ಡಿಕೆಶಿ ಪ್ರಕರಣ ವಾಪಸ್ | ಸರ್ಕಾರದ ತೀರ್ಮಾನವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇನೆ: ಶಾಸಕ ಯತ್ನಾಳ್

Date:

ಆದಾಯ ಮೀರಿದ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ವಿರುದ್ಧ 2019ರಲ್ಲಿ ಸಿಬಿಐ ತನಿಖೆಗೆ ಬಿಎಸ್ ಯಡಿಯೂರಪ್ಪ ನೇತೃತ್ವದ ಅಂದಿನ ಬಿಜೆಪಿ ಸರ್ಕಾರ ನೀಡಿದ್ದ ಆದೇಶವನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಾಪಸ್ ಪಡೆದಿರುವುದಕ್ಕೆ ವಿಪಕ್ಷಗಳು ಕಿಡಿಕಾರಿದೆ.

ಈ ಬಗ್ಗೆ ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ‘ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ತೀರ್ಮಾನ ಅಕ್ರಮ. ಇದರ ಬಗ್ಗೆ ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇನೆ’ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಈಗಾಗಲೇ ಶೇ.90ರಷ್ಟು ಸಿಬಿಐ ತನಿಖೆ ಆಗಿದೆ. ಅವತ್ತಿನ ಕ್ಯಾಬಿನೆಟ್‌ನಲ್ಲಿದ್ದ ಮುಖ್ಯಸ್ಥರಿಗೆ ಮನಸ್ಸು ಇರಲಿಲ್ಲ. ಆದರೂ ನಮ್ಮ ಪಕ್ಷದ ಹಾಗೂ ಕೇಂದ್ರ ಸರ್ಕಾರದ ಒತ್ತಾಯದ ಮೇರೆಗೆ ಸಿಬಿಐ ತನಿಖೆಗೆ ಕೊಡಲು ನಿರ್ಣಯವಾಗಿತ್ತು. ಅದಾದ ಮೇಲೆ, ಜನಪ್ರತಿನಿಧಿ ನ್ಯಾಯಾಲಯದಲ್ಲಿ ಸಂಪೂರ್ಣವಾಗಿ ವಜಾಗೊಳಿಸಲಾಯಿತು. ಆ ಬಳಿಕ ಹೈಕೋರ್ಟ್‌ ಹಾಗೂ ಸುಪ್ರೀಂ ಕೋರ್ಟಿಗೂ ಹೋಯ್ತು. ಅಂತಿಮವಾಗಿ ತಡೆ ಆದೇಶ ತೆರವಾದ ಬಳಿಕ ಸಿಬಿಐ ತನಿಖೆ ಕೂಡ ಚುರುಕಾಗಿದೆ. ಈ ಮಧ್ಯೆ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದ ತೀರ್ಮಾನ ಅಕ್ರಮ’ ಎಂದು ಕಿಡಿಕಾರಿದರು.

ಇದನ್ನು ಓದಿದ್ದೀರಾ? ಡಿಕೆಶಿ ಪ್ರಕರಣ ವಾಪಸ್ | ಎಫ್‌ಐಆರ್ ಇಲ್ಲದೆಯೇ ಸಿಬಿಐಗೆ ವಹಿಸಿದ್ದ ಬಿಜೆಪಿ: ದಾಖಲೆ ತೋರಿದ ಪ್ರಿಯಾಂಕ್ ಖರ್ಗೆ

‘ಈಗಿನ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ವಕೀಲರಾಗಿ ಅವರ ಹಲವು ಭ್ರಷ್ಟಾಚಾರದ ಪ್ರಕರಣವನ್ನು ಕೈಗೆತ್ತುಕೊಂಡು ವಾದ ಮಂಡಿಸಿದ್ದರು. ಸರ್ಕಾರದ ಪ್ರಭಾವಿ ರಾಜಕಾರಣಿಯ ಖಾಸಗಿ ವಕೀಲರು ಅಡ್ವೋಕೇಟ್ ಜನರಲ್ ಆಗಿ ಡಿ.ಕೆ.ಶಿವಕುಮಾರ್ ಮೇಲೆ ನಡೆಯುತ್ತಿದ್ದ ಸಿಬಿಐ ತನಿಖೆಗೆ ಸರ್ಕಾರದ ಅನುಮತಿ ಹಿಂಪಡೆಯಬೇಕೆಂದು ಸಂಪುಟಕ್ಕೆ ಶಿಫಾರಸು ಮಾಡಿರಬಹುದು’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ದೂರಿದರು.

“ಒಂದು ವೇಳೆ ಸರ್ಕಾರ ಕ್ಯಾಬಿನೆಟ್ ತೀರ್ಮಾನವನ್ನು ವಾಪಸ್ ಪಡೆಯದಿದ್ದರೆ ನಾನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇನೆ. ಭ್ರಷ್ಟಾಚಾರ ಪ್ರಕರಣದಲ್ಲಿ ಯಾರೇ ಆರೋಪಿ ಇರಲಿ, ಅವರಿಗೆ ಕಠಿಣವಾದ ಶಿಕ್ಷೆ ಆಗಬೇಕು. ನಿಮ್ಮ ಸರ್ಕಾರವಿದೆ ಅಂದ ಮಾತ್ರಕ್ಕೆ ಭ್ರಷ್ಟಾಚಾರ ಪ್ರಕರಣವನ್ನು ಬೇಕಾಬಿಟ್ಟಿಯಾಗಿ ಹಿಂಪಡೆಯುವ ಅಧಿಕಾರ ಸರ್ಕಾರಕ್ಕೆ ಇಲ್ಲ. ಡಿಕೆ ಶಿವಕುಮಾರ್ ಪ್ರಕರಣದ ಎಲ್ಲ ಬೆಳವಣಿಗೆಯನ್ನು ಗಮನಿಸಿಕೊಂಡು, ನ್ಯಾಯವಾದಿಗಳ ಸಲಹೆ ಪಡೆದುಕೊಂಡು, ಸರ್ಕಾರದ ನಡೆಯನ್ನೂ ಕೂಡ ಗಮನಿಸಿಕೊಂಡು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸುತ್ತೇನೆ” ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...