‌ಸಭಾಧ್ಯಕ್ಷ ಸ್ಥಾನವನ್ನು ಜಾತಿ, ಧರ್ಮದ ಆಧಾರದಲ್ಲಿ ನೋಡಬೇಡಿ: ಯು ಟಿ ಖಾದರ್

Date:

  • ಎಲ್ಲರೂ ಗೌರವ ಕೊಡುವುದು ನನಗಲ್ಲ, ಸಂವಿಧಾನ ಪೀಠಕ್ಕೆ: ಖಾದರ್‌
  • ‘ನನ್ನ ಸ್ಥಾನ ಎಲ್ಲ ಮೀರಿ ನೋಡಬೇಕಾದ ಸಂವಿಧಾನಬದ್ಧವಾದ ಸ್ಥಾನ’ 

‘ಮುಸ್ಲಿಂ ಸ್ಪೀಕರ್​ಗೆ ಬಿಜೆಪಿ ಶಾಸಕರು ನಮಸ್ಕರಿಸುವಂತೆ ಮಾಡಿದ್ದೇವೆ’ ಎಂಬುದಾಗಿ ಸಚಿವ ಜಮೀರ್ ಅಹ್ಮದ್ ನೀಡಿದ್ದಾರೆ ಎನ್ನಲಾದ ಹೇಳಿಕೆ ಈಗ ವಿವಾದದ ಸ್ವರೂಪ ಪಡೆದಿದೆ.

ಈ ಬಗ್ಗೆ ಮಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ವಿಧಾನಸಭಾಧ್ಯಕ್ಷ ಯು ಟಿ ಖಾದರ್, “ಎಲ್ಲರೂ ಗೌರವ ಕೊಡುವುದು ನನಗಲ್ಲ. ಅದು ಸಂವಿಧಾನ ಪೀಠಕ್ಕೆ, ಸಭಾಧ್ಯಕ್ಷ ಸ್ಥಾನಕ್ಕೆ. ಸಭಾಧ್ಯಕ್ಷ ಸ್ಥಾನವನ್ನು ಯಾವುದೇ ರಾಜಕೀಯ ಜಾತಿ, ಧರ್ಮದ ಆಧಾರದಲ್ಲಿ ನೋಡುವಂತಿಲ್ಲ” ಎಂದರು.

“ನಾನು ಎಲ್ಲರಿಗೂ ಸೇರಿರುವ ವಿಧಾನಸಭಾಧ್ಯಕ್ಷ. ನನ್ನ ಸ್ಥಾನ ಎಲ್ಲವನ್ನೂ ಮೀರಿ ನೋಡಬೇಕಾದ ಸಂವಿಧಾನ ಬದ್ಧವಾದ ಸ್ಥಾನಮಾನ. ಸಭಾಧ್ಯಕ್ಷ ಸ್ಥಾನದಲ್ಲಿ ಕುಳಿತುಕೊಳ್ಳುವವರು ಅದರ ಗೌರವ ಉಳಿಸಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಜೀವಮಾನದಲ್ಲಿಯೇ ಮತ್ತೆ ಅಧಿಕಾರ ಕೈಗೆ ಬಾರದು ಎಂಬ ವಾಸ್ತವ ಕುಮಾರಸ್ವಾಮಿ ನಿದ್ದೆಗೆಡಿಸಿದೆ: ಸಿದ್ದರಾಮಯ್ಯ

“ಸಭಾಧ್ಯಕ್ಷ ಸ್ಥಾನವನ್ನು ಪಕ್ಷವನ್ನು ಮೀರಿ ನೋಡಲು ಬಯಸುತ್ತೇನೆ. ಜಮೀರ್ ಅವರ ಹೇಳಿಕೆಗೆ ನಾನು ಏನೂ ಹೇಳಲು ಬಯಸುವುದಿಲ್ಲ.‌ ಜಾತಿಯ ಆಧಾರದಲ್ಲಿ ನನ್ನನ್ನು ಪೀಠದಲ್ಲಿ ಕುಳ್ಳಿರಿಸಲಿಲ್ಲ. ಅರ್ಹತೆಗೆ ಅನುಗುಣವಾಗಿ ಸ್ಥಾನವನ್ನು ನೀಡಿದ್ದಾರೆ‌. ಎಲ್ಲರಿಗೆ ಗೌರವ ನೀಡಿ ಈ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...