ಬೆಂಗಳೂರು | ₹44 ಲಕ್ಷ ಮೌಲ್ಯದ ಮಾದಕ ವಸ್ತು ವಶ, 6 ಜನರ ಬಂಧನ

Date:

ಬೆಂಗಳೂರು ನಗರ ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡ ಕಾರ್ಯಾಚರಣೆ ನಡೆಸಿ 6 ಜನ ಮಾದಕವಸ್ತು ಮಾರಾಟಗಾರರನ್ನು ಬಂಧಿಸಿ, ಬರೋಬ್ಬರಿ 44 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದೆ” ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ ಹೇಳಿದ್ದಾರೆ.

ಮಂಗಳವಾರ ವಾರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಮೂರು ವಿದೇಶಿ ಮೂಲದ ಡ್ರಗ್ ಪೆಡ್ಲರ್‌ ಹಾಗೂ ಹೊರ ರಾಜ್ಯದ 3 ಡ್ರಗ್ ಪೆಡ್ಲರ್‌ಗಳು ಸೇರಿದಂತೆ ಒಟ್ಟು 6 ಜನರನ್ನು ವಶಕ್ಕೆ ಪಡೆಯಲಾಗಿದೆ. ಅವರಿಂದ ಒಟ್ಟು 44 ಲಕ್ಷ ಮೌಲ್ಯದ 54 ಗ್ರಾಂ ಎಂ.ಡಿ.ಎಂಎ ಕ್ರಿಸ್ಟೆಲ್, 410 ಗ್ರಾಂ ಹೈಡ್ರೋ ಗಾಂಜಾ. 18 ಕೆಜಿ. ಗಾಂಜಾ ಹಾಗೂ ಕೃತ್ಯಕ್ಕೆ ಬಳಸಲಾಗುತ್ತಿದ್ದ 4 ಮೊಬೈಲ್ ಫೋನ್‌ಗಳು ಹಾಗೂ 4 ಎಲೆಕ್ಟ್ರಾನಿಕ್ ತೂಕದ ಯಂತ್ರಗಳನ್ನು ವಶಪಡಿಸಿಕೊಂಡಿದ್ದಾರೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಫೆಬ್ರುವರಿ 29ರಂದು ಕುಮಾರ್‌ ಸ್ವಾಮಿ ಲೇಔಟ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಸರಣಿ ಚಿನ್ನಾಭರಣಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಕೈಗೊಂಡು ಆರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಕುಮಾರಸ್ವಾಮಿ ಲೇಔಟ್ ಠಾಣೆಯಲ್ಲಿ ದಾಖಲಾದ 8 ಕಳ್ಳತನದ ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಎಂಬುದು ಹೆಚ್ಚಿನ ತನಿಖೆಯಿಂದ ತಿಳಿದುಬಂದಿದೆ. ಅವರುಗಳಿಂದ 16,00,000 ಬೆಲೆ ಬಾಳುವ 383 ಗ್ರಾಂ ಚಿನ್ನದ ಸರಗಳನ್ನು ಮತ್ತು ಚಿನ್ನದ ಮಾಂಗಲ್ಯ ಸರಗಳನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

“ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯ ಪೊಲೀಸರು ಲ್ಯಾಪ್ ಟಾಪ್ ಮತ್ತು ಕ್ರೋಮ್ ಬಾಕ್ಸ್‌ಗಳು ಕಳ್ಳತನದ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆ.16 ರಂದು ಐವರನ್ನು ಬಂದಿಸಿದ್ದಾರೆ. ಈ ಪೈಕಿ ಇಬ್ಬರು ವ್ಯಕ್ತಿಗಳು ಅದೇ ಕಂಪನಿಯಲ್ಲಿ ಲ್ಯಾಪ್‌ಟಾಪ್ ಟೆಕ್ನಿಷಿಯನ್ ಆಗಿ ಕೆಲಸ ಮಾಡಿಕೊಂಡಿದ್ದರು. ಉಳಿದ ಮೂರು ವ್ಯಕ್ತಿಗಳು ಇವರ ಸಹಚರರಾಗಿದ್ದಾರೆ. ಒಟ್ಟು 16,00,000 ಮೌಲ್ಯದ ನಾನಾ ಕಂಪನಿಯ 29 ಲ್ಯಾಪ್ ಟಾಪ್‌ ಮತ್ತು 59 ಕ್ರೋಮ್ ಬಾಕ್ಸ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? 5, 8, 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ

“ಬೆಂಗಳೂರಿನ ಜೆ.ಪಿ.ನಗರ ಪೊಲೀಸ್ ಠಾಣೆಯಲ್ಲಿ ಮಾರ್ಚ್ 9ರಂದು ಎರಡು ಪ್ರತ್ಯೇಕ ಮನೆ ದರೋಡೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೂವರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅವರಿಂದ 414 ಗ್ರಾಂ ಚಿನ್ನದ ಒಡವೆ, 104ಗ್ರಾಂ ತೂಕದ ಬೆಳ್ಳಿ ವಸ್ತು ಹಾಗೂ 4 ವಿದೇಶಿ ಬ್ರ್ಯಾಂಡ್‌ನ ವಾಚ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ 28,00.000 ಆಗಿದೆ” ಎಂದು ವಿವರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...