ಮಹತ್ವದ ನಿರ್ಧಾರ ಕೈಗೊಂಡ ಕೆಎಸ್‌ಆರ್‌ಟಿಸಿ: ಪ್ರಯಾಣಿಕರ ಅಪಘಾತ ಪರಿಹಾರ ಮೊತ್ತ 3ರಿಂದ 10 ಲಕ್ಷಕ್ಕೆ ಹೆಚ್ಚಳ

Date:

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ)ವು ಮಹತ್ವದ ನಿರ್ಧಾರ ಕೈಗೊಂಡಿದ್ದು, ಪ್ರಯಾಣಿಕರ ಅಪಘಾತ ಪರಿಹಾರ ಮೊತ್ತವನ್ನು 3 ರಿಂದ 10 ಲಕ್ಷಕ್ಕೆ ಹೆಚ್ಚಳ ಮಾಡಿರುವುದಾಗಿ ತಿಳಿಸಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳು ಅಪಘಾತಕ್ಕೀಡಾದಾಗ, ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ದುರದೃಷ್ಟವಶಾತ್ ಮೃತಪಟ್ಟಲ್ಲಿ, ಮೃತ ಪ್ರಯಾಣಿಕರ ಅವಲಂಬಿತರಿಗೆ ಹೆಚ್ಚಿನ ಆರ್ಥಿಕ ನೆರವು ನೀಡುವ ಸದ್ದುದೇಶದಿಂದ ಪ್ರಯಾಣಿಕರ ಅಪಘಾತ ಪರಿಹಾರ ನಿಧಿ ಟ್ರಸ್ಟ್ ವತಿಯಿಂದ ಪ್ರಸ್ತುತ ನೀಡಲಾಗುತ್ತಿದ್ದ ಆರ್ಥಿಕ ಪರಿಹಾರ ಮೊತ್ತವನ್ನು ಮೂರು ಲಕ್ಷದಿಂದ ಹತ್ತು ಲಕ್ಷದವರೆಗೆ 2024ರ ಜನವರಿ ಒಂದರಿಂದ ಜಾರಿಗೆ ಬರುವಂತೆ ಹೆಚ್ಚಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಮಾಹಿತಿ ನೀಡಿದೆ.

“ಮೃತರ ಅವಲಂಬಿತರಿಗೆ ಹೆಚ್ಚುವರಿ ಪರಿಹಾರ ಮೊತ್ತವನ್ನು ನೀಡುವ ಸಲುವಾಗಿ ರೂ.50ರಿಂದ ರೂ.99ರವರೆಗಿನ ಮುಖ ಬೆಲೆಯ ಟಿಕೆಟ್ ಪಡೆದು ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರತಿ ಪ್ರಯಾಣಿಕರಿಂದ ತಲಾ ಒಂದು ರೂಪಾಯಿ ಹಾಗೂ ₹100 ಹಾಗೂ ಹೆಚ್ಚಿನ ಬೆಲೆಯ ಟಿಕೆಟ್ ಪಡೆದು ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರತಿ ಪ್ರಯಾಣಿಕರಿಂದ ತಲಾ ಎರಡು ರೂಪಾಯಿಯಂತೆ ಅಪಘಾತ ಪರಿಹಾರ ನಿಧಿ ವಂತಿಕೆ ಸಂಗ್ರಹಣೆಯನ್ನೂ ಕೂಡ ಜನವರಿ ಒಂದರಿಂದ ಆರಂಭಿಸಲಾಗುವುದು ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕನ್ನಡ ನಾಮಫಲಕ | ಅಧಿಸೂಚನೆ ಹೊರಡಿಸಿ, ಶೀಘ್ರದಲ್ಲೇ ನಿಯಮ ರೂಪಿಸಲು ಕ್ರಮ: ಸಿಎಂ ಸಿದ್ದರಾಮಯ್ಯ

ಈ‌ ಹಿಂದೆ ರೂ.100 ಮುಖ ಬೆಲೆಯ ಟಿಕೆಟ್ ಪಡೆದು ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಂದ ಒಂದು ರೂಪಾಯಿ ಅಪಘಾತ ಪರಿಹಾರ ನಿಧಿ ವಂತಿಕೆಯನ್ನು ಸಂಗ್ರಹಣೆ ಮಾಡಲಾಗುತ್ತಿತ್ತು. ಒಂದರಿಂದ ₹49ರ ವರೆಗಿನ ಮುಖ ಬೆಲೆಯ ಟಿಕೆಟ್ ಪಡೆದು ಪ್ರಯಾಣಿಸುವ ಪ್ರಯಾಣಿಕರಿಂದ ಯಾವುದೇ ಅಪಘಾತ ಪರಿಹಾರ ನಿಧಿ ವಂತಿಕೆ ಸಂಗ್ರಹಿಸುವುದಿಲ್ಲ. ಆದರೆ ದುರದೃಷ್ಟವಶಾತ್ ಅಪಘಾತದಲ್ಲಿ ಮೃತಪಟ್ಟಲ್ಲಿ ಪರಿಹಾರ ಮೊತ್ತವು ಅವರ ಅವಲಂಬಿತರಿಗೆ ದೊರಕಲಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ)ವು ಮಾಹಿತಿ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

ನಾಪತ್ತೆಯಾದ ಪ್ರತಿ ಜೀವವೂ ಮರಳಿ ತನ್ನ ಮನೆ ಸೇರುವಂತಾಗಲು ಮತ್ತು ಮುಂದಿನ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉದ್ದಿಮೆ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ರಸರೆಕ್ಷನ್: ಇಂದ್ರಿಯಗಳ ಮೂಲಕ ಒಂದು ಶತಮಾನದ ಸಿನೆಮಾ ಪಯಣ ಬಿಡಿಸಿಡುವ ಚಿತ್ರ

'ರಸರೆಕ್ಷನ್' ಸಿನಿಮಾ ಅಂತಿಮವಾಗಿ ಹೇಳುವುದೇನೆಂದರೆ ಬದುಕು ಎಷ್ಟೇ ದೀರ್ಘವಾಗಿದ್ದರೂ, ಕನಸುಗಳಿಲ್ಲದಿದ್ದರೆ ಅದು...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉಡುಪು ಉದ್ಯಮದಲ್ಲಿ ಜಿಲ್ಲೆಯ ಕುಶಲೆಯರು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...