನಾಯೆಂಗೆ ಮಂದಿರ’ ಹಾಡು ಹಾಕಿ ಎಂದು ಆಯೋಜಕರನ್ನು ಬಲವಂತ ಮಾಡಿದ್ದಾರೆ. ಬಳಿಕ ಗ್ರಾಮ ಪಂಚಾಯತ್ ಮುಂದೆ ನಡೆದ ಸಂವಿಧಾನ ಜಾಥಾ ಕಾರ್ಯಕ್ರಮದಲ್ಲಿ ಮತ್ತೆ ಆಗಮಿಸಿದ ಗುಂಪು ಭಗವಾ ಧ್ವಜಗಳೊಂದಿಗೆ ಬಂದು, ಕುಣಿದು ದಾಂದಲೆ ನಡೆಸಿ ಅವಾಚ್ಯ ಶಬ್ದಗಳಿಂದ ಜಾತಿ ನಿಂದನೆ ಮಾಡಿದ್ದಾರೆ” ಎಂದು ಪರಿಶಿಷ್ಟ ಜಾತಿಯ ಷಣ್ಮುಖ ಶರಣಪ್ಪ ಹೊಸದೊಡ್ಡಿ ಅವರು ಧನ್ನೂರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

“ಈ ಕುರಿತು ಧನ್ನೂರಾ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಇಬ್ಬರನ್ನು ಬಂಧಿಸಲಾಗಿದೆ. ತನಿಖೆ ಮುಂದುವರೆದಿದೆ” ಎಂದು ಧನ್ನೂರಾ ಪಿಎಸ್‌ಐ ಈದಿನ.ಕಾಮ್‌ ಜೊತೆಗೆ ಮಾತನಾಡಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪ್ರಮಾದ; ಪ್ರಯಾಣಿಕರ ʼದಾರಿ ತಪ್ಪಿಸುವʼ ನಾಮಫಲಕ!

“ಸ್ಥಳಕ್ಕೆ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೆನ್ನಬಸವಣ್ಣ ಲಂಗೋಟಿ ಭೇಟಿ ನೀಡಿ ಸಂವಿಧಾನ ಪೀಠಿಕೆ ಓದಿ, ಸಂವಿಧಾನ ಜಾಗೃತಿ ಕಾರ್ಯಕ್ರಮವನ್ನು ನೆರವೇರಿಸಿದರು. ಸದ್ಯ ಪರಿಸ್ಥಿತಿ ಶಾಂತವಾಗಿದ್ದು ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...