ಬಿಜೆಪಿ-ಜೆಡಿಎಸ್‌ನವರಿಗೆ ಮಾಡಲು ಏನೂ ಕೆಲಸ ಇಲ್ಲ : ಡಿ ಕೆ ಶಿವಕುಮಾರ್

Date:

ಕುಮಾರಸ್ವಾಮಿ ಅವರು ಯತೀಂದ್ರ ಕುರಿತು ಹಂಚಿಕೊಂಡಿರುವ ವಿಡಿಯೋದಲ್ಲಿ ಎಲ್ಲಾದರೂ ವರ್ಗಾವಣೆ ಅಂತ ಪದ ಇದೆಯಾ? ಲಂಚದ ಬಗ್ಗೆ ಎಲ್ಲಿ ಮಾತನಾಡಿದ್ದಾರೆ? ಸುಮ್ಮನೇ ಪ್ರಚಾರ ಮಾಡಿ ನಮ್ಮ ಹುಡುಗನನ್ನು ಲೀಡರ್‌ ಮಾಡುತ್ತಿದ್ದಾರೆ. ಮಾಡಲಿ ಬಿಡಿ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, “ಬಿಜೆಪಿ ಮತ್ತು ಜೆಡಿಎಸ್‌ನವರಿಗೆ ಪಾಪ ಏನೂ ಕೆಲಸ ಇಲ್ಲ. ಯತೀಂದ್ರ ಅವರು ಕೆಡಿಪಿ ಸದಸ್ಯರಿದ್ದಾರೆ. ಆಶ್ರಯ ಸಮಿತಿ ಅಧ್ಯಕ್ಷರಾಗಿದ್ದಾರೆ. ಜನ ಸಂಪರ್ಕ ಸಭೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಕೆಲವು ಶಾಲೆಗಳಿಗೆ ಮೂಲಸೌಲಭ್ಯ ಕಲ್ಪಿಸುವ ವಿಚಾರವಾಗಿ ಯತೀಂದ್ರ ಮಾತನಾಡಿದ್ದಾರೆ” ಎಂದರು.

“ಮಹದೇವ ಎನ್ನುವ ಅಧಿಕಾರಿ ಮೇಲೆ ಸ್ಥಳೀಯರು ಆರೋಪ ಮಾಡಿದ್ದಾರೆ. ಆಶ್ರಯ ಕಮಿಟಿ ಅಧ್ಯಕ್ಷರಿಗೆ, ಬೇರೊಬ್ಬ ಎಂಎಲ್‌ಎಗಳಿಗೆ ಈ ರೀತಿ ಅಧಿಕಾರ ಇರುತ್ತದೆ. ಇದು ಕುಮಾರಸ್ವಾಮಿಗೆ ಅರ್ಥ ಆಗುವುದಿಲ್ಲವಾ” ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...