ಡಾ. ರಾಜ್‌ಕುಮಾರ್ ಅಪಹರಣ: 9 ಆರೋಪಿಗಳ ಖುಲಾಸೆ ಎತ್ತಿಹಿಡಿದ ಮದ್ರಾಸ್ ಹೈಕೋರ್ಟ್

Date:

ಕನ್ನಡದ ಹಿರಿಯ ನಟ ಡಾ. ರಾಜ್‌ಕುಮಾರ್ ಅಪಹರಣ ಪ್ರಕರಣದಲ್ಲಿ 9 ಜನರನ್ನು ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ತಾಳವಾಡಿ ಪೊಲೀಸರು ಸಲ್ಲಿಸಿದ್ದ ಮೇಲ್ಮನವಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪಿ.ವೇಲ್ಮುರುಗನ್ ಮತ್ತು ಎಂ.ಜ್ಯೋತಿರಾಮನ್ ಅವರಿದ್ದ ದ್ವಿಸದಸ್ಯ ಪೀಠ ಈ ಆದೇಶ ಹೊರಡಿಸಿದೆ.

26 ವರ್ಷದ ಹಿಂದೆ ಈರೋಡ್‌ ಜಿಲ್ಲೆಯ ತಾಳವಾಡಿ ಬಳಿ ತೋಟದ ಮನೆಯಲ್ಲಿ ತಂಗಿದ್ದ ರಾಜ್‌ಕುಮಾರ್ ಅವರನ್ನು ವೀರಪ್ಪನ್‌ ಮತ್ತು ಆತನ ಸಹಚರರು ಅಪಹರಿಸಿ ಒತ್ತೆಯಾಳಾಗಿ ಇಟ್ಟುಕೊಂಡಿದ್ದರು. 108 ದಿನಗಳ ನಂತರ ಬಿಡುಗಡೆ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಪ್ರೀಮಿಯಂ ಲೇಖನ | ಜಾಗತಿಕ ಆರ್ಥಿಕತೆಯ ಅವಳಿ ಅಸ್ತ್ರಗಳು: ಐಎಂಎಫ್, ವಿಶ್ವಬ್ಯಾಂಕ್‌ನ ಒಳಹೊರಗು

ಈ ಪ್ರಕರಣದಲ್ಲಿ ವೀರಪ್ಪನ್ ಮತ್ತು ಅವರ ಸಹಚರರಾದ ಸೇತುಕುಲಿ ಗೋವಿಂದನ್, ಚಂದ್ರಗೌಡರ್, ಮಲ್ಲು, ರಮೇಶ್, ಗೋವಿಂದರಾಜ್, ಆಂಡ್ರಿಲ್, ಪಸುವಣ್ಣ, ಪುಟ್ಟುಸ್ವಾಮಿ, ಕಲ್ಮಂಡಿ ರಾಮನ್, ಮಾರನ್, ಸೆಲ್ವನ್, ಅಮೃತಲಿಂಗಂ ಮತ್ತು ನಾಗರಾಜ್ ವಿರುದ್ಧ ತಾಳವಾಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಪ್ರಕರಣ ಸಂಬಂಧ ದೋಷಾರೋಪಪಟ್ಟಿ ಸಲ್ಲಿಸುವ ಮೊದಲೇ ವೀರಪ್ಪನ್ ಮತ್ತು ಆತನ ಸಹಚರರಾದ ಸೇತುಕುಳಿ ಗೋವಿಂದನ್, ಚಂದ್ರಗೌಡರ್ ಪೊಲೀಸ್‌ ಎನ್‌ಕೌಂಟರ್‌ನಲ್ಲಿ ಹತ್ಯೆಯಾಗಿದ್ದರು. ಮತ್ತೊಬ್ಬ ಆರೋಪಿ ಮಲ್ಲು ಪ್ರಕರಣದ ವಿಚಾರಣೆ ಹಂತದಲ್ಲಿ ಮೃತಪಟ್ಟಿದ್ದರು. ರಮೇಶ್ ಎಂಬಾತ ತಲೆಮರೆಸಿಕೊಂಡಿದ್ದನು.

2018ರ ಸೆಪ್ಟೆಂಬರ್ 25ರಂದು ತೀರ್ಪು ಪ್ರಕಟಿಸಿದ್ದ ಗೋಪಿಚೆಟ್ಟಿಪಾಳ್ಯಂ 3ನೇ ಸೆಷನ್ಸ್ ನ್ಯಾಯಾಲಯ ಉಳಿದ 9 ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶ ಹೊರಡಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...